ರಾಜ್ಯದಲ್ಲಿ ಹೆಚ್ಚುತ್ತಿರುವ ಕೆಂಗಣ್ಣು ಪ್ರಕರಣಗಳು ; ಮಕ್ಕಳು ಮತ್ತು ಯುವಕರಲ್ಲಿ ಹೆಚ್ಚು ಪತ್ತೆ - ಮಾರ್ಗಸೂಚಿ ಪ್ರಕಟ
ಬೆಂಗಳೂರು, ಜು 31 : ಕರ್ನಾಟಕದಲ್ಲಿ ಪಿಂಕ್ ಐ, ಕಾಂಜಂಕ್ಟಿವಿಟಿಸ್ ಅಥವಾ ಮದ್ರಾಸ್ ಐ ರೋಗ ಹೆಚ್ಚಾಗಿ ಮಕ್ಕಳಲ್ಲಿ ಕಂಡು ಬರುತ್ತಿದ್ದು, ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿ ಹೊರಡಿಸಿದೆ.
ಮದ್ರಾಸ್ ಐ ರೋಗ ಹೆಚ್ಚಾಗಿ ಇರುವುದರಿಂದ ಪೋಷಕರಲ್ಲಿ ಆತಂಕ ಹೆಚ್ಚಿದ್ದು, ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂಜರಿಯುತ್ತಿದ್ದಾರೆ.
ಇನ್ನು ಈ ರೋಗ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾದ ಹಿನ್ನೆಲೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿ ಹೊರಡಿಸಿದೆ.
ಕಣ್ಣು ಕೆಂಪಾಗುವುದು, ನೀರು ಸೋರುವಿಕೆ, ಅತಿಯಾದ ಕಣ್ಣೀರು, ಕಣ್ಣಿನಲ್ಲಿ ತುರಿಕೆ, ಬೆಳಕನ್ನು ನೋಡಲು ಸಾಧ್ಯವಾಗದೇ ಇರುವುದು, ದೃಷ್ಟಿ ಮಂಜಾಗುವುದು, ಸೊಂಕಿತ ವ್ಯಕ್ತಿಗಳಿಗೆ ಶೀತ, ಜ್ವರ, ಕೆಮ್ಮು ಇದ್ದಲ್ಲಿ ಕೂಡಲೇ ಚಿಕಿತ್ಸೆ ಪಡೆಯಬೇಕು, ತೀವ್ರ ಸೊಂಕು ಉಂಟಾದರೆ ತಕ್ಷಣವೇ ನೇತ್ರ ತಜ್ಞರನ್ನ ಭೇಟಿ ಮಾಡಬೇಕು.
ಇನ್ನು ಸ್ಪಚ್ಫವಾದ ನೀರಿನಿಂದ ಕಣ್ಣುಗಳನ್ನ ಶುಚಿಗೊಳಿಸಬೇಕು, ಸೊಂಕು ಕಂಡು ಬಂದ ತಕ್ಷಣವೇ ವೈದ್ಯರಿಂದ ಚಿಕಿತ್ಸೆ ಪಡೆಯಬೇಕು, ಸೊಂಕಿತ ವ್ಯಕ್ತಿಗಳು ಪೌಷ್ಟಿಕ ಆಹಾರ ಸೇವಿಸಬೇಕು, ಸೊಂಕಿತ ವ್ಯಕ್ತಿಗಳು ಶುಚಿಯಾದ ಕರವಸ್ತ್ರ ಬಳಸಬೇಕು.
ಬುಧವಾರದಿಂದ ರಾಜ್ಯಾದ್ಯಂತ ಡಯಾಲಿಸಿಸ್ ಸೇವೆ ಬಂದ್
ಬೆಂಗಳೂರು: ಬುಧವಾರದಿಂದ ರಾಜ್ಯಾದ್ಯಂತ ಡಯಾಲಿಸಿಸ್ (Dialysis) ಸೇವೆ ಬಂದ್ ಮಾಡಲು ರಾಜ್ಯ ಡಯಾಲಿಸಿಸ್ ನೌಕರರ ಸಂಘ ನಿರ್ಧರಿಸಿದೆ. ಇದರಿಂದಾಗಿ ಡಯಾಲಿಸಿಸ್ ರೋಗಿಗಳಿಗೆ ಆಪತ್ತು ಉಂಟಾಗುವ ಆತಂಕ ಶುರುವಾಗಿದೆ.
ಕಳೆದ ಎರಡು ವರ್ಷಗಳಿಂದ ಸರಿಯಾದ ವೇತನ ನೀಡದಿರುವುದು ಹಾಗೂ ಕೆಲ ಸೌಲಭ್ಯಗಳನ್ನು ನೀಡದ ಹಿನ್ನೆಲೆ, ರಾಜ್ಯಾದ್ಯಂತ ಡಯಾಲಿಸಿಸ್ ವಿಭಾಗಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ ಬೆಂಗಳೂರಿನ (Bengaluru) ಫ್ರೀಡಂ ಪಾರ್ಕ್ನಲ್ಲಿ (Freedom Park) ಅನಿರ್ಧಿಷ್ಟಾವಧಿ ಪ್ರತಿಭಟನೆ (Protest) ಮಾಡಲು ನಿರ್ಧಾರ ಮಾಡಿದ್ದಾರೆ.
ರಾಜ್ಯದ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಒಟ್ಟು 167 ಡಯಾಲಿಸಿಸ್ ಕೇಂದ್ರಗಳಿದ್ದು, 1 ಸಾವಿರಕ್ಕೂ ಅಧಿಕ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಬೆಂಗಳೂರಿನ (Bengaluru) ಫ್ರೀಡಂ ಪಾರ್ಕ್ನಲ್ಲಿ (Freedom Park) ಅನಿರ್ಧಿಷ್ಟಾವಧಿ ಪ್ರತಿಭಟನೆ (Protest) ಮಾಡಲು ನಿರ್ಧಾರ ಮಾಡಿದ್ದಾರೆ. ಹೊರ ಗುತ್ತಿಗೆ ಆಧಾರದ ಮೇಲೆ ಡಯಾಲಿಸಿಸ್ ನೌಕರರು ಕಾರ್ಯ ನಿರ್ವಹಿಸುತ್ತಿದ್ದಾರೆ. ಬಿಆರ್ಎಸ್ ಮತ್ತು ಸಂಜೀವಿನಿ ಸಂಸ್ಥೆಗಳ ಅಡಿಯಲ್ಲಿ ಕೆಲಸ ಮಾಡುತ್ತಿರುವ ಡಯಾಲಿಸಿಸ್ ನೌಕರರು ಕಳೆದ ವರ್ಷ ಅಕ್ಟೋಬರ್ನಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಮಾಡಿ ಸರ್ಕಾರದ ಗಮನ ಸೆಳೆದಿದ್ದರು.