ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಮೈಸೂರಿಗೆ ಭೇಟಿ
ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಇಂದು (ಶನಿವಾರ) ಮೈಸೂರಿಗೆ (Mysuru) ಭೇಟಿ ನೀಡಲಿದ್ದು, ವಿಶೇಷ ವಿಮಾನದ ಮೂಲಕ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.
ಬಳಿಕ ಮೈಸೂರಿನಿಂದ ಹೆಲಿಕಾಪ್ಟರ್ ಮೂಲಕ ತಮಿಳುನಾಡಿನ (Tamil Nadu) ಮಧು ಮಲೈ ಹುಲಿ ಸಂರಕ್ಷಿತ ಅರಣ್ಯ ವ್ಯಾಪ್ತಿಯ ತೆಪ್ಪಕಾಡು ಆನೆ ಶಿಬಿರಕ್ಕೆ ಭೇಟಿ ನೀಡಲಿದ್ದು, ಆಸ್ಕರ್ ಪ್ರಶಸ್ತಿ ವಿಜೇತ ಕಾವಾಡಿಗ ದಂಪತಿ ಬೊಮ್ಮ, ಬೆಳ್ಳಿ ಜೊತೆ ಕಾವಾಡಿಗರು, ಮಾವುತರ ಜೊತೆ ಸಂವಾದ ನಡೆಸಲಿದ್ದಾರೆ.
ನಂತರ 5:45ರ ಸುಮಾರಿಗೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ದೆಹಲಿಗೆ (Delhi) ಪ್ರಯಾಣ ಬೆಳೆಸಲಿದ್ದಾರೆ. ಮುರ್ಮು ಮೈಸೂರು ಆಗಮನದ ವೇಳೆ ಮೈಸೂರು ಜಿಲ್ಲಾಡಳಿತ ರಾಷ್ಟ್ರಪತಿಗೆ ಸ್ವಾಗತ ಕೋರಲಿದೆ.
ಲೋಕಸಭೆಯಲ್ಲಿ ದೆಹಲಿ ಸೇವಾ ಮಸೂದೆ ಅಂಗೀಕಾರ: ಮತದಾನದ ವೇಳೆ ವಿಪಕ್ಷ ಸಂಸದರಿಂದ ಸಭಾತ್ಯಾಗ
ದೆಹಲಿ ಆಗಸ್ಟ್ 03: ದೆಹಲಿಯಲ್ಲಿ ಸೇವೆಗಳ ನಿಯಂತ್ರಣಕ್ಕಾಗಿ ಸುಗ್ರೀವಾಜ್ಞೆಯನ್ನು ಬದಲಿಸುವ ಮಸೂದೆ ಲೋಕಸಭೆಯಲ್ಲಿ ಅಂಗೀಕಾರವಾಗಿದೆ. ದೆಹಲಿ ಸುಗ್ರೀವಾಜ್ಞೆ ಮಸೂದೆ (Delhi Ordinance Bill) ಅಥವಾ ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ ಸರ್ಕಾರ (ತಿದ್ದುಪಡಿ) ಮಸೂದೆ, 2023 ಅನ್ನು ಲೋಕಸಭೆಯಲ್ಲಿ (Lok Sabha) ಸುಮಾರು ನಾಲ್ಕು ಗಂಟೆಗಳ ಕಾಲ ನಡೆದ ಚರ್ಚೆಯ ನಂತರ ಅಂಗೀಕರಿಸಲಾಯಿತು. ಈ ನಾಲ್ಕು ಗಂಟೆಗಳ ಅವಧಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಎಲ್ಲಾ ಸಂಸದರಿಗೆ ಉತ್ತರಿಸಿದರು.
ಮಸೂದೆಯನ್ನು ತರಲು ಹೊರಟಿರುವ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ಕೈಜೋಡಿಸಿರುವ ವಿರೋಧ ಪಕ್ಷದ ಮೈತ್ರಿ ಇಂಡಿಯಾ ವಿರುದ್ಧ ವಾಗ್ದಾಳಿ ನಡೆಸಿದ ಶಾ, ಮಸೂದೆ ಅಂಗೀಕಾರವಾದರೆ ಪ್ರತಿಪಕ್ಷಗಳ ಮೈತ್ರಿ ಕುಸಿಯುತ್ತದೆ ಎಂದು ಹೇಳಿದ್ದಾರೆ.
ಕೇಂದ್ರಾಡಳಿತ ಪ್ರದೇಶಗಳು ಮತ್ತು ದೆಹಲಿಯಲ್ಲಿ ಕಾನೂನು ರೂಪಿಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇದೆ, ಕೇಂದ್ರಾಡಳಿತ ಪ್ರದೇಶವಾಗಿರುವುದರಿಂದ ನಿಯಮಗಳನ್ನು ರೂಪಿಸುವ ಸಂಪೂರ್ಣ ಹಕ್ಕು ಕೇಂದ್ರಕ್ಕೆ ಇದೆ ಎಂದಿದ್ದಾರೆ ಕೇಂದ್ರ ಗೃಹ ಸಚಿವರು.
ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ ಸರ್ಕಾರದ (ತಿದ್ದುಪಡಿ) ಮಸೂದೆ, 2023, ನಗರ ಸರ್ಕಾರದಲ್ಲಿ ಹಿರಿಯ ಅಧಿಕಾರಿಗಳ ವರ್ಗಾವಣೆ ಮತ್ತು ಪೋಸ್ಟಿಂಗ್‌ಗಳನ್ನು ನಿರ್ವಹಿಸಲು ಹೊರಡಿಸಲಾದ ಸುಗ್ರೀವಾಜ್ಞೆಯನ್ನು ಬದಲಿಸುವ ಮಸೂದೆಯನ್ನು ಮಂಡಿಸುವ ಹೊತ್ತಲ್ಲಿ ವಿರೋಧ ಪಕ್ಷಗಳು ಸಭಾತ್ಯಾಗ ಮಾಡಿವೆ
ಎಎಪಿ ಸಂಸದ ಸುಶೀಲ್ ಕುಮಾರ್ ರಿಂಕು ಅಮಾನತು
ಅಶಿಸ್ತಿನ ವರ್ತನೆಗಾಗಿ ಮಾನ್ಸೂನ್ ಅಧಿವೇಶನದ ಮುಂದಿನ ಕಲಾಪಗಳಿಗೆ ಎಎಪಿ ಸದಸ್ಯ ಸುಶೀಲ್ ಕುಮಾರ್ ರಿಂಕು ಅವರನ್ನು ಲೋಕಸಭೆ ಅಮಾನತು ಮಾಡಿದೆ. ದೆಹಲಿ ಸುಗ್ರೀವಾಜ್ಞೆ ಮಸೂದೆ, 2023 ರ ಚರ್ಚೆಯಲ್ಲಿ ಅವರು ಸದನದ ಅಂಗಳಕ್ಕೆ ಹೋಗಿ ಅಧ್ಯಕ್ಷರ ಮೇಲೆ ಕಾಗದಗಳನ್ನು ಎಸೆದ ನಂತರ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಬಿಜೆಪಿ
ಪ್ರತಿಪಕ್ಷಗಳಿಗೆ ನಾಚಿಕೆಯಾಗಬೇಕು. ಅವರಿಗೆ ಮತ ಚಲಾಯಿಸುವ ಧೈರ್ಯವಿಲ್ಲ, ಆದ್ದರಿಂದ ಅವರು ಮತದಾನದಲ್ಲಿ ಭಾಗವಹಿಸಲಿಲ್ಲ. ಅವರು ಒಂಬತ್ತು ಮಸೂದೆಗಳನ್ನು ಚರ್ಚಿಸಲಿಲ್ಲ ಆದರೆ ಅವರು ತಮ್ಮ ಮೈತ್ರಿಯನ್ನು ರಕ್ಷಿಸಲು ಈ ಮಸೂದೆಯನ್ನು ಚರ್ಚಿಸಲು ಬಂದರು. ಈ ಮಸೂದೆಯನ್ನು ವಿರೋಧಿಸಿ ಅವರು ಆದರೆ ಹೊರನಡೆದಿದ್ದಾರೆ. ದೆಹಲಿ ಸರ್ಕಾರವನ್ನು ಬೆಂಬಲಿಸಿದ ಕಾಂಗ್ರೆಸ್ ಮತದಾನದಲ್ಲಿ ಭಾಗವಹಿಸಲಿಲ್ಲ, ನೀವು ಹೊರನಡೆದರೆ ನೀವು ಮಸೂದೆಯನ್ನು ಬೆಂಬಲಿಸುತ್ತೀರಿ ಎಂದರ್ಥ. ಇಲ್ಲದಿದ್ದರೆ ನೀವು ಅದರ ವಿರುದ್ಧ ಮತ ಚಲಾಯಿಸುತ್ತೀರಿ ಎಂದು ಬಿಜೆಪಿ ಸಂಸದ ರಮೇಶ್ ಬಿಧುರಿ ಹೇಳಿದ್ದಾರೆ.