ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Thawar Chand: 10 ನಿಮಿಷ ತಡವಾಗಿದಕ್ಕೆ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರನ್ನು ಬಿಟ್ಟು ಹಾರಿದ ವಿಮಾನ!

Twitter
Facebook
LinkedIn
WhatsApp
Thawar Chand: 10 ನಿಮಿಷ ತಡವಾಗಿದಕ್ಕೆ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರನ್ನು ಬಿಟ್ಟು ಹಾರಿದ ವಿಮಾನ!

ಬೆಂಗಳೂರು: ಏರ್ಪೊಟ್​ಗೆ (airport) ಬರಲು 10 ನಿಮಿಷ ತಡವಾಗಿದ್ದಕ್ಕೆ ರಾಜ್ಯಪಾಲರನ್ನೆ ಏರ್ ಏಷ್ಯಾ ವಿಮಾನ ಬಿಟ್ಟು ಹೋಗಿದೆ.ಈ ಘಟನೆ ನಿನ್ನೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೂಟ್​ (Thawar Chand Geilot) ಕಾರ್ಯಕ್ರಮದ ನಿಮಿತ್ತ ಹೈದರಾಬಾದ್​ಗೆ ತೆರಳಬೇಕಿದ್ದ ಹಿನ್ನೆಲೆಯಲ್ಲಿ ನಿನ್ನೆ ಮಧ್ಯಾಹ್ನ 2 ಗಂಟೆಗೆ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಹೈದರಾಬಾದ್​ಗೆ ಏರ್ ಏಷ್ಯಾ ವಿಮಾನ ಟಿಕೆಟ್ ಬುಕ್ ಆಗಿತ್ತು.

ಆದರೆ ರಾಜ್ಯಪಾಲರು ಏರ್ಪೊರ್ಟ್​ಗೆ ಬರುವುದು 10 ನಿಮಿಷ ತಡವಾಗಿದ್ದಕ್ಕೆ ಏರ್ ಏಷ್ಯಾ ವಿಮಾನ ಟೇಕ್ ಆಫ್​ ಮಾಡಿದೆ. ನಂತರ ನಿನ್ನೆ ಮದ್ಯಾಹ್ನ 3.30 ಕ್ಕೆ ಮತ್ತೊಂದು ಏರ್ ಏಷ್ಯಾ ವಿಮಾನದಲ್ಲಿ ಹೈದರಾಬಾದ್​ಗೆ ತೆರಳಿದರು.

ಶಿಷ್ಟಚಾರ ಉಲ್ಲಂಘಿಸಿದ ಏರ್ ಏಷ್ಯಾ ವಿಮಾನದ ಅಧಿಕಾರಿಗಳ ವಿರುದ್ದ ರಾಜ್ಯಪಾಲರು ಗರಂ ಆಗಿದ್ದಾರೆ. ವಿಮಾನ ಯಾನ ಸಂಸ್ಥೆಯ ನಡೆಯಿಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೂಟ್ (thwar chand geilot) ಮುಜಗರಕ್ಕೆ ಒಳಗಾಗಿದ್ದಾರೆ. ರಾಜ್ಯದ ಪ್ರಥಮ ಪ್ರಜೆಯನ್ನು ಬಿಟ್ಟು ಹೋದ ಏರ್ ಏಷ್ಯಾ ವಿಮಾನದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕೆ ರಾಜ್ಯಪಾಲರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇಂದಿನಿಂದ ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಚಿಕ್ಕಮಗಳೂರು, ಜು.28: ರಾಜ್ಯಾದ್ಯಂತ ಮಳೆಯ ಅಬ್ಬರ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಅದರಂತೆ ಚಿಕ್ಕಮಗಳೂರು (Chikmagalur) ಜಿಲ್ಲೆಯ ಹಲವೆಡೆ ಭರ್ಜರಿ ಮಳೆಯಾಗುತ್ತಿರುವ ಹಿನ್ನಲೆ ಮಳೆಯಿಂದಾಗಿ ಚಂದ್ರದ್ರೋಣ ಪರ್ವತ(Chandradrona Parvata)ದ ಸಾಲಿನಲ್ಲಿ ಗುಡ್ಡ ಕುಸಿತವಾಗಿದೆ. ಪರಿಣಾಮ ರಸ್ತೆ ತೆರವು ಕಾರ್ಯ ಹಿನ್ನೆಲೆ ಇಂದಿನಿಂದ ಚಂದ್ರದ್ರೋಣ ಪರ್ವತಕ್ಕೆ ಜು.28ರವರೆಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಹೌದು, ಈ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ಮುಳ್ಳಯ್ಯನಗಿರಿ, ದತ್ತಪೀಠ, ಹೊನ್ನಮ್ಮನಹಳ್ಳ, ಕೆಮ್ಮಣ್ಣುಗುಂಡಿ, ಸೀತಾಳಯ್ಯನಗಿರಿ ಪ್ರವೇಶಕ್ಕೆ ಮುಂಜಾಗ್ರತಾ ಕ್ರಮವಾಗಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್​​ ಮಾಹಿತಿ ನೀಡಿದ್ದಾರೆ.

ವೀಕೆಂಡ್​ನಲ್ಲಿ ಹೆಚ್ಚಾಗಿ ಹರಿದು ಬರುತ್ತಿದ್ದ ಪ್ರವಾಸಿಗರು

ಚಿಕ್ಕಮಗಳೂರು ಅಂದರೆ ಪ್ರವಾಸಿಗರಿಗೆ ಹೇಳಿ ಮಾಡಿಸಿದ ಜಾಗ, ಹೀಗಾಗಿ ಲಕ್ಷಾಂತರ ಜನರು ಇಲ್ಲಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡುತ್ತಾರೆ. ಆದರೀಗ ಜಿಲ್ಲೆಯಲ್ಲಾಗುತ್ತಿರುವ ಮಹಾಮಳೆಗೆ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಆದರೂ ಪ್ರವಾಸಿಗರು ಇದನ್ನು ಲೆಕ್ಕಿಸದೇ ನೀರಿನ ಜೊತೆ ಸೆಲ್ಫಿ, ರೀಲ್ಸ್ ಹುಚ್ಚಾಟ ಮಾಡುತ್ತಿರುವುದು ಕಂಡುಬರುತ್ತಿದೆ. ಅದರಲ್ಲೂ ಚಾರ್ಮಾಡಿ ಘಾಟ್​ನಲ್ಲಿ ಪ್ರವಾಸಿಗರು ಅಪಾಯಕಾರಿ ಬಂಡೆ ಮೇಲೇರಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದು, ಇದು ಕಾಫಿನಾಡು ಚಿಕ್ಕಮಗಳೂರಿನ ಪೊಲೀಸರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಹೌದು, ಜಿಲ್ಲಾಡಳಿತ ಪ್ರವಾಸಿಗರಿಗೆ ನೀರು ಹರಿಯುತ್ತಿದೆ ಎಂದು ಸುಂದರ ಹಾಗೂ ಅಪಾಯದ ಸ್ಥಳದಲ್ಲಿ ಹುಚ್ಚಾಟ ಮಾಡಬೇಡಿ ಎಂದು ಮನವಿ ಮಾಡಿಕೊಂಡಿದೆ. ಆದ್ರೆ, ಪ್ರವಾಸಿಗರು ಮಾತ್ರ ಅದ್ಯಾವುದನ್ನೂ ಲೆಕ್ಕಿಸದೇ ಕಲ್ಲು ಬಂಡೆಗಳ ಮೇಲೆ ನಿಂತು ಫೋಟೋ, ರೀಲ್ಸ್​ ಮಾಡುತ್ತಿದ್ದಾರೆ. ಹೆಚ್ಚುತ್ತಿರುವ ಮಳೆಯಿಂದ ಭಾರಿ ಪ್ರಮಾಣದಲ್ಲಿ ಧರೆ ಕುಸಿದು ಬಿಳುತ್ತಿದೆ. ಇತ್ತ ಮುಳ್ಳಯ್ಯನಗಿರಿ ಮಾರ್ಗದ ರಸ್ತೆಗೆ ಮತ್ತೆ ಗುಡ್ಡ ಕುಸಿದುಬಿದ್ದಿದೆ. ಹೀಗಾಗಿ ಇದೀಗ ಜುಲೈ 31ರವರೆಗೆ ಪೊಲೀಸರು ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಿದ್ದಾರೆ. ಬಂದ ಪ್ರವಾಸಿಗರನ್ನ ತಡೆದು ವಾಪಸ್ ಕಳಿಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist