ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ವಿಟ್ಲದಲ್ಲಿ ಬಾವಿಗೆ ಹಾರಿ ಯುವಕ ಆತ್ಮಹತ್ಯೆ!

Twitter
Facebook
LinkedIn
WhatsApp
ವಿಟ್ಲದಲ್ಲಿ ಬಾವಿಗೆ ಹಾರಿ ಯುವಕ ಆತ್ಮಹತ್ಯೆ!

ವಿಟ್ಲ, ಆಗಸ್ಟ್ 17: ಯುವಕನೋರ್ವ ಬಾವಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರಾಜೆಯಲ್ಲಿ ನಡೆದಿದೆ.

ಪ್ರಶಾಂತ್ ನಾಯ್ಕ್ (29)  ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಪ್ರಶಾಂತ್ ನೇರಳಕಟ್ಟೆ ಅಗ್ರಿ ಎಂಬ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದು,  ಕಳೆದ ಒಂದು ವರ್ಷಗಳ ಹಿಂದೆ ಮದುವೆಯಾಗಿದ್ದ.

ಸದಾ ನಗುಮೊಗದ ಪ್ರಶಾಂತ್ ಎಲ್ಲರೊಂದಿಗೆ ಸ್ನೇಹ ಜೀವಿಯಾಗಿದ್ದುಕೊಂಡಿದ್ದ. ಜೊತೆಗೆ ಸಾಮಾಜಿಕವಾಗಿಯೂ ಗುರುತಿಸಿಕೊಂಡಿದ್ದ. ಬಿಜೆಪಿಯ ಸಕ್ರೀಯ ಕಾರ್ಯಕರ್ತನಾಗಿದ್ದು, ಪೆರಾಜೆ ಯುವ ವೇದಿಕೆಯ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದ ಈತ ಸದಸ್ಯನಾಗಿ ಸೇವೆ ಮಾಡುತ್ತಿದ್ದ.

ಕೌಟುಂಬಿಕ ಕಲಹ ಪ್ರಶಾಂತ್ ಆತ್ಮಹತ್ಯೆಗೆ ಕಾರಣವಾಗಿರಬೇಕು ಎಂದು ಶಂಕಿಸಲಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಅನಾರೋಗ್ಯ- ನಿರುದ್ಯೋಗದಿಂದ ನೊಂದ ಚಿತ್ರ ಕಲಾವಿದ ಬಾವಿಗೆ ಹಾರಿ ಆತ್ಮಹತ್ಯೆ..!

ಬಂಟ್ವಾಳ, ಆಗಸ್ಟ್ 14: ಅನಾರೋಗ್ಯದಿಂದ ಹಾಗೂ ನಿರುದ್ಯೋಗದ ಸಮಸ್ಯೆಯಿಂದ ಬೇಸತ್ತ ಯುವ ಚಿತ್ರಕಾರನೊಬ್ಬ ಮನೆಯ ಬಾವಿಗೆ ಹಾರಿ ಜೀವಾಂತ್ಯ ಮಾಡಿಕೊಂಡಿರುವ ಘಟನೆ ಆ.14ರಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ಮಿತ್ತಮಜಲು ಎಂಬಲ್ಲಿ ನಡೆದಿದೆ.

ಚಿತ್ರಕಾರ ಸಾಗರ್ ಆಚಾರ್ಯ (26) ಎಂಬಾತ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾನೆ. ಇಂದು ಬೆಳಗ್ಗೆ ಸುಮಾರು 8.30ರ ವೇಳೆಗೆ ಮನೆಯಂಗಳದಲ್ಲಿ ಇರುವ ಸುಮಾರು 30ಅಡಿ ಆಳದ ಬಾವಿಗೆ ಹಾರಿ ಈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸಾಗರ್ ಆತ್ಮಹತ್ಯೆ ಮಾಡಿಕೊಳ್ಳಲು ಸ್ಪಷ್ಟವಾದ ಕಾರಣ ನಿಗೂಢವಾಗಿದೆಯಾದರೂ ಆತನ ಅನಾರೋಗ್ಯದ ಕಾರಣ ಜೀವನದಲ್ಲಿ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಅಂದಾಜಿಸಲಾಗಿದೆ. ಆದರೆ ಈತ ಕಳೆದ ಕೆಲವು ದಿನಗಳಿಂದ ಮಾನಸಿಕವಾಗಿ ನೊಂದಿದ್ದಲ್ಲದೆ, ನೆರೆಹೊರೆಯವರ ಸ್ನೇಹಿತರ ಜೊತೆ ಈತನ ನೋವನ್ನು ಹೇಳಿಕೊಂಡಿದ್ದ ಎಂದು ಹೇಳಲಾಗಿದೆ.

ಸಾಗರ್ ಒಬ್ಬ ಅತ್ಯದ್ಭುತ ಚಿತ್ರಕಾರ, ಆದರೆ ಆತನ ಕಲೆಗೆ ಜೀವ ತುಂಬಲು ಆ ವಿಧಿ ಬಿಡಲಿಲ್ಲ. ಕಲಾವಿದನಾಗಿದ್ದ ಸಾಗರ್ ಕಳೆದ ಎರಡು ವರ್ಷಗಳ ಹಿಂದೆ ಬಿಸಿರೋಡಿನ ಸಿ.ಡಿ.ಪಿ.ಒ.ಕಚೇರಿಯಲ್ಲಿ ಹೊರಗುತ್ತಿಗೆಯಲ್ಲಿ ಕೆಲಸ ಮಾಡುತ್ತಿದ್ದ.

ಆದರೆ ಅದಾಗಲೇ ಈತನಿಗೆ ಮೊದಲೇ ಇದ್ದ ಕಿಡ್ನಿ ಸಮಸ್ಯೆ ಉಲ್ಬಣಗೊಂಡಿತು. ಹಾಗಾಗಿ ಈತ ಕೆಲಸ ಬಿಟ್ಟು ಮನೆಯಲ್ಲೇ ಇದ್ದ. ವಾರಕ್ಕೊಮ್ಮೆ ಡಯಾಲಿಸಿಸ್ ಮಾಡಲೇಬೇಕು ಎಂಬ ಸ್ಥಿತಿ ಒಂದೆಡೆ, ಇನ್ನೊಂದು ಕಡೆ ಎರಡು ಕಿಡ್ನಿ ವೈಫಲ್ಯ ಕಂಡ ಹಿನ್ನೆಲೆಯಲ್ಲಿ ಈತನ ತಂದೆಯ ಒಂದು ಕಿಡ್ನಿಯನ್ನು ನೀಡಲಾಗಿತ್ತು. ಮರದ ಕೆಲಸ ಮಾಡುತ್ತಿದ್ದ ತಂದೆಯವರು ಕಿಡ್ನಿ ಮಗನಿಗೆ ನೀಡಿದ ಬಳಿಕ ಕೆಲಸ ಮಾಡಲು ಸ್ವಲ್ಪ ಕಷ್ಟದ ಸ್ಥಿತಿ ಉಂಟಾಗಿತ್ತು.

ಈ ನಡುವೆ ಮನೆಯಲ್ಲಿ ತಾಯಿಗೂ ಸ್ವಲ್ಪ ಅನಾರೋಗ್ಯದ ಸಮಸ್ಯೆ ಉಂಟಾಗಿತ್ತು. ಮನೆಯಲ್ಲಿ ಎಲ್ಲರು ಅನಾರೋಗ್ಯ ಪೀಡಿತರಾಗಿ ದುಡಿಯುವ ಕೈಗಳಿಗೆ ಶಕ್ತಿಯಿಲ್ಲ, ಔಷಧಿಗೆ ಹಣವಿಲ್ಲ, ಸರಿಯಾದ ಉದ್ಯೋಗವು ಇಲ್ಲ ಹೀಗೆ ಅನೇಕ ಬಾರಿ ಮನನೊಂದು ಈ ವಿಚಾರವನ್ನು ಸ್ನೇಹಿತರ ಬಳಿ ಹೇಳಿಕೊಂಡಿದ್ದ ಎಂದು ಹೇಳಲಾಗಿದೆ.

ಈತನಿಗೆ ಕಿಡ್ನಿ ವೈಫಲ್ಯದ ಸಮಸ್ಯೆ ಉಂಟಾದ ಆ ಸಂದರ್ಭದಲ್ಲಿ ಮಾಧ್ಯಮಗಳು ನೆರವಿಗಾಗಿ ವರದಿಗಳನ್ನು ಮಾಡಿತ್ತು. ಆದರೆ ಅತ್ಯಂತ ಕಷ್ಟಕರ ಜೀವನವನ್ನು ಸಹಿಸಲಾರದೆ ಸಾಗರ್ ಬಾವಿಗೆ ಹಾರಿ ಆತ್ಮಹತ್ಯೆ ‌ಮಾಡಿಕೊಂಡಿದ್ದಾನೆ ಎಂದು ಸ್ಥಳೀಯರು ಹೇಳಿದ್ದಾರೆ.

ಸುಮಾರು 30 ಅಡಿ ಆಳದಲ್ಲಿರುವ ಬಾವಿಯಿಂದ ಸಾಗರ್ ಅವರ ಮೃತದೇಹವನ್ನು ಬಂಟ್ವಾಳ ಅಗ್ನಿಶಾಮಕ ದಳದವರು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿದರು. ಮರಣೋತ್ತರ ಪರೀಕ್ಷೆ ಬಳಿಕ ಸಾಗರ್ ಮೃತ ದೇಹವನ್ನು ಆತನ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಯಿತು. ಬಂಟ್ವಾಳದ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು