Bike Accident- ಬ್ಯಾಂಕ್ ಉದ್ಯೋಗಿ ಸಾವು
ಕೊಡಗು: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬ್ಯಾಂಕ್ ಉದ್ಯೋಗಿ ಒಬ್ಬರು ಸಾವಿಗೀಡಾಗಿರುವ ಘಟನೆ ಕೊಡಗು (Kodagu) ಜಿಲ್ಲೆಯ ಅಮ್ಮತ್ತಿಯಲ್ಲಿ ತಡರಾತ್ರಿ ನಡೆದಿದೆ.
ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಗ್ರಾಮ ಅಪಘಾತ ಸಂಭವಿಸಿದ್ದು, ಅಮೃತ (24) ಹೆಸರಿನ ಬ್ಯಾಂಕ್ ಉದ್ಯೋಗಿ ಮೃತಪಟ್ಟಿದ್ದಾರೆ. ಮೂಲತಃ ಕೇರಳದ ತ್ರಿಶೂರ್ ಮೂಲದ ಅಮೃತ, ಅಮ್ಮತಿ ಕೆನರಾ ಬ್ಯಾಂಕ್ ಉದ್ಯೋಗಿ ಆಗಿದ್ದರು.
ಅಪಘಾತದಲ್ಲಿ ಗಾಯಗೊಂಡಿದ್ದ ಅಮೃತಾಳನ್ನು ಮೈಸೂರು ಅಪೊಲೋ ಆಸ್ಪತ್ರೆಗೆ ಸಾಗಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅಮೃತ ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮನೆ ಮುಂದೆಯೇ ಗಾಂಜಾ ಬೆಳೆದು ಪೊಲೀಸರ ಅತಿಥಿಯಾದ ಮಹಿಳೆ
ಚಿಕ್ಕಬಳ್ಳಾಪುರ: ಅಕ್ರಮವಾಗಿ ಗಾಂಜಾ (Ganja) ಗಿಡಗಳನ್ನ ಬೆಳೆದಿದ್ದ ಮನೆ ಮೇಲೆ ಪೊಲೀಸರು ದಾಳಿ ನಡೆಸಿ ಮನೆ ಮಾಲೀಕಳನ್ನ ಬಂಧಿಸಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ಮುರುಗಮಲ್ಲ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸರ್ಕಾರಿ ಆಸ್ಪತ್ರೆಯ (Government Hospital) ಮುಂಭಾಗದ ಪ್ರಮೀಳಮ್ಮ ಎಂಬಾಕೆ ಮನೆಯ ಕಾಂಪೌಂಡ್‌ನಲ್ಲೇ ಅಕ್ರಮವಾಗಿ ಗಾಂಜಾ ಗಿಡಗಳನ್ನ ಬೆಳೆಸಿದ್ದಳು. ಖಚಿತ ಮಾಹಿತಿ ಮೇರೆಗೆ ಚಿಂತಾಮಣಿ ಉಪ ವಿಭಾಗದ ಎಸಿಪಿ ಕುಶಾಲ್ ಚೌಕ್ಸೆ ನೇತೃತ್ವದಲ್ಲಿ ದಾಳಿ ನಡೆಸಿ ಬರೋಬ್ಬರಿ 66 ಸಾವಿರ ರೂ. ಮೌಲ್ಯದ 11.5 ಕೆಜಿಯಷ್ಟು ಹಸಿ ಗಾಂಜಾ ಗಿಡಗಳನ್ನ ಜಪ್ತಿ ಮಾಡಿದ್ದಾರೆ.
ಮನೆ ಮಾಲೀಕಳಾದ ಪ್ರಮೀಳಮ್ಮನನ್ನ ಬಂಧಿಸಿದ್ದು, ಆಕೆ ವಿರುದ್ಧ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.