ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Ladakh: ವಾಹನ ಕಮರಿಗೆ ಉರುಳಿ 9 ಸೇನಾ ಸಿಬ್ಬಂದಿ ಹುತಾತ್ಮ!

Twitter
Facebook
LinkedIn
WhatsApp
ಲಡಾಖ್‌ನ ಲೇಹ್ ಜಿಲ್ಲೆಯಲ್ಲಿ ಸೇನಾ ವಾಹನವೊಂದು ಆಳವಾದ ಕಂದರಕ್ಕೆ ಉರುಳಿ ಬಿದ್ದಿದ್ದು 9 ಸೈನಿಕರು ಸಾವನ್ನಪ್ಪಿದ್ದಾರೆ ಎಂದು ರಕ್ಷಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Ladakh: ಲಡಾಖ್‌ನ (Ladakh:) ಲೇಹ್ ಜಿಲ್ಲೆಯಲ್ಲಿ ಸೇನಾ ವಾಹನವೊಂದು ರಸ್ತೆಯಿಂದ ಸ್ಕಿಡ್ ಆಗಿ ಆಳವಾದ ಕಂದರಕ್ಕೆ ಉರುಳಿ ಬಿದ್ದಿದ್ದು ಒಂಬತ್ತು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ರಕ್ಷಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೃತರ ಪೈಕಿ ಓರ್ವ ಜೂನಿಯರ್ ಕಮಿಷನ್ಡ್ ಆಫೀಸರ್(ಜೆಸಿಒ) ಹಾಗೂ ಎಂಟು ಮಂದಿ ಸೈನಿಕರು ಎಂದು ತಿಳಿದುಬಂದಿದೆ. ಇನ್ನು ಅಪಘಾತದಲ್ಲಿ ಮತ್ತೊಬ್ಬ ಅಧಿಕಾರಿ ಗಾಯಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಶನಿವಾರ ಸಂಜೆ 6:30 ರ ಸುಮಾರಿಗೆ ದಕ್ಷಿಣ ಲಡಾಖ್‌ನ ನ್ಯೋಮಾದಲ್ಲಿ ಅಪಘಾತ ಸಂಭವಿಸಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾರುತಿ ಜಿಪ್ಸಿ, ಟ್ರಕ್ ಮತ್ತು ಆಂಬ್ಯುಲೆನ್ಸ್ ಒಳಗೊಂಡ ಮೂರು ವಾಹನಗಳಲ್ಲಿ ಒಟ್ಟು ಮೂವರು ಅಧಿಕಾರಿಗಳು, ಇಬ್ಬರು ಜೆಸಿಒಗಳು ಮತ್ತು 34 ಜವಾನರು ಪ್ರಯಾಣಿಸುತ್ತಿದ್ದರು. ಸೇನಾ ವಾಹನದಲ್ಲಿ ಚಾಲಕ ಸೇರಿದಂತೆ 10 ಸೇನಾ ಸಿಬ್ಬಂದಿ ಲೇಹ್‌ನಿಂದ ನ್ಯೋಮಾಗೆ ಪ್ರಯಾಣಿಸುತ್ತಿದ್ದರು.

ಕೇಂದ್ರ ಸಚಿವ ಅಮಿತ್ ಶಾ (Union Minister Amit Shah) ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿದ್ದಾರೆ. “ಲಡಾಖ್‌ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಿಂದ ನಾವು ನಮ್ಮ ವೀರ ಸೈನಿಕರನ್ನು ಕಳೆದುಕೊಂಡಿದ್ದೇವೆ, ಅವರ ವಾಹನವು ಕಮರಿಗೆ ಬಿದ್ದಿದ್ದರಿಂದ ತೀವ್ರ ದುಃಖವಾಗಿದೆ. ಈ ದುಃಖದ ಸಮಯದಲ್ಲಿ ಇಡೀ ರಾಷ್ಟ್ರವು ದುಃಖತಪ್ತ ಕುಟುಂಬಗಳೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಿಂತಿದೆ. ಅವರಿಗೆ ನನ್ನ ಪ್ರಾಮಾಣಿಕ ಸಂತಾಪಗಳು.  ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳುತ್ತಾರೆ ಎಂದು ಅವರು ಟ್ವೀಟ್‌ನಲ್ಲಿ ಬರೆದಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ (Defence Minister Rajnath Singh) ಕೂಡ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದರು. “ಲಡಾಖ್‌ನ ಲೇಹ್ ಬಳಿ ಅಪಘಾತದಿಂದಾಗಿ ಭಾರತೀಯ ಸೇನಾ ಸಿಬ್ಬಂದಿಯನ್ನು ಕಳೆದುಕೊಂಡಿರುವುದು ದುಃಖವಾಗಿದೆ. ನಮ್ಮ ದೇಶಕ್ಕೆ ಅವರ ಆದರ್ಶ ಸೇವೆಯನ್ನು ನಾವು ಎಂದಿಗೂ ಮರೆಯುವುದಿಲ್ಲ. ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ. ಗಾಯಗೊಂಡ ಸಿಬ್ಬಂದಿಯನ್ನು ಕ್ಷೇತ್ರ ಆಸ್ಪತ್ರೆಗೆ ರವಾನಿಸಲಾಗಿದೆ. ಅವರ ಶೀಘ್ರ ಚೇತರಿಕೆ ಪ್ರಾರ್ಥಿಸುವೆ,”ಏಂದು  ಅವರು ಟ್ವಿಟರ್‌ನಲ್ಲಿ ಬರೆದಿದ್ದಾರೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹಿಂದಿಯಲ್ಲಿ ಬರೆದುಕೊಂಡಿದ್ದಾರೆ, “ಲಡಾಖ್‌ನಲ್ಲಿ ಸೇನಾ ವಾಹನ ಅಪಘಾತದಲ್ಲಿ ನಮ್ಮ ಅನೇಕ ಸೈನಿಕರು ಹುತಾತ್ಮರಾದ ಸುದ್ದಿ ತುಂಬಾ ದುಃಖಕರವಾಗಿದೆ. ಎಲ್ಲಾ ಹುತಾತ್ಮರಿಗೆ ನನ್ನ ವಿನಮ್ರ ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ಯೋಧರನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಆಶಿಸುತ್ತೇನೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist