ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರೈಲ್ವೆ ನಿಲ್ದಾಣದಲ್ಲಿ ಮಲಗಿದ್ದ ಮಗುವಿಗೆ ಒದ್ದ ಪೊಲೀಸ್; ಕಾನ್ಸ್‌ಟೇಬಲ್‌ ಅಮಾನತು

Twitter
Facebook
LinkedIn
WhatsApp
46

ಉತ್ತರಪ್ರದೇಶ: ರೈಲು ನಿಲ್ದಾಣದ ಆವರಣದಲ್ಲಿ ಮಲಗಿದ್ದ ಮಗುವನ್ನು ಒದ್ದ ರೈಲ್ವೇ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.ಉತ್ತರ ಪ್ರದೇಶದ ಬಲ್ಲಿಯಾಜಿಲ್ಲಾದ ಬೆಲ್ಟಾರಾ ರೋಡ್ ರೈಲು ನಿಲ್ದಾಣದಲ್ಲಿ ನಡೆದ ಘಟನೆಯ ವಿಡಿಯೋ ಭಾನುವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಈಶಾನ್ಯ ರೈಲ್ವೆ ಇಲಾಖೆ, ‘ಈ ಘಟನೆ ಕುರಿತು ತಕ್ಷಣ ಕ್ರಮ ಕೈಗೊಂಡಿದ್ದೇವೆ. ಸಂಬಂಧಪಟ್ಟ ಪೇದೆಯನ್ನು ತಕ್ಷಣ ಅಮಾನತು ಮಾಡಲಾಗಿದೆ’ ಎಂದು ವೈರಲ್ ವಿಡಿಯೋಗೆ ಉತ್ತರಿಸಿದ್ದಾರೆ.

ಮಲಗಿದ್ದ ಮಗುವನ್ನು ಒದ್ದ ಕಾನ್‌ಸ್ಟೆಬಲ್ ಅನ್ನು ಈಶಾನ್ಯ ರೈಲ್ವೆಯ ವಾರಣಾಸಿ ಆರ್‌ಪಿಎಫ್ ವಿಭಾಗದ ಬಲೀಂದರ್ ಸಿಂಗ್ ಎಂದು ಅಧಿಕಾರಿಗಳು ಗುರುತಿಸಿದ್ದಾರೆ. ಅಮಾನತು ಮಾಡಿ ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ವಾರಣಾಸಿ ವಿಭಾಗದ ಪಿಆರ್‌ಒ ಅಶೋಕ್‌ ಕುಮಾರ್‌, ‘ಈ ಘಟನೆ ಯಾವಾಗ ನಡೆದಿದೆ ಎಂಬುದು ತಿಳಿದಿಲ್ಲ, ಆದರೆ ಘಟನೆಯ ಕುರಿತು ತನಿಖೆ ನಡೆಸಲಾಗುವುದು’ ಎಂದರು. ಮತ್ತೊಂದೆಡೆ, ಈ ಘಟನೆಗೆ ನೆಟಿಜನ್‌ಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗೆಳೆಯನ ಮುಂದೆಯೇ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ- ಆರೋಪಿಗಳ ಬಂಧನ

ಜೈಪುರ್: ಅಪ್ರಾಪ್ತ ಬಾಲಕಿಯ ಮೇಲೆ ಆಕೆಯ ಗೆಳೆಯನ ಮುಂದೆಯೇ ಸಾಮೂಹಿಕ ಅತ್ಯಾಚಾರವೆಸಗಿದ್ದ ಮೂವರು ಆರೋಪಿಗಳನ್ನು ರಾಜಸ್ಥಾನದ (Rajasthan) ಪೊಲೀಸರು (Police) ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಸಮಂದರ್ ಸಿಂಗ್, ಧರಂಪಾಲ್ ಸಿಂಗ್ ಮತ್ತು ಭಾತಮ್ ಸಿಂಗ್ ಎಂದು ಗುರುತಿಸಲಾಗಿದೆ. ಆರೋಪಿಗಳು ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಅತ್ಯಾಚಾರಕ್ಕೂ ಮುನ್ನ ಆರೋಪಿಗಳು ಬಾಲಕಿಯ ಗೆಳೆಯನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿ ಹಾಗೂ ಆಕೆಯ ಗೆಳೆಯ ಶನಿವಾರ ಅಜ್ಮೀರ್‍ನಿಂದ ರಾತ್ರಿ 10:30 ರ ಸುಮಾರಿಗೆ ಬಸ್‍ನಲ್ಲಿ ಜೋಧ್‍ಪುರಕ್ಕೆ ಬಂದಿದ್ದಾರೆ. ಬಳಿಕ ಉಳಿದುಕೊಳ್ಳಲು ರೂಮ್ ಪಡೆಯಲು ಅತಿಥಿ ಗೃಹಕ್ಕೆ ತೆರಳಿದ್ದರು. ಆದರೆ ಅಲ್ಲಿನ ಅತಿಥಿ ಗೃಹದ ಸಿಬ್ಬಂದಿ ಹುಡುಗಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ನಂತರ ಅಲ್ಲಿಂದ ಇಬ್ಬರೂ ತೆರಳಿದ್ದಾರೆ. ಅತಿಥಿ ಗೃಹದ ಹೊರಗೆ ನಿಂತಿದ್ದ ಇಬ್ಬರನ್ನೂ ಮಾತಾಡಿಸಿದ ಆರೋಪಿಗಳು ಉಳಿದುಕೊಳ್ಳಲು ವ್ಯವಸ್ಥೆ ಮಾಡುವ ಭರವಸೆ ನೀಡಿದ್ದಾರೆ. ಬಳಿಕ ರೈಲ್ವೇ ನಿಲ್ದಾಣಕ್ಕೆ ಕರೆದೊಯ್ಯುತ್ತಿರುವುದಾಗಿ ನಂಬಿಸಿ ಜೆಎನ್‍ವಿಯು ಕ್ಯಾಂಪಸ್ ಬಳಿಯ ಕ್ರೀಡಾಂಗಣಕ್ಕೆ ಕಳುಹಿಸಿದ್ದಾರೆ. ಅಲ್ಲಿ ಯುವಕನ ಮೇಲೆ ಹಲ್ಲೆ ನಡೆಸಿ ಬಾಲಕಿಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಅಲ್ಲದೇ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಅತಿಥಿಗೃಹದ ಮೇಲ್ವಿಚಾರಕನನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬೆಳಗ್ಗಿನ ಜಾವ ಜನ ಮೈದಾನಕ್ಕೆ ಜನ ವಾಕಿಂಗ್‍ಗೆ ಬರುತ್ತಿದ್ದಂತೆ ಆರೋಪಿಗಳು ಪರಾರಿಯಾಗಿದ್ದಾರೆ. ಈ ವೇಳೆ ಬಾಲಕಿಯ ಗೆಳೆಯ ವಾಯು ವಿಹಾರಕ್ಕೆ ತೆರಳಿದ್ದವರ ಬಳಿ ಸಹಾಯ ಕೇಳಿದ್ದಾನೆ. ನಂತರ ಅವರು ಕರೆ ಮಾಡಿ ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಳಿಕ ಪೊಲೀಸರು ಶ್ವಾನ ದಳ ಮತ್ತು ವಿಧಿ ವಿಜ್ಞಾನ ಪ್ರಯೋಗಾಲಯ (FSL) ತಂಡವನ್ನು ನಿಯೋಜಿಸಿ ಆರೋಪಿಗಳನ್ನು ಪತ್ತೆಹಚ್ಚಿದ್ದಾರೆ. ಆರೋಪಿಗಳನ್ನು ಸಿಸಿಟಿವಿ ದೃಶ್ಯಗಳ ಸಹಾಯದಿಂದ ಜೋಧ್‍ಪುರದ ಗಣೇಶಪುರದ ಮನೆಯೊಂದರಲ್ಲಿ ಅಡಗಿರುವುದನ್ನು ಖಚಿತ ಪಡಿಸಿಕೊಳ್ಳಲಾಯಿತು. ಬಂಧನಕ್ಕೆ ತೆರಳಿದ್ದ ವೇಳೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಈ ವೇಳೆ ಬಿದ್ದು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಸದಸ್ಯರಾಗಿದ್ದಾರೆ. ಜೈ ನಾರಾಯಣ ವ್ಯಾಸ್ ವಿಶ್ವವಿದ್ಯಾಲಯದ (ಜೆಎನ್‍ವಿಯು) ವಿದ್ಯಾರ್ಥಿ ಸಂಘದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ವಿದ್ಯಾರ್ಥಿ ನಾಯಕನ ಪರವಾಗಿ ಆರೋಪಿಗಳು ಪ್ರಚಾರ ನಡೆಸುತ್ತಿದ್ದರು ಎಂದು ಪೊಲೀಸರು ಆರೋಪಿಸಿದ್ದಾರೆ. ಆದರೆ ಎಬಿವಿಪಿ ಈ ಆರೋಪವನ್ನು ನಿರಾಕರಿಸಿದೆ.

ಆರೋಪಿಗಳು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಸದಸ್ಯರಾಗಿದ್ದಾರೆ. ಜೈ ನಾರಾಯಣ ವ್ಯಾಸ್ ವಿಶ್ವವಿದ್ಯಾಲಯದ (ಜೆಎನ್‍ವಿಯು) ವಿದ್ಯಾರ್ಥಿ ಸಂಘದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ವಿದ್ಯಾರ್ಥಿ ನಾಯಕನ ಪರವಾಗಿ ಆರೋಪಿಗಳು ಪ್ರಚಾರ ನಡೆಸುತ್ತಿದ್ದರು ಎಂದು ಪೊಲೀಸರು ಆರೋಪಿಸಿದ್ದಾರೆ. ಆದರೆ ಎಬಿವಿಪಿ ಈ ಆರೋಪವನ್ನು ನಿರಾಕರಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ