ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ದೇಶವನ್ನು ಅಶಿಕ್ಷಿತ ನಾಯಕರು ಆಳುತ್ತಿದ್ದಾರೆ ಎಂದ ಬಾಲಿವುಡ್ ನಟಿ ಕಾಜೋಲ್ ; ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆದ ನಟಿ

Twitter
Facebook
LinkedIn
WhatsApp
images 4

ಮುಂಬೈ (ಜುಲೈ 9, 2023): ಬಾಲಿವುಡ್ ನಟಿ ಕಾಜೋಲ್‌ ಹೆಸರಾಂತ ನಟಿ ಎಂಬುದರಲ್ಲಿ ಎರಡು ಮಾತಿಲ್ಲ. ಇತ್ತೀಚೆಗೆ ವೆಬ್‌ಸೀರಿಸ್‌ ಒಂದರಲ್ಲೂ ಕಾಜೋಲ್‌ ದೇವಗನ್‌ ಕಾಣಿಸಿಕೊಳ್ಳುತ್ತಿದ್ದಾರೆ. ಕೋರ್ಟ್‌ ದೃಶ್ಯಗಳನ್ನು ಹೊಂದಿರುವ  ‘ದಿ ಟ್ರಯಲ್: ಪ್ಯಾರ್‌ ಕಾನೂನು ಧೋಖಾ’ ಎಂಬ ವೆಬ್‌ಸೀರಿಸ್‌ಗೂ ಮುನ್ನ ಸಂದರ್ಶನವೊಂದರಲ್ಲಿ ನಟಿ ಕಾಜೋಲ್‌ ನೀಡಿರುವ ಹೇಳಿಕೆಯೊಂಂದು ಟ್ರೋಲ್‌ ಆಗುತ್ತಿದೆ. ನೆಟ್ಟಿಗರು ಮಾತ್ರವಲ್ಲದೆ ಉದ್ಧವ್‌ ಠಾಕ್ರೆ ಬಣದ ಶಿವಸೇನೆ ಸಹ ಅವರ ಟ್ವೀಟ್‌ ವಿರುದ್ಧ ಟೀಕೆ ಮಾಡಿದೆ. ಕ್ವಿಂಟ್‌ ವೆಬ್‌ಸೈಟ್‌ಗೆ ನೀಡಿದ ಇತ್ತೀಚಿನ ಸಂದರ್ಶನದಲ್ಲಿ ಕಾಜೋಲ್, “ನಿಮ್ಮಲ್ಲಿ ಶೈಕ್ಷಣಿಕ ವ್ಯವಸ್ಥೆಯ ಹಿನ್ನೆಲೆ ಇಲ್ಲದ ರಾಜಕೀಯ ನಾಯಕರಿದ್ದಾರೆ” ಎಂದು ಹೇಳಿದ್ದರು. ಈ ಟ್ವೀಟ್‌ಗೆ ಶಿವಸೇನೆ (ಯುಬಿಟಿ) ನಾಯಕಿ ಪ್ರಿಯಾಂಕಾ ಚತುರ್ವೇದಿ ಅವರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಜುಲೈ 14 ರಂದು ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ಪ್ರಸಾರವಾಗಲಿರುವ ಈ ನೂತನ ವೆಬ್‌ಸೀರಿಸ್‌ ಬಗ್ಗೆ ಮಾಡಿದ ಸಂದರ್ಶನವೊಂದರಲ್ಲಿ ನಟಿ ಕಾಜೋಲ್‌ ದೇವಗನ್‌ ನೀಡಿದ ಹೇಳಿಕೆಗಳು ಟ್ರೋಲ್‌ ಆಗಿವೆ. ಈ ಸಂದರ್ಶನದಲ್ಲಿ, ಕಾಜೋಲ್ ದೇಶದಲ್ಲಿ ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುತ್ತಾ, “ಬದಲಾವಣೆ, ವಿಶೇಷವಾಗಿ ಭಾರತದಂತಹ ದೇಶದಲ್ಲಿ ನಿಧಾನವಾಗಿದೆ. ಇದು ತುಂಬಾ ನಿಧಾನವಾಗಿದೆ. ಏಕೆಂದರೆ ನಾವು ನಮ್ಮ ಸಂಪ್ರದಾಯಗಳಲ್ಲಿ ಮುಳುಗಿದ್ದೇವೆ ಮತ್ತು ನಮ್ಮ ಆಲೋಚನಾ ಪ್ರಕ್ರಿಯೆಗಳಲ್ಲಿ ಮುಳುಗಿದ್ದೇವೆ ಹಾಗೂ ಇದು ಶಿಕ್ಷಣದೊಂದಿಗೆ ಸಂಬಂಧಿಸಿದೆ’’ ಎಂದು ಹೇಳಿದ್ದರು.

ಹಾಗೂ, “ನಿಮ್ಮಲ್ಲಿ ಶೈಕ್ಷಣಿಕ ವ್ಯವಸ್ಥೆಯ ಹಿನ್ನೆಲೆ ಇಲ್ಲದ ರಾಜಕೀಯ ನಾಯಕರಿದ್ದಾರೆ. ನನ್ನನ್ನು ಕ್ಷಮಿಸಿ, ಆದರೆ ನಾನು ಈ ಬಗ್ಗೆ ಹೇಳುತ್ತೇನೆ. ನಾನು ನಾಯಕರಿಂದ ಆಳಲ್ಪಡುತ್ತಿದ್ದೇನೆ, ಅವರಲ್ಲಿ ಅನೇಕರು, ಅಂತಹ ದೃಷ್ಟಿಕೋನವನ್ನು ಹೊಂದಿಲ್ಲ. ಇಂತಹ ದೃಷ್ಟಿಕೋನವನ್ನು ಶಿಕ್ಷಣವು ನಿಮಗೆ ನೀಡುತ್ತದೆ ಎಂದು ನಾನು ಭಾವಿಸುತ್ತೇನೆ. ಇದು ಕನಿಷ್ಠ ವಿಭಿನ್ನ ದೃಷ್ಟಿಕೋನವನ್ನು ನೋಡುವ ಅವಕಾಶವನ್ನು ನೀಡುತ್ತದೆ’’ ಎಂದೂ ಕಾಜೋಲ್‌ ಹೇಳಿದರು.

ಇನ್ನು, ನಟಿಯ ಈ ಹೇಳಿಕೆಗೆ ಶಿವಸೇನೆ (ಯುಬಿಟಿ) ನಾಯಕಿ ಪ್ರಿಯಾಂಕಾ ಚತುರ್ವೇದಿಯವರಿಂದ ತೀಕ್ಷ್ಣವಾದ ಪ್ರತಿಕ್ರಿಯೆ ಪಡೆದಿದೆ. ಈ ಬಗ್ಗೆ ಟ್ವೀಟ್‌ ಮಾಡಿದ ಪ್ರಿಯಾಂಕಾ ಚತುರ್ವೇದಿ, “ಸೋ, ಕಾಜೋಲ್ ನಮ್ಮನ್ನು ಅಶಿಕ್ಷಿತ ಮತ್ತು ದೂರದೃಷ್ಟಿಯ ನಾಯಕರಿಂದ ಆಳುತ್ತಿದ್ದಾರೆ ಎಂದು ಹೇಳುತ್ತಾರೆ. ಆಕೆಯ ಅಭಿಪ್ರಾಯವು ಸತ್ಯವಾಗಿರಬೇಕಿಲ್ಲದ ಕಾರಣ ಯಾರೂ ಆಕ್ರೋಶ ವ್ಯಕ್ತಪಡಿಸುವುದಿಲ್ಲ ಮತ್ತು ಆಕೆ ಯಾರನ್ನೂ ಹೆಸರಿಸಿಲ್ಲ. ಆದರೆ ಎಲ್ಲಾ ಭಕ್ತರು ಆಕ್ರೋಶಗೊಂಡಿದ್ದಾರೆ” ಎಂದು ಟ್ವೀಟ್‌ ಮಾಡಿದ್ದಾರೆ.

ಅಲ್ಲದೆ, “ದಯವಿಟ್ಟು ನಿಮ್ಮ ಸಂಪೂರ್ಣ ರಾಜಕೀಯ ವಿಜ್ಞಾನದ ಜ್ಞಾನವನ್ನು ಯೇಲ್ ಮಾಡಬೇಡಿ” ಎಂದೂ ಶಿವಸೇನೆ (ಯುಬಿಟಿ) ನಾಯಕಿ ಹೇಳಿದರು.

ಅನೇಕ ನೆಟ್ಟಿಗರು ಕಾಜೋಲ್‌ ಹೇಳಿಕೆ ಪ್ರಶ್ನೆ ಮಾಡಿದ್ದು, ನಟಿ ಹಾಗೂ ಆಕೆಯ ಪತಿ ಅಜಯ್‌ ದೇವಗನ್‌ ಶೈಕ್ಷಣಿಕ ಅರ್ಹತೆ ಬಗ್ಗೆಯೂ ಕೆಲವರು ಪ್ರಶ್ನೆ ಮಾಡಿದ್ದಾರೆ. ನಟಿ ಕಾಜೋಲ್‌ ಕಾಲೇಜು ಮೆಟ್ಟಿಲನ್ನೇ ಹತ್ತಿಲ್ಲ. ಇನ್ನೊಂದೆಡೆ ಅಜಯ್‌ ದೇವಗನ್‌ ಕಾಲೇಜಿನಲ್ಲಿ ಡಿಗ್ರಿ ಪಡೆದುಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist