ದೇರಳಕಟ್ಟೆ :ಎದೆಮಟ್ಟದ ನೀರಿನಲ್ಲಿ ತೆರಳಿ 40 ಮನೆಗಳಿಗೆ ಕಡಿತಗೊಂಡ ವಿದ್ಯುತ್ ಸರಿಪಡಿಸಿದ ಲೈನ್ ಮ್ಯಾನ್!
Twitter
Facebook
LinkedIn
WhatsApp
ಲೈನ್ಮ್ಯಾನ್ ಒಬ್ಬರು ಎದೆಮಟ್ಟದ ಮಳೆ ನೀರಿನಲ್ಲಿ ನಡೆದುಕೊಂಡು ವಿದ್ಯುತ್ ಸಂಪರ್ಕ ಸರಿಪಡಿಸಿದ್ದಾರೆ. ಇದೀಗ ಈ ವಿಡಿಯೋ ವೈರಲ್ ಆಗಿದ್ದು, ಪವರ್ ಮ್ಯಾನ್ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಮಂಗಳೂರು: ಜೂನ್ ತಿಂಗಳಲ್ಲಿ ಕೈಕೊಟ್ಟಿದ್ದ ಮಳೆರಾಯ ಇದೀಗ ಜುಲೈ ತಿಂಗಳ ಆರಂಭದಲ್ಲೇ ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯಾಗಿತ್ತಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಭಾರಿ ಗಾಳಿ ಮಳೆಗೆ ಹಲವೆಡೆ ಮರಗಳು ಮನೆ ಮೇಲೆ ಉರುಳಿ ಬಿದ್ದಿವೆ.
ಈ ಹಿನ್ನೆಲೆಯಲ್ಲಿ ಹಲವೆಡೆ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಭಾರಿ ಮಳೆಯಿಂದ ದೇರಳಕಟ್ಟೆಯಲ್ಲಿ ವಿದ್ಯುತ್ ಕೈಕೊಟ್ಟು ಶೇಕಡಾ 40ರಷ್ಟು ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತವಾಗಿತ್ತು. ಇದನ್ನು ಅರಿತ ಲೈನ್ ಮ್ಯಾನ್ ನೆರೆ ನೀರಿನಲ್ಲಿ ನಡೆದುಕೊಂಡು ಹೋಗಿ ವಿದ್ಯುತ್ ತಂತಿ ಸರಿಪಡಿಸಿದ್ದಾರೆ. ಎದೆಮಟ್ಟದ ನೀರಿನಲ್ಲಿ ನಡೆದುಕೊಂಡು ಹೋಗಿ ವಿದ್ಯುತ್ ತಂತಿ ಸರಿಪಡಿಸಿದ ಲೈನ್ಮ್ಯಾನ್ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.