ಕೊಟ್ಟಿಗೆಹಾರ: ಮೂಡಿಗೆರೆಯಲ್ಲಿ ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ ಆಯೋಜನೆ
kottigehara: ಪಬ್ಲಿಕ್ ಇಂಪ್ಯಾಕ್ಟ್ ಖಾಸಗಿ ವಾಹಿನಿ ಆಯೋಜಿಸಿರುವ ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟವನ್ನು ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ದಿನಾಂಕ 30.07.2023ರಂದು ಆಯೋಜಿಸಲಾಗಿದೆ.
ಮಳೆಗಾಲದಲ್ಲಿ ಸಕ್ಕತ್ ಥ್ರಿಲ್ ಎನಿಸುವ ಹಲವಾರು ಆಟಗಳನ್ನು ಆಯೋಜಿಸಿದ್ದು, ಗೆದ್ದವರಿಗೆ ಭರ್ಜರಿ ಬಹುಮಾನವನ್ನೂ ಘೋಷಿಸಲಾಗಿದೆ.
ಪುರುಷರ ಹಗ್ಗಜಗ್ಗಾಟ(ಪ್ರಥಮ 10000, ದ್ವಿತೀಯ 5000, ತೃತೀಯ 3000), ಪುರುಷರ ವಾಲಿಬಾಲ್ (10000,5000,3000), ನೂರು ಮೀಟರ್ ಓಟ (1000,500,300), ಮಹಿಳೆಯರ ಹಗ್ಗಜಗ್ಗಾಟ (5000,3000,2000), ಮಹಿಳೆಯರ ಥ್ರೋಬಾಲ್ (5000,3000,2000) ಹಾಗೂ ಮಕ್ಕಳಿಗೆ, ಪುರುಷರಿಗೆ, ಮಹಿಳೆಯರಿಗೆ ಮೂರು ಕಾಲಿನ ಓಟ, ಲಿಂಬೆ ಚಮಚ ಓಟ, ನಿಧಿ ಹುಡುಕಾಟ ಸ್ಪರ್ಧೆ ಆಯೋಜಿಸಲಾಗಿದೆ.
Shimogga Flight Booking: ವಿಮಾನ ಹಾರಾಟದ ದಿನಾಂಕ ಪ್ರಕಟಿಸಿದ ಇಂಡಿಗೋ ಸಂಸ್ಥೆ
ಶಿವಮೊಗ್ಗ; ಈಗಾಗಲೇ ಲೋಕಾರ್ಪಣೆಗೊಂಡಿರುವ ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟಕ್ಕೆ ಮುಹೂರ್ತ ನಿಗದಿಯಾಗಿದೆ. ಈ ಮೂಲಕ ವಿಮಾನದಲ್ಲಿ ಹಾರಾಟ ನಡೆಸಬೇಕು ಎಂಬ ಮಲೆನಾಡಿನ ಜನರ ಕನಸು ನನಸಾಗಲಿದೆ.
ಈ ವರ್ಷದ ಫೆಬ್ರವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ್ದರು. ಆದರೆ ಇಲ್ಲಿಯ ತನಕ ಪ್ರಯಾಣಿಕ ವಿಮಾನಗಳ ಸಂಚಾರ ಆರಂಭವಾಗಿರಲಿಲ್ಲ. ಆಗಸ್ಟ್ 11ರಂದು ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟ ನಡೆಯಲಿದೆ. ಬೆಂಗಳೂರು-ಶಿವಮೊಗ್ಗ ನಡುವೆ ಇಂಡಿಗೋ ಸಂಸ್ಥೆಯ ವಿಮಾನ ಹಾರಾಟ ಆರಂಭಿಸಲಿದೆ. ಕೆಲವೇ ದಿನಗಳಲ್ಲಿ ಬುಕ್ಕಿಂಗ್ ಸಹ ಆರಂಭವಾಗಲಿದೆ.
ಇನ್ನು ಈ ಬಗ್ಗೆ ಇಂಡಿಗೋ ವಿಮಾನಯಾನ ಸಂಸ್ಥೆಯ ಹುಬ್ಬಳ್ಳಿ ವಿಭಾಗದ ಮುಖ್ಯಸ್ತ ಮನೋಜ್ ಪ್ರಭು ವಿಮಾನ ಹಾರಾಟದ ಬಗ್ಗೆ ಮಾಹಿತಿ ನೀಡಿದ್ದಾರೆ. “ಆಗಸ್ಟ್ 11ರಂದು ಶಿವಮೊಗ್ಗದ ಸೊಗಾನ ವಿಮಾನ ನಿಲ್ದಾಣದಿಂದ ಸಂಸ್ಥೆಯ ಮೊದಲ
ವಿಮಾನ ಬೆಂಗಳೂರಿಗೆ ಹಾರಾಟ ನಡೆಸಲಿದೆ” ಎಂದು ಹೇಳಿದ್ದಾರೆ.