ಗೆಳೆಯನ ಸಾವಿನ ಸುದ್ದಿ ಕೇಳಿ ಯುವಕನಿಗೆ ಹೃದಯಾಘಾತ! ಸಾವಿನಲ್ಲೂ ಒಂದಾದ ಸ್ನೇಹಿತರು
Twitter
Facebook
LinkedIn
WhatsApp
ಶಿವಮೊಗ್ಗ: ರಸ್ತೆ ಅಪಘಾತದಲ್ಲಿ (Accident) ಯುವಕನೋರ್ವ ಮೃತಪಟ್ಟಿದ್ದು, ಅಪಘಾತದ ಸುದ್ದಿ ತಿಳಿದ ಇನ್ನೋರ್ವ ಸ್ನೇಹಿತ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಮೃತರನ್ನು ಆನಂದ್ (30) ಹಾಗೂ ಸಾಗರ್ (35) ಎಂದು ಗುರುತಿಸಲಾಗಿದೆ. ಶಿಕಾರಿಪುರ (Shikaripura) ತಾಲೂಕಿನ ಪುಣೇದಹಳ್ಳಿಯ ಆನಂದ್ ಹಾಗೂ ನವರಾಜ್, ಸ್ನೇಹಿತನ ಹುಟ್ಟುಹಬ್ಬಕ್ಕೆ (Birthday) ಕೇಕ್ ತರುವ ಸಲುವಾಗಿ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಶಿಕಾರಿಪುರ ಮತ್ತು ಶಿರಾಳಕೊಪ್ಪದ ನಡುವೆ ಇರುವ ಕೆಎಸ್‌ಆರ್‌ಟಿಸಿ (KSRTC) ಬಸ್ ಡಿಪೋ ಬಳಿ ಎರಡು ಬೈಕ್‌ಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಆನಂದ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಇನ್ನೋರ್ವ ಯುವಕ ಅದೃಷ್ಟವಶಾತ್ ಬದುಕುಳಿದಿದ್ದಾನೆ
ಬೈಕ್ ಅಪಘಾತದಲ್ಲಿ ಮೃತಪಟ್ಟ ಯುವಕನ ಸುದ್ದಿ ತಿಳಿದ ಆತನ ಸ್ನೇಹಿತ ಸಾಗರ್ ಕೂಡಾ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಈ ಕುರಿತು ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ