ಶನಿವಾರ, ಫೆಬ್ರವರಿ 22, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಹಿಳಾ ಟೆಕ್ಕಿ ನೇಣಿಗೆ ಶರಣು; ಮಾನಸಿಕ ಕಿರುಕುಳ ಆರೋಪ!

Twitter
Facebook
LinkedIn
WhatsApp
inbound8514922106174292686 1
ಬೆಂಗಳೂರು: ಮಹಿಳಾ ಟೆಕ್ಕಿಯೊಬ್ಬರು (Woman Techie) ಆತ್ಮಹತ್ಯೆಗೆ ಶರಣಾದ ಘಟನೆ ಸಿಲಿಕಾನ್ ಸಿಟಿಯ ಜೋಗುಪಾಳ್ಯದಲ್ಲಿ ನಡೆದಿದೆ.
ದಿವ್ಯಾ(30) ಆತ್ಮಹತ್ಯೆಗೆ ಶರಣಾದ ಟೆಕ್ಕಿ. ದಿವ್ಯಾ ಅವರು 2014 ರಲ್ಲಿ ಅರವಿಂದ್ ಎಂಬ ಟೆಕ್ಕಿಯನ್ನ ವಿವಾಹವಾಗಿದ್ದರು. ದಂಪತಿ ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಗಳಾಗಿದ್ದು, ಇಬ್ಬರು ಮಕ್ಕಳಿದ್ದಾರೆ.

ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ದಿವ್ಯಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾತ್ರಿ 10 ಗಂಟೆಯ ಬಳಿಕ ದಿವ್ಯಾ ರೂಮ್ ಡೋರ್ ಲಾಕ್ ಮಾಡಿಕೊಂಡಿದ್ದಾಳೆಂದು ಪತಿ ಅರವಿಂದ್ ಅತ್ತೆ ಮನೆಯವರಿಗೆ ಕರೆ ಮಾಡಿ ತಿಳಿಸಿದ್ದಾನೆ. ಕೂಡಲೇ ದಿವ್ಯಾ ಕುಟುಂಬಸ್ಥರು ಬಂದು ನೋಡಿದ ವೇಳೆ ಫ್ಯಾನಿಗೆ ನೇಣು ಬಿಗಿದುಕೊಂಡು ಸಾವನ್ನಪ್ಪಿರುವುದು ಬಯಲಾಗಿದೆ.

ಪತಿ ಹಾಗೂ ಆತನ ಕುಟುಂಬಸ್ಥರ ವಿರುದ್ಧ ಮೃತ ದಿವ್ಯಾ ಪೋಷಕರು ಕೊಲೆ ಆರೋಪ ಮಾಡುತ್ತಿದ್ದಾರೆ. ಮದುವೆಯ ನಂತರ ಗಂಡನ ಕುಟುಂಬಸ್ಥರು ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿದ್ದಾರೆ. ಸದ್ಯ ಘಟನೆ ಸಂಬಂಧ ಹಲಸೂರು ಪೊಲೀಸರು ಪತಿ ಅರವಿಂದ್‍ನನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೋಳಿ ರಕ್ತ ಗುಪ್ತಾಂಗಕ್ಕೆ ಹಚ್ಚಿಕೊಂಡು ಉದ್ಯಮಿ ವಿರುದ್ಧ ಸುಳ್ಳು ರೇಪ್‌ ಕೇಸ್‌ – ಕಿಲಾಡಿ ಲೇಡಿ ಗ್ಯಾಂಗ್‌ ಅರೆಸ್ಟ್‌

ಮುಂಬೈ: ಮಹಿಳೆಯೊಬ್ಬಳು (Women) ಕೋಳಿ ರಕ್ತ (Chicken Blood) ಬಳಸಿಕೊಂಡು 64 ವರ್ಷದ ಉದ್ಯಮಿ ವಿರುದ್ಧ ಸುಳ್ಳು ರೇಪ್‌ ಕೇಸ್‌ ದಾಖಲಿಸಿ ಈಗ ಪೊಲೀಸರಿಗೆ ತಗಲಾಕ್ಕೊಂಡಿರುವ ಘಟನೆ ಮುಂಬೈನಲ್ಲಿ (Mumbai) ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

2021ರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು (Mumbai Police) ಸ್ಥಳೀಯ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದಾಗ ಕೇಸ್‌ ಬೆಳಕಿಗೆ ಬಂದಿದೆ. ವಿವಿಧ ಖಾಸಗಿ ಹುದ್ದೆಗಳಲ್ಲಿರುವ ಮೋನಿಕಾ ಭಗವಾನ್‌ ಅಲಿಯಾಸ್‌ ದೇವ್‌ ಚೌಧರಿ, ಅನಿಲ್‌ ಚೌಧರಿ ಅಲಿಯಾಸ್‌ ಆಕಾಶ್‌, ಲುಬ್ನಾ ವಜೀರ್‌ ಅಲಿಯಾಸ್‌ ಸಪ್ನಾ ಆರೋಪಿಗಳಾಗಿದ್ದಾರೆ.

2019ರಲ್ಲಿ ಮೋನಿಕಾ ಮತ್ತು ಆಕೆಯ ಸಹಚರರು ಖಾಸಗಿ ವೀಡಿಯೋ ರೆಕಾರ್ಡ್‌ ಮಾಡಿದ್ದು, 64ರ ಉದ್ಯಮಿ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕುತ್ತಿದ್ದರು. ವೃದ್ಧನ ಬಳಿ ಎರಡು ವರ್ಷಗಳ ಅವಧಿಯಲ್ಲಿ 3.26 ಕೋಟಿ ಹಣ ವಸೂಲಿ ಮಾಡಿದರು. ಇದರಿಂದ ಬೇಸತ್ತಿದ್ದ ಉದ್ಯಮಿ 2021ರಲ್ಲಿ ಮಹಾರಾಷ್ಟ್ರದ ಸಹಾರ್‌ ಪೊಲೀಸ್‌ ಠಾಣೆಯಲ್ಲಿ ಮೋನಿಕಾ ಮತ್ತು ಆಕೆಯ ಸಹಚರರು ವಸೂಲಿ ಮಾಡಿರುವುದಾಗಿ ದೂರು ದಾಖಲಿಸಿದ್ದಾರೆ.

ಮುಂಬೈ ಗ್ಯಾಂಗ್‌ ಸ್ಕೆಚ್‌ ಹಾಕಿದ್ದೇ ರೋಚಕ?
ಮೋನಿಕಾ ಮತ್ತವರ ಸಹಚರರ ಗ್ಯಾಂಗ್‌ ಸ್ಕೆಚ್‌ ಹಾಕಿದ್ದನ್ನು ಕಂಡು ಪೊಲೀಸರೇ ದಂಗಾಗಿದ್ದಾರೆ. ಹೌದು. 2019ರಲ್ಲಿ ಹೆಸರು ಬಹಿರಂಗಪಡಿಸದ ಉದ್ಯಮಿ ಮುಂಬೈನ ಏರ್‌ಪೋರ್ಟ್‌ನ ಪಂಚತಾರಾ ಹೋಟೆಲ್‌ನಲ್ಲಿ ತಂಗಿದ್ದರು. ಈ ವೇಳೆ ಸಪ್ನಾ ಮತ್ತು ಮೋನಿಕಾ ಪರಿಚಯವಾಗಿದ್ದಾರೆ. ನಂತರ ಅವರೊಂದಿಗೆ ರಾತ್ರಿ ಔತಣ ಕೂಟಕ್ಕೆ ಸೇರಬಹುದೇ ಅಂತಾ ಕೇಳಿದ್ದಾರೆ. ಉದ್ಯಮಿ ಒಪ್ಪಿಕೊಂಡ ನಂತರ ರಾತ್ರಿ ಅವರ ಕೊಠಡಿಯಲ್ಲೇ ಊಟಕ್ಕೆ ಸೇರಿದ್ದಾರೆ.

ಊಟ ಮುಗಿದ ಸ್ವಲ್ಪ ಸಮಯದ ಬಳಿಕ ಸಪ್ನಾ ಕೆಲ ದಾಖಲೆಗಳನ್ನ ಹೋಟೆಲ್‌ ಲಾಭಿಯಲ್ಲಿ ಯಾರಿಗಾದ್ರೂ ಕೊಟ್ಟು ಬರುತ್ತೇನೆ ಅಂತಾ ರೂಮ್‌ ಬಾಗಿಲು ಹಾಕಿಕೊಂಡು ಹೊರಬಂದಿದ್ದಾಳೆ. ಅದೇ ಸಮಯಕ್ಕೆ ಮೋನಿಕಾ ವಾಶ್‌ರೂಮ್‌ ಒಳಗೆ ಹೋಗಿದ್ದಾಳೆ. ಸ್ವಲ್ಪ ಸಮಯದ ನಂತರ ಡೋರ್‌ ಬೆಲ್‌ ಸದ್ದು ಕೇಳಿ ಉದ್ಯಮಿ ಬಾಗಿಲು ತೆರೆಯಲು ಬಂದಿದ್ದಾನೆ. ಅದೇ ಸಮಯಕ್ಕೆ ಒಳಗಿದ್ದ ಮೋನಿಕಾ ಕಿಟಾರನೆ ಕಿರುಚಿಕೊಳ್ಳಲು ಶುರು ಮಾಡುತ್ತಿದ್ದಂತೆ, ಹೊರಗಿನಿಂದ ಬಂದ ಸಪ್ನಾ ವಿಡಿಯೋ ರೆಕಾರ್ಡ್‌ ಮಾಡಲು ಶುರು ಮಾಡಿದ್ದಾಳೆ. ವಾಶ್‌ ರೂಮ್‌ಗೆ ಹೋಗಿದ್ದ ಮೋನಿಕಾ ಕ್ಷಣ ಮಾತ್ರದಲ್ಲೇ ವಿವಸ್ತ್ರಳಾಗಿ ಬೆಡ್‌ಶೀಟ್‌ನಿಂದ ತನ ಮೈ ಮುಚ್ಚಿಕೊಂಡು ಕುಳಿತಿದ್ದದ್ದು ಕಂಡುಬಂದಿದೆ. ಅಲ್ಲದೇ ಬೆಡ್‌ಶೀಟ್‌ ಮೇಲೆ, ಆಕೆಯ ಗುಪ್ತಾಂಗ ಇತರ ಭಾಗಗಳಿಗೆ ರಕ್ತದ ಕಲೆಗಳಾಗಿರುವುದು ಕಂಡುಬಂದಿದೆ. ಇದನ್ನು ಕಂಡ ವೃದ್ಧ ಅಲ್ಲೇ ಶಾಕ್‌ ಆಗಿದ್ದಾನೆ.

ಅದೇ ಸಮಯಕ್ಕೆ ಮತ್ತೊಬ್ಬ ಆರೋಪಿ ಅನಿಲ್‌ ಸಹ ಅಲ್ಲಿಗೆ ಬಂದಿದ್ದಾನೆ. 10 ಕೋಟಿ ಹಣ ಕೊಡದಿದ್ದರೆ ಈ ವೀಡಿಯೋವನ್ನ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಕೊನೆಗೆ ಉದ್ಯಮಿ 75 ಲಕ್ಷ ಕೊಡಲು ಒಪ್ಪಿದ್ದಾನೆ. ಆತನಿಂದ ಆಗಾಗ್ಗೆ ಬೆದರಿಕೆ ಹಾಕಿ 2 ವರ್ಷಗಳಲ್ಲಿ 3.26 ಕೋಟಿ ವಸೂಲಿ ಮಾಡಿದ್ದಾರೆ. 1 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕೂಡ ವಸೂಲಿ ಮಾಡಿದ್ದರು. ಇದರಿಂದ ಬೇಸತ್ತ ಉದ್ಯಮಿ 2021ರ ನವೆಂಬರ್‌ 17ರಂದು ಸಹರ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ಕೇಸ್‌ ದಾಖಲಿಸಿಕೊಂಡ ಪೊಲೀಸರು ಮತ್ತೊಮ್ಮೆ ಹಣ ಸುಲಿಗೆ ಮಾಡುವ ಸಮಯಕ್ಕೆ ದಾಳಿ ಮಾಡಿ ಬಂಧಿಸಿದ್ದಾರೆ.

ತನಿಖೆ ವೇಳೆ ಮೋನಿಕಾ ಕೋಳಿ ರಕ್ತವನ್ನ ತಾನೇ ಗುಪ್ತಾಂಗಕ್ಕೆ ಹಚ್ಚಿಕೊಂಡಿದ್ದಾಳೆ, ಜೊತೆಗೆ ಬೆಡ್‌ಶೀಟ್‌ ಮೇಲೂ ಸುರಿದು ಬ್ಲ್ಯಾಕ್‌ ಮೇಲ್‌ ಮಾಡಿ ಹಣ ವಸೂಲಿ ಮಾಡಿರುವುದು ಸಾಬೀತಾಗಿದೆ. ಆರೋಪಿಗಳಿಂದ 49.35 ಲಕ್ಷ ರೂ. ವಶಕ್ಕೆ ಪಡೆದುಕೊಂಡಿದ್ದು, ಜೈಲಿಗಟ್ಟಲಾಗಿದೆ. ತನಿಖೆ ಮುಂದುವರಿದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist