ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿಗೆ ಬಿಜೆಪಿ ಉಪಾಧ್ಯಕ್ಷ ಪಟ್ಟ!

Twitter
Facebook
LinkedIn
WhatsApp
ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿಗೆ ಬಿಜೆಪಿ ಉಪಾಧ್ಯಕ್ಷ ಪಟ್ಟ!

ಉತ್ತರ ಪ್ರದೇಶದ (Uttar Pradesh) ಪಸ್ಮಾಂಡ ಮುಸ್ಲಿಂ ಸಮುದಾಯದ ತಾರಿಕ್ ಮನ್ಸೂರ್ ಜೆಎನ್‌ ಮೆಡಿಕಲ್‌ ಕಾಲೇಜಿನಿಂದ ವೈದ್ಯಕೀಯ ಪದವಿ ಪಡೆದ್ದಾರೆ. 1982ರಲ್ಲಿ  ಅದೇ ಕಾಲೇಜಿನಲ್ಲೇ ಎಂಎಸ್‌ ಓದಿದ್ದರು. ಉತ್ತರ ಪ್ರದೇಶ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯರಾಗಿರುವ ಮನ್ಸೂರ್‌ ಈ ವರ್ಷ ಉಪಕುಲಪತಿ ಹುದ್ದೆಗೆ ರಾಜೀನಾಮೆ ನೀಡಿದ್ದರು.

2017ರ ಮೇ 17 ರಂದು ಉಪ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ್ದ ಇವರ ಅಧಿಕಾರ ಅವಧಿ ಮೇ 2022ಕ್ಕೆ ಕೊನೆಯಾಗಬೇಕಿತ್ತು. ಆದರೆ ಕೋವಿಡ್‌ ಇತ್ಯಾದಿ ಕಾರಣಗಳಿಂದಾಗಿ ಕೇಂದ್ರ ಸರ್ಕಾರ ಇವರ ಅಧಿಕಾರ ಅವಧಿಯನ್ನು 1 ವರ್ಷ ವಿಸ್ತರಿಸಿತ್ತು. 

ಉತ್ತರ ಪ್ರದೇಶದ ಮತದಾರರ ಪೈಕಿ ಸರಿಸುಮಾರು 19% ರಷ್ಟು ಮುಸ್ಲಿಂ ಮತದಾರರಿದ್ದಾರೆ. ಕನಿಷ್ಠ 30 ಲೋಕಸಭಾ ಸ್ಥಾನಗಳಲ್ಲಿ ಗಣನೀಯ ಅಸ್ತಿತ್ವವನ್ನು ಹೊಂದಿರುವ ಮುಸ್ಲಿಮರು ಈ ಪೈಕಿ 15 ರಿಂದ 20 ಕ್ಷೇತ್ರಗಳಲ್ಲಿ ಫಲಿತಾಂಶವನ್ನು ನಿರ್ಧರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ.

ಎಎಂಯು ಉಪ ಕುಲಾಪತಿಯಾಗುವ ಮೊದಲು ತಾರಿಕ್ ಮನ್ಸೂರ್ ಜವಾಹರಲಾಲ್ ನೆಹರು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದರು. ಎಎಂಯುನಲ್ಲಿ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥರಾಗಿದ್ದ ಅವರು ಸುಮಾರು ನಾಲ್ಕು ದಶಕಗಳ ಬೋಧನೆ, ಸಂಶೋಧನೆ, ಕ್ಲಿನಿಕಲ್ ಮತ್ತು ಆಡಳಿತಾತ್ಮಕ ಅನುಭವ ಹೊಂದಿದ್ದಾರೆ.

ಮನ್ಸೂರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು 2023ರ ಪದ್ಮ ಪ್ರಶಸ್ತಿ ಸಮಿತಿಯ ಸದಸ್ಯರಾಗಿ ನಾಮನಿರ್ದೇಶನ ಮಾಡಿದ್ದರು.  ಭಾರತೀಯ ವೈದ್ಯಕೀಯ ಮಂಡಳಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಇವರು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ಲಕ್ನೋ), ಮೌಲಾನಾ ಆಜಾದ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ಮಂಡಳಿ (ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ, ಭಾರತ ಸರ್ಕಾರ) ಮತ್ತು ಶಿಕ್ಷಣ ಸಚಿವಾಲಯದ ಅಲ್ಪಸಂಖ್ಯಾತರ ಶಿಕ್ಷಣದ ರಾಷ್ಟ್ರೀಯ ಮೇಲ್ವಿಚಾರಣಾ ಸಮಿತಿಯಲ್ಲಿಯೂ ಸೇವೆ ಸಲ್ಲಿಸಿದ್ದಾರೆ.

ಉತ್ತರ ಅಮೆರಿಕ ಯುರೋಪ್, ಪಶ್ಚಿಮ ಏಷ್ಯಾ, ಆಗ್ನೇಯ ಏಷ್ಯಾ ಮತ್ತು ಆಫ್ರಿಕಾದ ಪ್ರಮುಖ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಸ್ಥೆಗಳಿಗೆ ತಾರಿಕ್ ಮನ್ಸೂರ್ ಭೇಟಿ ನೀಡಿದ್ದಾರೆ.

ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾದ ಮುಖ್ಯಸ್ಥ ಜಮಾಲ್ ಸಿದ್ದಿಕಿ ಪ್ರತಿಕ್ರಿಯಿಸಿ, ಮನ್ಸೂರ್ ಅವರು ರಾಷ್ಟ್ರೀಯ ಮುಸ್ಲಿಂ ಆಗಿದ್ದು, ಅವರು ಯಾವಾಗಲೂ “ದೇಶ ಮೊದಲು” ಎಂಬ ಆದರ್ಶವನ್ನು ಪ್ರಚಾರ ಮಾಡುತ್ತಿದ್ದಾರೆ. ಅವರು ಎಎಂಯು ವಿದ್ಯಾರ್ಥಿಗಳನ್ನು ಸರಿಯಾದ ಮಾರ್ಗದಲ್ಲಿ ಮುನ್ನಡೆಸಿದ್ದಾರೆ ಎಂದಿದ್ದಾರೆ.

ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಕೇಂದ್ರ ರಕ್ಷಣಾ ಸಚಿವ ಎಕೆ ಆಂಟನಿ (AK Antony) ಅವರ ಪುತ್ರ ಅನಿಲ್ ಆಂಟನಿ (Anil Antony) ಅವರಿಗೂ ಬಿಜೆಪಿ ಉಪಾಧ್ಯಕ್ಷ ಸ್ಥಾನ ನೀಡಿದೆ. ಕೇರಳದ ಕಾಂಗ್ರೆಸ್ (Kerala Congress) ನಾಯಕರಾಗಿದ್ದ ಅನಿಲ್ ಆಂಟನಿ ಅವರು 2002ರ ಗುಜರಾತ್ ಗಲಭೆಗಳು ಮತ್ತು ಪ್ರಧಾನಿ ನರೇಂದ್ರ ಮೋದಿಯ (Narendra Modi) ಕುರಿತು ಬಿಬಿಸಿಯ ಸಾಕ್ಷ್ಯಚಿತ್ರದ (BBC Documentary) ವಿವಾದದ ನಂತರ ಜನವರಿಯಲ್ಲಿ ಪಕ್ಷವನ್ನು ತೊರೆದಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist