ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಜನತಾ ಪಕ್ಷದ ಶಾಸಕ ಈಶ್ವರ್ ಸಿಂಗ್ ಅವರಿಗೆ ಮಹಿಳೆಯಿಂದ ಕಪಾಳಮೋಕ್ಷ

Twitter
Facebook
LinkedIn
WhatsApp
350969469 183064871055882 4210959005622820116 n 1

ಚಂಡೀಗಢ: ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದ ಜನನಾಯಕ್ ಜನತಾ ಪಕ್ಷದ ಶಾಸಕ ಈಶ್ವರ್ ಸಿಂಗ್ ಅವರಿಗೆ ಮಹಿಳೆಯೊಬ್ಬಳು ಕಪಾಳಮೋಕ್ಷ ಮಾಡಿರುವ ಘಟನೆ ಹರಿಯಾಣದಲ್ಲಿ (Haryana) ನಡೆದಿದೆ.

ಮಳೆಯಿಂದ (Rain) ಪ್ರವಾಹ ಉಂಟಾಗಿದ್ದ ಕೈತಾಲ್‍ನ ಗುಹ್ಲಾ ಪ್ರದೇಶಕ್ಕೆ ಶಾಸಕರು ತೆರಳಿದ್ದರು. ಈ ವೇಳೆ ಕಳಪೆ ಒಳಚರಂಡಿ ವ್ಯವಸ್ಥೆಯಿಂದಾಗಿ ಈ ಪ್ರವಾಹ ಸೃಷ್ಟಿಯಾಗಿದೆ. ಅಲ್ಲದೇ ಶಾಸಕರ ಭೇಟಿ ತಡವಾಗಿದೆ ಎಂದು ಮಹಿಳೆ ಆರೋಪಿಸಿದ್ದಾಳೆ. ಅಲ್ಲದೇ ಭದ್ರತಾ ಸಿಬ್ಬಂದಿಯನ್ನು ಹಾಗೂ ಶಾಸಕರನ್ನು (MLA) ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೈರಲ್ ಆಗಿರುವ ವೀಡಿಯೊದಲ್ಲಿ ಮಹಿಳೆ ಮತ್ತು ಸ್ಥಳೀಯರು ನೀವು ಈಗ ಏಕೆ ಬಂದಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಇದಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ, ಮಹಿಳೆಯನ್ನು ಕ್ಷಮಿಸಿದ್ದೇನೆ. ಮಹಿಳೆಯ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳುವುದಿಲ್ಲ ಎಂದು ಹೇಳಿಕೊಂಡಿದ್ದಾರೆ.

ಹರಿಯಾಣದಲ್ಲಿ ನಿರಂತರ ಮಳೆಯಿಂದ ಉಂಟಾಗಿರುವ ಪ್ರವಾಹದಿಂದಾಗಿ 10 ಜನರು ಸಾವನ್ನಪ್ಪಿದ್ದಾರೆ. ಪ್ರವಾಹದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಪರಿಹಾರವನ್ನು ಘೋಷಿಸಲಾಗಿದೆ. ಆದರೆ ಸಾವು ನೋವುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಮನೋಹರ್‌ ಲಾಲ್‌ ಖಟ್ಟರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಮಳೆ ಪೀಡಿತ ಪ್ರದೇಶಗಳಲ್ಲಿ ಖಟ್ಟರ್ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಕಳೆದ ನಾಲ್ಕು ದಿನಗಳಿಂದ ಹರಿಯಾಣ, ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಪಂಜಾಬ್‍ನಲ್ಲಿ ನಿರಂತರ ಮಳೆಯ ಪರಿಣಾಮ ಹರಿಯಾಣದಲ್ಲಿನ ಪ್ರವಾಹಕ್ಕೆ ಕಾರಣವಾಗಿದೆ ಎಂದಿದ್ದಾರೆ. 

ಭಾರತದಲ್ಲಿ 20 ಲಕ್ಷಕ್ಕೆ ಕಾರು – ಕೇಂದ್ರದ ಜೊತೆ ಟೆಸ್ಲಾ ಮಾತುಕತೆ

ನವದೆಹಲಿ: ಭಾರತದಲ್ಲಿ ಎಲೆಕ್ಟ್ರಿಕ್‌ ಕಾರು ಘಟಕ (Electric Car Manufacturing Plant) ನಿರ್ಮಾಣ ಸಂಬಂಧ ಎಲಾನ್‌ ಮಸ್ಕ್‌ (Elon Musk) ಮಾಲೀಕತ್ವದ ಟೆಸ್ಲಾ (Tesla) ಕಂಪನಿ ಕೇಂದ್ರ ಸರ್ಕಾರದ ಜೊತೆ ಮಾತುಕತೆ ನಡೆಸುತ್ತಿದೆ.

ವಾರ್ಷಿಕ 5 ಲಕ್ಷ ಎಲೆಕ್ಟ್ರಿಕ್ ವಾಹನ ತಯಾರಿಸುವ ಸಾಮರ್ಥ್ಯದ ಘಟಕ ಸ್ಥಾಪನೆ ಸಂಬಂಧ ಹೂಡಿಕೆಯ ಪ್ರಸ್ತಾಪಕ್ಕಾಗಿ ಟೆಸ್ಲಾ ಭಾರತ ಸರ್ಕಾರದೊಂದಿಗೆ ಚರ್ಚೆಯನ್ನು ಪ್ರಾರಂಭಿಸಿದೆ ಎಂದು ಸರ್ಕಾರಿ ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ.

ಭಾರತದಲ್ಲಿ ತಯಾರಾಗುವ ಎಲೆಕ್ಟ್ರಿಕ್ ಕಾರಿನ ಬೆಲೆ 20 ಲಕ್ಷ ರೂ. ನಿಂದ ಆರಂಭವಾಗುವ ಸಾಧ್ಯತೆಯಿದೆ. ಇಂಡೋ-ಪೆಸಿಫಿಕ್ ಪ್ರದೇಶದ ದೇಶಗಳಿಗೆ ಭಾರತದಿಂದ (India) ಕಾರುಗಳನ್ನು ರಫ್ತು ಮಾಡಲು ಟೆಸ್ಲಾ ಮುಂದಾಗಿದೆ ಎಂದು ವರದಿಯಾಗಿದೆ.  

ಕಳೆದ ತಿಂಗಳು ಅಮೆರಿಕ ಪ್ರವಾಸದ ಸಂದರ್ಭದಲ್ಲಿ ಮಸ್ಕ್ ಅವರು ಪ್ರಧಾನಿ ಮೋದಿ (PM Narendra Modi) ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.

 

ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಸ್ಕ್‌, ಈ ಭೇಟಿ ನನಗೆ ರೋಮಾಂಚನಕಾರಿ ಅನುಭವ ನೀಡಿದೆ. ಅವರು ಕೆಲವು ವರ್ಷಗಳ ಹಿಂದೆ ನಮ್ಮ ಕಾರ್ಖಾನೆಗೆ ಭೇಟಿ ನೀಡಿದ್ದರು. ಇದರಿಂದಾಗಿ ಅವರ ಬಗ್ಗೆ ನನಗೆ ತಿಳಿದಿದೆ. ಅವರು ನನಗೆ ಭಾರತಕ್ಕೆ ಆಮಂತ್ರಣ ನೀಡಿದ್ದಾರೆ. ಶೀಘ್ರದಲ್ಲೇ ನಾನು ಭಾರತಕ್ಕೆ ಭೇಟಿ ನೀಡಲಿದ್ದೇನೆ ಎಂದು ತಿಳಿಸಿದ್ದರು.

ಮೋದಿಯವರು ನಿಜವಾಗಿಯೂ ಭಾರತದ ಬಗ್ಗೆ ಬಹಳಷ್ಟು ಕಾಳಜಿ ವಹಿಸುತ್ತಾರೆ. ಅಲ್ಲದೇ ಅವರು ಸರಿಯಾದ ನಿರ್ಧಾರಗಳನ್ನೇ ತೆಗೆದುಕೊಳ್ಳುತ್ತಾರೆ. ಈಗ ತಮ್ಮ ದೇಶದಲ್ಲಿ ಹೂಡಿಕೆ ಮಾಡಲು ನಮ್ಮನ್ನು ಒತ್ತಾಯಿಸುತ್ತಿದ್ದಾರೆ. ಇದು ಭಾರತದ ಅಭಿವೃದ್ಧಿಗೆ ಸಹಕಾರವಾಗಲಿದೆ. ಇದೇ ವರ್ಷದಲ್ಲಿ ಟೆಸ್ಲಾ ಕಾರ್ಖಾನೆಯನ್ನು ಭಾರತದಲ್ಲಿ ಸ್ಥಾಪಿಸಲು ಸ್ಥಳವನ್ನು ಗುರುತಿಸುವ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದರು.

2015ರಲ್ಲಿ ಅಮೆರಿಕ ಪ್ರವಾಸದ ವೇಳೆ ಪ್ರಧಾನಿ ಮೋದಿ ಟೆಸ್ಲಾ ಘಟಕಕ್ಕೆ ಭೇಟಿ ನೀಡಿ ಭಾರತದಲ್ಲೂ ಕಾರು ಉತ್ಪಾದನೆ ಮಾಡುವಂತೆ ಮಸ್ಕ್ ಬಳಿ ಮನವಿ ಮಾಡಿದ್ದರು. ಇದಾದ ಬಳಿಕ 2016ರಲ್ಲೇ ಟೆಸ್ಲಾ ಭಾರತಕ್ಕೆ ಬರುವುದಾಗಿ ಹೇಳಿತ್ತು. 2020ರ ಅಕ್ಟೋಬರ್‌ನಲ್ಲಿ ಟೆಸ್ಲಾದ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಕಂಪನಿಯು 2021ಕ್ಕೆ ಭಾರತಕ್ಕೆ ಕಾಲಿಡಲಿದೆ ಎಂದಿದ್ದರು. ಆದರೆ ಕೇಂದ್ರ ಸರ್ಕಾರ ಮತ್ತು ಟೆಸ್ಲಾ ಕಂಪನಿ ಜೊತೆ ತೆರಿಗೆ ವಿಚಾರದಲ್ಲಿ ತಿಕ್ಕಾಟ ನಡೆಯುತ್ತಿರುವ ಕಾರಣ ಭಾರತದಲ್ಲಿ ಇನ್ನೂ ಟೆಸ್ಲಾ ಕಾರು ಬಿಡುಗಡೆಯಾಗಿಲ್ಲ.

ಈಗಾಗಲೇ ಅಮೆರಿಕ, ಕೆನಡಾ, ಜರ್ಮನಿ, ಚೀನಾ, ಮೆಕ್ಸಿಕೋದಲ್ಲಿ ಟೆಸ್ಲಾ ಕಂಪನಿ ದೊಡ್ಡ ಫ್ಯಾಕ್ಟರಿ ತೆರೆದಿದೆ. ಏಷ್ಯಾ ಖಂಡದ ದೇಶಗಳಿಗೆ ಚೀನಾದಿಂದ ಕಾರುಗಳನ್ನು ರಫ್ತು ಮಾಡಲು ಮುಂದಾಗಿತ್ತು. ಟೆಸ್ಲಾದ ಈ ನೀತಿಗೆ ಭಾರತ ವಿರೋಧ ವ್ಯಕ್ತಪಡಿಸಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist