ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

BPL CARD: ಶೀಘ್ರದಲ್ಲೇ ಹೊಸ ಬಿಪಿಎಲ್ ಕಾರ್ಡ್ ಗಳನ್ನು ವಿತರಣೆ ಮಾಡಲಾಗುವುದು - ಕೆ.ಎಚ್‌ ಮುನಿಯಪ್ಪ

Twitter
Facebook
LinkedIn
WhatsApp
kh muniyappa BPL CARD

ಬೆಂಗಳೂರು: ಬಿಪಿಎಲ್ ಕಾರ್ಡ್ (BPL CARD) ಹೊಂದಲು ಇಚ್ಚಿಸುತ್ತಿರುವವರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಶೀಘ್ರದಲ್ಲೇ ಹೊಸ ಬಿಪಿಎಲ್ ಕಾರ್ಡ್ ಗಳ (BPL CARD) ವಿತರಣೆ ಮಾಡಲಾಗುತ್ತದೆ ಎಂದು ಹೇಳಿದೆ.ಈ ಕುರಿತು ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಅವರು, ‘ಬಿಪಿಎಲ್ ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಿರುವವರಿಗೆ ಕಾರ್ಡ್‌ಗಳನ್ನು ಆದಷ್ಟು ಬೇಗ ನೀಡುವ ಪ್ರಕ್ರಿಯೆಯನ್ನು ಸರ್ಕಾರ ನಡೆಸಲಿದೆ. ಎಲ್ಲ ಅರ್ಜಿಗಳನ್ನು ಪರಿಶೀಲಿಸಿ ಕಾರ್ಡ್ ವಿತರಿಸಲಾಗುವುದು ಎಂದು ಹೇಳಿದ್ದಾರೆ.

‘ಹೊಸದಾಗಿ ಬಿಪಿಎಲ್ ಕಾರ್ಡ್ ಕೋರಿ 3 ಲಕ್ಷ ಅರ್ಜಿಗಳು ಬಂದಿವೆ. ಇದರಲ್ಲಿ ಕೆಲವರು ಪಡಿತರ ಬೇಡ ಆರೋಗ್ಯ ಯೋಜನೆಗಳ ಲಾಭಕ್ಕಾಗಿ ಪಡಿತರ ಚೀಟಿ ನೀಡಿ ಎಂದು ಕೋರಿದ್ದಾರೆ. ಹಾಗಾಗಿ, ಇಂತಹವರಿಗೆ ಆದಷ್ಟು ಬೇಗ ಕಾರ್ಡ್ ನೀಡಲು ಕ್ರಮವಹಿಸಲಾಗುವುದು ಎಂದರು. ಆರೋಗ್ಯ ಯೋಜನೆಗಾಗಿ ಕಾರ್ಡ್ ಬಯಸಿರುವವರಿಗೆ ಬಿಪಿಎಲ್-ಎಬಿ ಎಂದು ನಮೂದಿಸಿ ಕಾರ್ಡ್ ನೀಡುವ ಚಿಂತನೆ ಇದೆ. ಇಂತಹವರಿಗೆ ಪಡಿತರ ಯೋಜನೆಯ ಲಾಭ ಇರುವುದಿಲ್ಲ. ಆದರೆ, ಆರೋಗ್ಯ ಯೋಜನೆಗೆ ಸಂಬಂಧಿಸಿದಂತೆ ಈ ಬಿಪಿಎಲ್‌ಕಾರ್ಡ್‌ನ್ನು ಬಳಸಿಕೊಳ್ಳಬಹುದು. ಆರೋಗ್ಯ ಯೋಜನೆಗಾಗಿಯೇ ಬಿಪಿಎಲ್ ಕಾರ್ಡ್‌ನ್ನು ವಿತರಿಸುವಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಆದಷ್ಟು ಬೇಗ ಕಾರ್ಡ್ ವಿತರಿಸಲು ಕ್ರಮಕೈಗೊಳ್ಳುವುದಾಗಿಯೂ ಅವರು ಹೇಳಿದರು.

ರಾಜ್ಯದಲ್ಲಿ ಸದ್ಯ 1.28 ಕೋಟಿ ಬಿಪಿಎಲ್ ಪಡಿತರದಾರರಿದ್ದು, ಇವರಲ್ಲಿ 97 ಲಕ್ಷ ಪಡಿತರದಾರರಿಗೆ ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿಯ ಹಣವನ್ನು ಅವರ ಖಾತೆಗೆ ವರ್ಗಾಯಿಸಲಾಗಿದೆ. ಉಳಿದ 30 ಲಕ್ಷ ಬಿಪಿಎಲ್ ಪಡಿತರದಾರರ ದತ್ತಾಂಶ ಮಾಹಿತಿಗಳು ಸರಿಯಿಲ್ಲ. ಇವೆಲ್ಲವನ್ನೂ ಸರಿಪಡಿಸಿ ಇವರಿಗೂ ಸಹ ಅನ್ನಭಾಗ್ಯ ಯೋಜನೆಯಡಿ ನಗದು ವರ್ಗಾವಣೆ ಯೋಜನೆಯ ಲಾಭ ಸಿಗುವಂತೆ ಕ್ರಮವಹಿಸಲಾಗುವುದು ಎಂದರು. 97 ಲಕ್ಷ ಬಿಪಿಎಲ್ ಕಾರ್ಡುದಾರರಿಗೆ 566 ಕೋಟಿ ರೂ.ಗಳನ್ನು ಅನ್ನಭಾಗ್ಯ ಯೋಜನೆಯಡಿ ವರ್ಗಾವಣೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಖರೀದಿಗೆ ರಾಜ್ಯಸರ್ಕಾರ ಪ್ರಯತ್ನ ನಡೆಸಿದ್ದು, ಅಕ್ಕಿ ಖರೀದಿಗೆ ಟೆಂಡರ್ ಕರೆಯುವ ಬಗ್ಗೆಯೂ ಚಿಂತನೆ ಇದೆ. ಆದಷ್ಟು ಬೇಗ ಅಕ್ಕಿ ಖರೀದಿಸಿ ಅಕ್ಕಿಯನ್ನು ವಿತರಿಸಲು ಕ್ರಮಕೈಗೊಳ್ಳಲಿದೆ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist