ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Udupi: ನೀರಿನಲ್ಲಿ ಕೊಚ್ಚಿಹೋಗಿ ದಿನ ಕಳೆದರೂ ಇನ್ನೂ ಸಿಗದ ಶರತ್ ಮೃತದೇಹ, ಮುಳುಗು ತಜ್ಞರಿಂದ ಹುಡುಕಾಟ

Twitter
Facebook
LinkedIn
WhatsApp
Udupi: ನೀರಿನಲ್ಲಿ ಕೊಚ್ಚಿಹೋಗಿ ದಿನ ಕಳೆದರೂ ಇನ್ನೂ ಸಿಗದ ಶರತ್ ಮೃತದೇಹ, ಮುಳುಗು ತಜ್ಞರಿಂದ ಹುಡುಕಾಟ

Udupi : ಉಡುಪಿ ಜಿಲ್ಲೆಯ ಕೊಲ್ಲೂರು ಸಮೀಪ ಅರಶಿನಗುಂಡಿ ಜಲಪಾತ  (Arishinagundi falls) ವೀಕ್ಷಣೆಗೆಂದು ಹೋಗಿ ಬಂಡೆಯ ಮೇಲೆ ನಿಂತುಕೊಂಡು ಇನ್ಸ್ಟಾಗ್ರಾಂ ರೀಲ್ಸ್ ಮಾಡಲು ಹೋಗಿ ಕಾಲು ಜಾರಿ ಬಿದ್ದ ಭದ್ರಾವತಿಯ ಯುವಕ ಶರತ್​ ಮೃತದೇಹ ಇದುವರೆಗೂ ಪತ್ತೆಯಾಗಿಲ್ಲ.

ಭದ್ರಾವತಿ ಮೂಲದ ಶರತ್​ ಸ್ನೇಹಿತರೊಂದಿಗೆ ನಿನ್ನೆ ಅಂದರೆ ಜುಲೈ 24ರಂದು ಕೊಲ್ಲೂರು ಬಳಿ ಇರುವ ಅರಶಿನಗುಂಡಿ ಜಲಪಾತ ನೋಡಲು ಬಂದಿದ್ದು, ಈ ವೇಳೆ ಬಂಡೆಗಳ ಮೇಲೆ ನಿಂತು ರೀಲ್ಸ್​ ಮಾಡುವಾಗ ಕಾಲು ಜಾರಿ ನೀರಿಗೆ ಬಿದ್ದಿದ್ದಾರೆ. ಕೊಲ್ಲೂರು ದೇವಾಲಯ ಮತ್ತು ಹೊಸಂಗಡಿಗೆ ಹೋಗುತ್ತೇವೆ ಎಂದು ಮನೆಯಲ್ಲಿ ಹೇಳಿ ಬಂದು ಮಳೆಗಾಲ ಜಲಪಾತ ವೀಕ್ಷಿಸಲು ಹೋಗೋಣವೆಂದು ಸ್ನೇಹಿತರೆಲ್ಲ ಸೇರಿ ಅರಿಶಿನಗುಂಡಿ ಜಲಪಾತಕ್ಕೆ ಬಂದಿದ್ದಾರೆ.

40 ಗಂಟೆಯಾದರೂ ಸಿಗದ ಮೃತದೇಹ, ಕಾರ್ಯಾಚರಣೆ ಸ್ಥಗಿತ: ಶರತ್ ಬಿದ್ದ ಜಾಗದಲ್ಲಿ ಮತ್ತು ಸುತ್ತಮುತ್ತ ಸ್ಥಳಕ್ಕೆ ಮುಳುಗು ತಜ್ಞ ಈಶ್ವರ ಮಲ್ಪೆ, ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಭೇಟಿ ನೀಡಿ ಸತತ ಕಾರ್ಯಾಚರಣೆ ನಡೆಸಿದರೂ ಇನ್ನೂ ಯುವಕನ ಮೃತದೇಹ ಸಿಕ್ಕಿಲ್ಲ. ಕಾರ್ಯಾಚರಣೆ ಸಾಧ್ಯವಾಗದ ಹಿನ್ನೆಲೆಯಲ್ಲಿ ಮುಳುಗು ತಜ್ಞರು, ಪೊಲೀಸರು ವಾಪಸ್​ ಆಗಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶರತ್ ಸ್ನೇಹಿತರು, ಸುಮಾರು 8 ಗಂಟೆಗಳ ಕಾರ್ಯಚರಣೆ ಮಾಡಿದರು ಶರತ್ ನ ದೇಹಲ ಸಿಕ್ಕಿಲ್ಲ. ಅರಿಶಿನಗುಂಡಿ ಜಲಪಾತಕ್ಕೆ ಹೋಗುವ ಮೊದಲು ಸಿಗುವ ತೊರೆಯನ್ನು ದಾಟಲು ಸಾಧ್ಯವಾಗಲಿಲ್ಲ. ಇದರಿಂದ ಕಾರ್ಯಚರಣೆ ನಡೆಸಲು ಸಾಧ್ಯವಾಗದೆ ವಾಪಸ್ಸು ಬಂದಿದ್ದಾರೆ ಎಂದರು. 

ಇಂದು ಮಂಗಳವಾರವೂ ಶೋಧ ಕಾರ್ಯ ಮುಂದುವರಿಯಲಿದೆ ಎಂದು ಕೊಲ್ಲೂರು ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಜಯಶ್ರೀ ಹೊನ್ನೂರು ತಿಳಿಸಿದ್ದಾರೆ.

ಜಲಪಾತಕ್ಕೆ ಪ್ರವೇಶ ನಿಷೇಧ: ಮಳೆಗಾಲದಲ್ಲಿ ಈ ಪ್ರದೇಶದಲ್ಲಿ ಚಾರಣಕ್ಕೆ ನಿಷೇಧವಿದ್ದರೂ, ಕುದುರೆಮುಖ ವನ್ಯಜೀವಿ ವಿಭಾಗದ ವ್ಯಾಪ್ತಿಗೆ ಬರುವ ಕೊಲ್ಲೂರಿನ ಮೂಕಾಂಬಿಕಾ ವನ್ಯಜೀವಿಧಾಮದಲ್ಲಿರುವ ಜಲಪಾತವನ್ನು ತಲುಪುವ ಮುನ್ನ ಶರತ್ ಮತ್ತು ಆತನ ಸ್ನೇಹಿತ ಗುರುರಾಜ್ 6 ಕಿಲೋ ಮೀಟರ್ ನಡೆದುಕೊಂಡೇ ಹೋಗಿದ್ದಾರೆ. 

ಜಲಪಾತಕ್ಕೆ ಹೋಗಲು ಅನುಮತಿ ಇರಲಿಲ್ಲ. ಅಪಾಯದಲ್ಲಿ ಅವರಾಗಿಯೇ ಹೋಗಿದ್ದಾರೆ. ಎಲ್ಲಾ ಪ್ರವಾಸೋದ್ಯಮ ಇಲಾಖೆ ಗೊತ್ತುಪಡಿಸಿದ ಜಲಪಾತಗಳಲ್ಲಿ ಪ್ರವಾಸಿಗರು ಜಲಪಾತಗಳಿಗೆ ಇಳಿಯದಂತೆ ಎಚ್ಚರಿಕೆ ವಹಿಸಲು ಜಿಲ್ಲಾಡಳಿತವು ಸಿಬ್ಬಂದಿಯನ್ನು ನಿಯೋಜಿಸಿದೆ ಎಂದು ಉಡುಪಿ ಎಸ್ಪಿ ಅಕ್ಷಯ್ ಎಂ ಹಕೆ ಹೇಳಿದರು. ಕಾರ್ಕಳದ ಕುದುರೆಮುಖ ವನ್ಯಜೀವಿ ವಿಭಾಗದ ಡಿಸಿಎಫ್ ಗಣಪತಿ ಕೆ, ಮಳೆಗಾಲದಲ್ಲಿ ಎಲ್ಲಾ ಟ್ರೆಕ್ಕಿಂಗ್ ಮಾರ್ಗಗಳನ್ನು ಮುಚ್ಚಲಾಗುತ್ತದೆ ಎಂದು ತಿಳಿಸಿದರು. 

ಕೊಲ್ಲೂರಿನ ದಲಿ ಪ್ರದೇಶದಲ್ಲಿ ಗ್ರಾಮ ಅರಣ್ಯ ಸಮಿತಿಯ ಗಮನಕ್ಕೆ ಬಾರದೆ ಮೃತ ವ್ಯಕ್ತಿ ಹಾಗೂ ಆತನ ಸ್ನೇಹಿತರು ಜಲಪಾತಕ್ಕೆ ತೆರಳಿರಬಹುದು. ಇಂತಹ ದುಸ್ಸಾಹಸಕ್ಕೆ ಜನರು ಮುಂದಾಗಬಾರದು ಎಂದರು. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ