ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ; ದಕ್ಷಿಣ ಕನ್ನಡದಲ್ಲೂ ಹರಡದಂತೆ ಕಟ್ಟೆಚ್ಚರ!

Twitter
Facebook
LinkedIn
WhatsApp
ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ; ದಕ್ಷಿಣ ಕನ್ನಡದಲ್ಲೂ ಹರಡದಂತೆ ಕಟ್ಟೆಚ್ಚರ!

ಮಂಗಳೂರು: ಕೇರಳದಲ್ಲಿ ಹಂದಿಗಳಲ್ಲಿ ಆಫ್ರಿಕನ್‌ ಹಂದಿ ಜ್ವರ ದೃಢಪಟ್ಟಿರುವುದರಿಂದ ಕೇರಳಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೋಗ ಹರಡದಂತೆ ಅವಶ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಆಫ್ರಿಕನ್‌ ಹಂದಿ ಜ್ವರವು ಸಾಕುಹಂದಿ ಮತ್ತು ಕಾಡುಹಂದಿಗಳಲ್ಲಿ ವೈರಾಣುವಿನಿಂದ ಬರುವ ಸಾಂಕ್ರಾಮಿಕ ರೋಗವಾಗಿದ್ದು, ಆ ಹಂದಿಗಳು ಸಾವನ್ನಪ್ಪುತ್ತವೆ. ಈ ರೋಗಕ್ಕೆ ನಿರ್ದಿಷ್ಟ ಚಿಕಿತ್ಸೆ ಮತ್ತು ಲಸಿಕೆ ಇಲ್ಲದಿರುವುದರಿಂದ ನಿಯಮಾನುಸಾರ ರೋಗ ದೃಢೀಕರಣಗೊಂಡ ಪ್ರದೇಶದ 1 ಕಿ.ಮೀ. ವ್ಯಾಪ್ತಿಯಲ್ಲಿರುವ ಹಂದಿಗಳನ್ನು ವಧೆ ಮಾಡಬೇಕಾಗಿರುತ್ತದೆ. ಶೇ. 100ರಷ್ಟು ಸಾವಿನ ಪ್ರಮಾಣ ಇರುವುದರಿಂದ ಹಂದಿ ಸಾಕಾಣಿಕೆದಾರರಿಗೆ ಆರ್ಥಿಕ ನಷ್ಟ ಉಂಟಾಗುತ್ತದೆ.

ಆಫ್ರಿಕನ್‌ ಹಂದಿ ಜ್ವರವು ಈ ವರ್ಷದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಂಡುಬಂದಿರುವುದಿಲ್ಲ. ಆದ್ದರಿಂದ ಹಂದಿ ಸಾಕಾಣಿಕೆದಾರರು ಮತ್ತು ಸಾರ್ವಜನಿಕರು ಭಯಭೀತರಾಗುವ ಅವಶ್ಯಕತೆಯಿರುವುದಿಲ್ಲ ಎಂದು ಪಶುಸಂಗೋಪನಾ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ

ಚೆಕ್‌ಪೋಸ್ಟ್‌ನಲ್ಲಿ ನಿಗಾ
ಪಶುಸಂಗೋಪನೆ ಇಲಾಖೆಯ ಉಪ ನಿರ್ದೇಶಕ ಡಾ| ಅರುಣ್‌ ಕುಮಾರ್‌ ಶೆಟ್ಟಿ ಪ್ರತಿಕ್ರಿಯಿಸಿ, “ಆಫ್ರಿಕನ್‌ ಹಂದಿ ಜ್ವರ ರಾಜ್ಯಕ್ಕೆ ಹಬ್ಬದಂತೆ ತಡೆಗಟ್ಟಲು ಕೇರಳವನ್ನು ಸಂಪರ್ಕಿಸುವ ಗಡಿಭಾಗದ ಚೆಕ್‌ಪೋಸ್ಟ್‌ಗಳಾದ ತಲಪಾಡಿ, ಜಾಲೂÕರು, ಸಾರಡ್ಕದಲ್ಲಿ ವಿಶೇಷ ನಿಗಾ ಇರಿಸಲಾಗಿದೆ. ಮಾಂಸ ಸಾಗಾಟಕ್ಕೆ ಸದ್ಯಕ್ಕೆ ಯಾವುದೇ ನಿರ್ಬಂಧ ಹೇರಿಲ್ಲ. ದ.ಕ. ಜಿಲ್ಲೆಯಿಂದ ಕೇರಳ ಭಾಗಕ್ಕೆ ಹೆಚ್ಚಾಗಿ ಹಂದಿ ಮಾಂಸ ರಫ್ತು ಆಗುತ್ತದೆ. ಈ ಹಿನ್ನೆಲೆಯಲ್ಲಿ ಕೇರಳ ಭಾಗಕ್ಕೆ ತೆರಳಿ ಬರುವ ವಾಹನಗಳ ಮೇಲೆ ಚೆಕ್‌ಪೋಸ್ಟ್‌ಗಳಲ್ಲಿ ರಾಸಾಯನಿಕ ಸಿಂಪಡಣೆ ಮಾಡಲಾಗುತ್ತಿದೆ. ಹಂದಿ ಹಾಗೂ ಹಂದಿ ಮಾಂಸಗಳ ಸಾಗಾಣಿಕೆ ಮೇಲೆ ನಿಗಾ ಇರಿಸಲಾಗಿದೆ. ಇಲಾಖಾ ಪಶುವೈದ್ಯಾ ಧಿಕಾರಿಗಳಿಗೆ ತಮ್ಮ ವ್ಯಾಪ್ತಿಯ ಎಲ್ಲ ಹಂದಿ ಫಾರಂಗಳಿಗೆ ಭೇಟಿ ನೀಡಿ ಹಂದಿ ಸಾಕಾಣಿಕೆದಾರರಿಗೆ ಸಲಹೆ ನೀಡಲು ಸೂಚಿಸಲಾಗಿದೆ’ ಎಂದು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ