ಪ್ರಧಾನಿ ಮೋದಿ ಬೆಂಗಳೂರಿಗೆ ; ಇಸ್ರೊ ಪ್ರಧಾನ ಕಚೇರಿಗೆ ಆಗಮಿಸಿದ ಮೋದಿ
ಇಸ್ರೋ ಕೇಂದ್ರಕ್ಕೆ ಪ್ರಧಾನಿ ಮೋದಿ ಆಗಮಿಸಿದ್ದಾರೆ. ಇಸ್ರೋ ಕಚೇರಿಯಲ್ಲಿ ಇಸ್ರೋ ಅಧ್ಯಕ್ಷ ಎಸ್. ಸೋಮನಾಥ್, ಯು.ಆರ್. ರಾವ್ ಬಾಹ್ಯಾಕಾಶ ಕೇಂದ್ರದ ನಿರ್ದೇಶಕ ಎಂ. ಶಂಕರನ್ ಮತ್ತು ಇಸ್ಟ್ರಾಕ್ ನಿರ್ದೇಶಕ ಬಿ.ಎನ್. ರಾಮಕೃಷ್ಣ ಅವರಿಗೆ ಮಾತ್ರ ಪ್ರಧಾನಿ ಸ್ವಾಗತಕ್ಕೆ ಅವಕಾಶ ನೀಡಲಾಗಿದೆ.
ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ಬೆಂಗಳೂರು ಪೊಲೀಸರಿಂದ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ನೇತೃತ್ವದಲ್ಲಿ ಭದ್ರತೆ ಕಲ್ಪಿಸಲಾಗಿದೆ. ಹೆಚ್ಎಎಲ್ ಏರ್ಪೋರ್ಟ್ನಿಂದ ಪೀಣ್ಯದವರೆಗೂ ಬಂದೋಬಸ್ತ್ ಇದೆ. ಪ್ರಧಾನಿ ಸಾಗುವ ರಸ್ತೆಯಲ್ಲಿ 2000ಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. HAL ಏರ್ಪೋರ್ಟ್ನಲ್ಲಿ 100ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. HALನಲ್ಲಿ ವೈಟ್ಫೀಲ್ಡ್, ಪೂರ್ವ ವಿಭಾಗದ ಡಿಸಿಪಿಯಿಂದ ಭದ್ರತೆ. ಪ್ರಧಾನಿ ಸಾಗುವ ರಸ್ತೆಯಲ್ಲಿ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸಗೌಡ, ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್ ನೇತೃತ್ವದಲ್ಲಿ ಬಂದೋಬಸ್ತ್. ಪೀಣ್ಯದಲ್ಲಿ ಉತ್ತರ ಡಿಸಿಪಿ ಪ್ರಕಾಶ್ ದೇವರಾಜ್ ನೇತೃತ್ವದಲ್ಲಿ ಭದ್ರತೆ. ಎಲ್ಲಾ ಭದ್ರತೆಗೂ ಪೊಲೀಸ್ ಆಯುಕ್ತ ದಯಾನಂದ್ ಮೇಲುಸ್ತುವಾರಿ. ಟ್ರಾಫಿಕ್ ವಿಭಾಗವನ್ನು ಎಂ.ಎನ್.ಅನುಚೇತ್ ನಿಭಾಯಿಸುತ್ತಿದ್ದಾರೆ.
#WATCH | Karnataka | PM Narendra Modi arrives at HAL airport in Bengaluru after concluding his two-nation visit to South Africa and Greece.
— ANI (@ANI) August 26, 2023
PM Modi will meet scientists of the ISRO team involved in Chandrayaan-3 Mission at ISRO Telemetry Tracking & Command Network Mission… pic.twitter.com/1GOeilOgHB
ಭಾರತದಲ್ಲಿ ಬೆಳಕು ಹರಿದಿದೆ, ಆ ಬೆಳಕಿನಲ್ಲಿ ಬೆಂಗಳೂರಿಗರ ಮುಖ ನೋಡಿದೆ. ವಿದೇಶದಲ್ಲಿದ್ದಾಗ ಅಲ್ಲಿಂದಲೇ ಬೆಂಗಳೂರಿಗೆ ಬರಲು ನಿರ್ಧರಿಸಿದೆ. ಅದಕ್ಕೆ ಶೀಘ್ರದಲ್ಲೇ ವ್ಯವಸ್ಥೆ ಮಾಡಿದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ರಾಜ್ಯಪಾಲರಿಗೆ ಧನ್ಯವಾದ ಎಂದು ಮೋದಿ ಹೇಳಿದರು.
ವಿಜ್ಞಾನಿಗಳ ಸಾಧನೆ ಬಗ್ಗೆ ಇಡೀ ದೇಶವೇ ಹೆಮ್ಮೆ ಪಡುತ್ತಿದೆ. ನಮ್ಮ ವಿಜ್ಞಾನಿಗಳ ಶಕ್ತಿ ಇಡೀ ವಿಶ್ವಕ್ಕೆ ಗೊತ್ತಾಗಿದೆ. ವಿದೇಶದಲ್ಲಿ ಇರುವಾಗಲೇ ಇಸ್ರೋ ಸಂಸ್ಥೆಗೆ ಭೇಟಿ ನೀಡಲು ನಿರ್ಧರಿಸಿದೆ. ವಿದೇಶದಲ್ಲಿ ಇರುವಾಗಲೇ ಇಸ್ರೋ ಸಂಸ್ಥೆಗೆ ಭೇಟಿ ನೀಡಲು ನಿರ್ಧರಿಸಿದೆ. ಹಾಗಾಗಿ ವಿದೇಶದಿಂದ ನೇರವಾಗಿ ವಿಜ್ಞಾನಿಗಳಿಗೆ ಭೇಟಿಗೆ ಬಂದಿದ್ದೇನೆ ಎಂದು ಮೋದಿ ಹೇಳಿದರು.
ಹೆಚ್ಎಎಲ್ ಏರ್ಪೋರ್ಟ್ನಿಂದ ಇಸ್ರೋ ಕೇಂದ್ರಕ್ಕೆ ಹೊರಡುತ್ತಿದ್ದಂತೆಯೇ ಜನರನ್ನು ಉದ್ದೇಶಿಸಿ ಮೋದಿ ಮಾತನಾಡಿದರು. ಇದೇ ವೇಳೆ ಜನ ಜೈ ಮೋದಿ ಎಂಬ ಘೋಷಣೆ ಕೂಗಲು ಮುಂದಾದಾಗ ಅದನ್ನು ತಡೆದು, ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್ ಎಂದು ಮೋದಿ ಘೋಷಣೆ ಮಾಡಿದರು.
ಪ್ರಧಾನಿ ಮೋದಿ ಅವರ ಸ್ವಾಗತಕ್ಕೆ ಬೆಂಗಳೂರಿನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿದ್ದಾರೆ. ನಸುಕಿನಲ್ಲೇ ಮೋದಿ ಸಾಗುವ ರಸ್ತೆಯುದ್ದಕ್ಕೂ ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದಾರೆ.
#WATCH | Karnataka | Locals with posters and the national flag gather on the streets outside HAL airport in Bengaluru to welcome PM Narendra Modi as he will meet scientists of ISRO team involved in the Chandrayaan-3 Mission at ISRO Telemetry Tracking & Command Network Mission… pic.twitter.com/mV4fapzLDZ
— ANI (@ANI) August 26, 2023