ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಿಜೆಪಿ ಅವಧಿಯಲ್ಲಿನ ಕಮಿಷನ್ ಆರೋಪ ; ನ್ಯಾಯಾಂಗ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ

Twitter
Facebook
LinkedIn
WhatsApp
ಬಿಜೆಪಿ ಅವಧಿಯಲ್ಲಿನ ಕಮಿಷನ್ ಆರೋಪ ; ನ್ಯಾಯಾಂಗ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ

ಬೆಂಗಳೂರು, (ಆಗಸ್ಟ್ 18): ವಿಧಾನಸಭಾ ಚುನಾವಣೆ (Karnataka Assembly Elections 2023) ಮುನ್ನ ಕರ್ನಾಟಕದಲ್ಲಿ ಭಾರೀ ಸದ್ದು ಮಾಡಿದ್ದ ಬಿಜೆಪಿ(BJP) ಸರಕಾರದ 40 ಪರ್ಸೆಂಟ್ ಕಮಿಷನ್ ಆರೋಪವನ್ನು(40 per cent allegation) ಇದೀಗ ಸಿದ್ದರಾಮಯ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ವಹಿಸಿದೆ. ರಾಜ್ಯ ಗುತ್ತಿಗೆದಾರರ ಸಂಘದ ಕೆಂಪಣ್ಣ ಮಾಡಿದ್ದ ಕಮಿಷನ್ ಆರೋಪದ ತನಿಖೆಯನ್ನು ಹೈಕೋರ್ಟ್​ ನಿವೃತ್ತ ನ್ಯಾಯಮೂರ್ತಿ ಎಚ್​ಎನ್​ ನಾಗಮೋಹನ್​ ದಾಸ್ ನೇತೃತ್ವದಲ್ಲಿ ಸಮಿತಿ ರಚಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

ಸ್ಥಳ ಹಾಗೂ ದಾಖಲಾತಿಗಳನ್ನು ಪರಿಶೀಲಿಸಿ ವಿವರವಾದ ತನಿಖೆ ನಡೆಸಿ, ಲೋಪದೋಷಗಳ ಮಾಹಿತಿ ಹಾಗೂ ಕಾರಣರಾದ ಆರೋಪಿಗಳನ್ನು ಪತ್ತೆ ಮಾಡಿ ಸಂಪೂರ್ಣ ವರದಿಯನ್ನು  ಒಂದು ತಿಂಗಳು ದಿನಗಳ ಒಳಗೆ ನೀಡಬೇಕು. ಹಾಗೇ ಈ ಪ್ರಕರಣಕ್ಕೆ ಸಂಬಂಧಿಸಿದ ಅಗತ್ಯ ಕಡತ, ದಾಖಲೆಗಳನ್ನು ಆಯಾ ಇಲಾಖೆಯ ಅಧಿಕಾರಿಗಳು ಈ ತನಿಖಾ ಸಮಿತಿಗೆ ನೀಡಬೇಕೆಂದು ಆದೇಶದಲ್ಲಿ ಸೂಚಿಸಿದೆ.

ಇನ್ನು ತನಿಖಾ ಸಮಿತಿಯು ಸ್ಥಳ ಪರಿಶೀಲನೆ ವೇಳೆ  ಖುದ್ದು ಹಾಜರಿದ್ದು, ತನಿಖೆಗೆ ಸಹಕಾರ ನೀಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ತನಿಖೆಗೆ ಸಂಬಂಧಿಸಿದಂತೆ ಸಹಾಯಕ್ಕೆ ಅಗತ್ಯವಿರುವ ತಾಂತ್ರಿಕ ಸಲಹೆಗಾರರು, ಆರ್ಥಿಕ ಸಲಹೆಗಾರರು ಹಾಗೂ ಆಡಳಿತಾತ್ಮಕ ಸಲಹೆಗಾರರನ್ನು ತೆಗೆದುಕೊಳ್ಳಬಹುದು ಎಂದು ಸಮಿತಿಗೆ ಆದೇಶದಲ್ಲಿ ತಿಳಿಸಿದೆ.

ಬಿಟ್‌ ಕಾಯಿನ್‌ ಹಗರಣದ ಕುರಿತು ವಿಶೇಷ ತನಿಖಾ ತಂಡದ (ಎಸ್‌ಐಟಿ) ಮೂಲಕ ಮರು ತನಿಖೆಗೆ ಆದೇಶ ಹೊರಬಿದ್ದ ಬೆನ್ನಲ್ಲೇ ಹಿಂದಿನ ಬಿಜೆಪಿ ಅಧಿಕಾರಾವಧಿಯ ಈ ಮತ್ತೊಂದು ಗಂಭೀರ ಪ್ರಕರಣವಾದ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿದ್ದ ಈ ಕಮಿಷನ್‌ ದಂಧೆ ಆರೋಪವನ್ನು ನ್ಯಾಯಾಂಗ ತನಿಖೆಗೊಪ್ಪಿಸುವ ಮೂಲಕ ಮಹತ್ವದ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ.

ಆಪರೇಷನ್ ಹಸ್ತ: ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಗುಟ್ಟು ಬಿಟ್ಟುಕೊಟ್ಟ ಡಿಕೆ ಶಿವಕುಮಾರ್

ಮೈಸುರು ( ಆಗಸ್ಟ್ 18): ರಾಜ್ಯ ರಾಜಕಾರಣದಲ್ಲಿ ಬಾಂಬೆ ಬಾಯ್ಸ್ ಘರ್‌ವಾಪ್ಸಿ ವಿಚಾರ ಭಾರೀ ಸದ್ದು ಮಾಡುತ್ತಿದೆ. ಆಪರೇಷನ್‌ಗೆ ಕಾಂಗ್ರೆಸ್ (Congress) ಕೈ ಹಾಕಿದೆ ಎನ್ನುವ ವ ಹೊತ್ತಲ್ಲೇ ಯಶವಂತಪುರದಲ್ಲಿ ಭಾರೀ ಬೆಳವಣಿಗೆ ನಡೆದಿದೆ. ಎಸ್‌.ಟಿ ಸೋಮಶೇಖರ್ ನಡೆಸಿದ್ದ ಸಭೆಯಲ್ಲಿ ಕೈ ಶಾಸಕ ಪ್ರತ್ಯಕ್ಷವಾಗಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಹೀಗಾಗಿ ಸೋಮಶೇಖರ್​ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆ ಎನ್ನುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಇನ್ನು ಈ ಬಗ್ಗೆ ಕೃಷಿ ಇಲಾಖೆ ಸಚಿವ ಚಲುವರಾಯಸ್ವಾಮಿ(Chaluvaraya Swamy), ಬಿಜೆಪಿ(BJP), ಜೆಡಿಎಸ್ ( JDS) ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರುವುದು ಖಚಿತ. ಈ ಬ್ಗಗೆ ಮಾತುಕತೆ ನಡೆಯುತ್ತಿದ್ದು, 10 ರಿಂದ 15 ಹಾಲಿ, ಮಾಜಿ ಶಾಸಕರು ಕಾಂಗ್ರೆಸ್​ ಸೇರಲು ಸಿದ್ಧರಿದ್ದಾರೆ ಎಂದು ಬಾಂಬ್ ಸಿಡಿಸಿದ್ದಾರೆ. ಇನ್ನು ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದೆಂದು ಹೇಳುವ ಮೂಲಕ ಡಿಕೆ ಶಿವಕುಮಾರ್ ಆಪರೇಷನ್ ಗುಟ್ಟು ಬಿಟ್ಟುಕೊಟ್ಟಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಚಲುವರಾಯಸ್ವಾಮಿ, ಪಕ್ಷ ಸೇರುವವರ ಹೆಸರನ್ನು ಈಗ ಹೇಳಲು ಸಾಧ್ಯವಿಲ್ಲ. ಇನ್ನೂ ಕೆಲವೇ ದಿನಗಳಲ್ಲಿ ಎಲ್ಲವೂ ಅಂತಿಮಗೊಳ್ಳಲಿದೆ ಎಂದು ಹೇಳಿದ ಅವರು, ಎರಡೂ ಪಕ್ಷದ ಶಾಸಕರು ನಮ್ಮ ಪಕ್ಷಕ್ಕೆ ಬರುವುದು ಖಚಿತ ಎಂಬುದನ್ನು ಸ್ಪಷ್ಟಪಡಿಸಿದರು.

ಇನ್ನು ಬಿಜೆಪಿ ಶಾಸಕ ಎಸ್​.ಟಿ.ಸೋಮಶೇಖರ್​ ಕಾಂಗ್ರೆಸ್ ಸೇರುವ ವಿಚಾರ ಬೆಂಗಳೂರಿನಲ್ಲಿ ಡಿಕೆ ಶಿವಕುಮಾರ್​ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ಸೇರಲು ಸಿದ್ಧವಿದ್ದರೆ ಸೇರಿಸಿಕೊಳ್ಳಿ ಎಂದು ಹೇಳಿದ್ದೇನೆ. ಕೆಲ ಕಾರ್ಯಕರ್ತರು ಬಹಳ ಉತ್ಸಾಹದಿಂದ ಕೆಲಸ ಮಾಡ್ತಿದ್ದಾರೆ. ವೋಟ್​ ಶೇರ್ ಜಾಸ್ತಿ ಮಾಡಿಕೊಳ್ಳಲು ಕಾರ್ಯಕರ್ತರಿಗೆ ಹೇಳಿದ್ದೇವೆ. ಸೋಮಶೇಖರ್ ಪಕ್ಷ ಸೇರ್ಪಡೆ ಬಗ್ಗೆ ವೈಯಕ್ತಿಕವಾಗಿ ಹೇಳಿರಬಹುದು. ಆ ವಿಚಾರ ಇನ್ನೂ ನನ್ನ ತನಕ ಬಂದಿಲ್ಲ, ಯಾವಾಗ ಏನು ಬೇಕಾದರೂ ಆಗಬಹುದು. ಆದ್ರೆ, ಯಾರು ಬರುತ್ತಾರೆ ಏನು ಎಂಬುವುದನ್ನ ನಾನು ಹೇಳುವುದಿಲ್ಲ ಎಂದಿರುವ ಅವರು, ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದೆಂದು ಹೇಳುವ ಮೂಲಕ ಗುಟ್ಟು ಬಿಟ್ಟುಕೊಟ್ಟ ಡಿಸಿಎಂ ಡಿ.ಕೆ ಶಿವಕುಮಾರ್

ಯಶವಂತಪುರದ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಕೂಡ ಬಿಜೆಪಿಯನ್ನು ತೊರೆದು ಕಾಂಗ್ರೆಸ್​ ಪಕ್ಷಕ್ಕೆ ಮರಳಲಿದ್ದಾರೆ ಎಂಬ ಸುದ್ದಿ ವ್ಯಾಪಕವಾಗಿ ಹರಡಿರುವ ಬೆನ್ನಲ್ಲೇ ಚಲುವರಾಯಸ್ವಾಮಿ ಹಾಗೂ ಡಿಕೆ ಶಿವಕುಮಾರ್ ಹೇಳಿಕೆ ಸಂಚಲನ ಮೂಡಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist