ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹಂಸಲೇಖರಿಂದ ಈ ಬಾರಿ ಮೈಸೂರು ದಸರಾ ಉದ್ಘಾಟನೆ: ಸಿದ್ದರಾಮಯ್ಯ ಘೋಷಣೆ

Twitter
Facebook
LinkedIn
WhatsApp
ಹಂಸಲೇಖರಿಂದ ಈ ಬಾರಿ ಮೈಸೂರು ದಸರಾ ಉದ್ಘಾಟನೆ: ಸಿದ್ದರಾಮಯ್ಯ ಘೋಷಣೆ

ಮೈಸೂರು (ಆ.29): ಈ ಬಾರಿಯ ಮೈಸೂರು ದಸರಾವನ್ನು (Mysuru Dasara) ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ (Hamsalekha) ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು. ದಸಾರ ಅಕ್ಟೋಬರ್​ 15 ರ ಬೆಳಿಗ್ಗೆ 10.15 ರಿಂದ 10.30 ಕ್ಕೆ ಸಲ್ಲುವ ಮಹೂರ್ತದಲ್ಲಿ ಮೈಸೂರು ದಸರಾ ಉದ್ಘಾಟನೆ ನೆರವೇರಲಿದ್ದು, ಪಂಜಿನ ಕವಾಯತು ವಿಜಯದಶಮಿ ದಿನದಂದು ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತರ ದಸರಾ, ಯುವ ದಸರಾ ಎಲ್ಲವನ್ನು ವ್ಯವಸ್ಥಿತವಾಗಿ ಆಯೋಜಿಸಲು ನಿರ್ಧರಿಸಲಾಗಿದೆ. ಅಲ್ಲದೇ ಈ ಬಾರಿ ದೀಪಾಲಂಕಾರ ದಸರಾ ಉದ್ಘಾಟನೆಯಾದ ದಿನದಿಂದ ದಸರಾ ಮುಗಿಯುವವರೆಗೂ ಹಾಗೂ ನಂತರ ಒಂದು ವಾರದವವರೆಗೆ ದೀಪಾಲಂಕಾರ ಇರಲಿದೆ.

ಮೈಸೂರಿನ 119 ವೃತ್ತಗಳಲ್ಲಿ ಅಂದರೇ ಬರೋಬ್ಬರಿ 135 ಕಿ.ಮೀ ರಸ್ತೆಗೆ ವಿದ್ಯುತ್ ದೀಪಾಲಂಕಾರ ಮಾಡಲು ತೀರ್ಮಾನಿಸಲಾಗಿದೆ. ಕೆ.ಆರ್.ವೃತ್ತ, ಚಾಮರಾಜ ವೃತ್ತ, ರಾಮಸ್ವಾಮಿ ವೃತ್ತ, ಗನ್​ಹೌಸ್ ವೃತ್ತ, ಎಲ್​ಐಸಿ ವೃತ್ತ ಸೇರಿ ನಗರದ ಹಲವು ಕಡೆ ದೀಪಾಲಂಕಾರ ಮಾಡಲಾಗುತ್ತೆ. ಮೈಸೂರಿನ ಸರ್ಕಾರಿ ಕಟ್ಟಡಗಳಿಗೂ ಝಗಮಗಿಸುವ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತದೆ.

ಇನ್ನು ಮೈಸೂರು ದಸರಾ ಹಬ್ಬಕ್ಕೆ ಈಗಿನಿಂದಲೇ ಗಜಪಡೆಯ ತಾಲೀಮು ಆರಂಭವಾಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ರಾಂಪುರ ಆನೆ ಶಿಬಿರದಿಂದ ದಸರಾ ಜಂಬೂ ಸವಾರಿಗೆ ಎರಡು ಆನೆಗಳು ಆಯ್ಕೆಯಾಗಿವೆ.  ಆನೆ ಶಿಬಿರದಲ್ಲಿ ಪಾರ್ಥಸಾರಥಿ ಮತ್ತು ಕಲ್ಪನಾ ಎರಡು ಆನೆಗಳಿಗೆ ತಾಲೀಮು ನೀಡಲಾಗುತ್ತಿದೆ. ವಾಹನಗಳ ಶಬ್ದಗಳಿಗೆ ಹೆದರಬಾರದೆಂದು ಪ್ರತಿನಿತ್ಯ ಗುಂಡ್ಲುಪೇಟೆ, ಕೇರಳ ಹೆದ್ದಾರಿಯಲ್ಲಿ ಆನೆಗಳು ಪ್ರತಿದಿನ 10 ಕಿ.ಮೀ ಸಂಚಾರ ಮಾಡುತ್ತಿವೆ.  ರಾಂಪುರ ಆನೆ ಶಿಬಿರದಿಂದ ಮೂಲೆಹೊಳೆ ಚೆಕ್ ಪೋಸ್ಟ್ ವರೆಗೂ ನಿತ್ಯ ತಾಲೀಮು ನೀಡಲಾಗುತ್ತಿದೆ.

ಏರ್ ಶೋ ಆಯೋಜನಗೆ ಚಿಂತನೆ

ಪ್ರಸಕ್ತ ವರ್ಷ ದಸರಾ ಅಂಗವಾಗಿ ಏರ್ ಶೋ ಆಯೋಜಿಸಲು ಚಿಂತನೆ ಇದೆ.  ಈ ವಿಚಾರವಾಗಿ ರಕ್ಷಣಾ ಸಚಿವರ ಜೊತೆ ಚರ್ಚೆ ಮಾಡುತ್ತೇವೆ. ಹಿಂದೆ ನಾನು ಮುಖ್ಯಮಂತ್ರಿ ಆಗಿದ್ದಾಗ ದಸರಾ ವೇಳೆ ಏರ್ ಶೋ ಆಯೋಜಿಸಿದ್ದೆವು. ಮೈಸೂರು ದಸರಾ ಮಹೋತ್ಸವದಲ್ಲಿ ಅನಗತ್ಯ ಖರ್ಚು ಇರಬಾರದು. ಶಕ್ತಿ ಯೋಜನೆ ಜಾರಿಯಾಗಿರುವ ಕಾರಣ ಮಹಿಳೆಯರು ಹೆಚ್ಚು ಬರುವ ಸಾಧ್ಯತೆ ಇದೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದರು.

ಲೋಕಸಭೆ ಚುನಾವಣೆ ವೇಳೆಗೆ ರಾಜಕೀಯದಲ್ಲಿ ಅನಾಹುತ: ಹೊಸ ಬಾಂಬ್‌ ಸಿಡಿಸಿದ ಯತ್ನಾಳ್‌

ವಿಜಯಪುರ(ಆ.29):  ಬರುವ ಲೋಕಸಭೆ ಚುನಾವಣೆ ಮುಂಚೆ ಅಥವಾ ಅದರ ನಂತರ ರಾಜಕೀಯ ವಲಯದಲ್ಲಿ ಅನಾಹುತವೊಂದು ನಡೆಯಲಿದೆ. ಈ ಅನಾಹುತಕ್ಕೆ ಕಾಂಗ್ರೆಸ್‌ ಭಯಗೊಂಡಿದೆ. ಅದಕ್ಕಾಗಿಯೇ ಬಿಜೆಪಿಯವರನ್ನು ತಮ್ಮತ್ತ ಸೆಳೆದು ಬರುವ ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್‌ ಸಂಚು ಹೂಡುತ್ತಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಹೊಸ ಬಾಂಬ್‌ ಸಿಡಿಸಿದ್ದಾರೆ. 

ಕಾಂಗ್ರೆಸ್‌ ಪಕ್ಷದ ನಾಯಕರಿಗೆ ತಮ್ಮ ಪಕ್ಷದ 135 ಶಾಸಕರ ಮೇಲೇ ವಿಶ್ವಾಸವಿಲ್ಲ. ಹೀಗಾಗಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಯೋಜಿಸಿ ಬಿಜೆಪಿಯವರಿಗೆ ಗಾಳ ಹಾಕುತ್ತಿದ್ದಾರೆ. ಬಿಜೆಪಿಯವರು ಬಂದರೆ ಮಾತ್ರ ಲೋಕಸಭೆ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂಬ ವಿಶ್ವಾಸವನ್ನು ಕಾಂಗ್ರೆಸ್‌ ಮುಖಂಡರು ಹೊಂದಿದ್ದಾರೆ ಎಂದು ಲೇವಡಿ ಮಾಡಿದರು. ಕರ್ನಾಟಕದಲ್ಲಿ ಬಿಜೆಪಿ ಮುಳುಗುತ್ತಿದೆ ಎಂದು ಕಾಂಗ್ರೆಸಿಗರು ಗುಲ್ಲೆಬ್ಬಿಸಿದ್ದಾರೆ. ಆದರೆ, ಬಿಜೆಪಿ ಸೋಲಿನಿಂದ ಕಂಗೆಡದೆ ಫಿನಿಕ್ಸ್‌ ಪಕ್ಷಿಯಂತೆ ಮತ್ತೆ ಪುಟಿದೇಳಲಿದೆ ಎಂದು ವಿಶ್ವಾಸದಿಂದ ನುಡಿದರು.

ಕಾಂಗ್ರೆಸ್‌ ಪಕ್ಷದ ನಾಯಕರಿಗೆ ತಮ್ಮ ಪಕ್ಷದ 135 ಶಾಸಕರ ಮೇಲೆ ವಿಶ್ವಾಸವಿಲ್ಲ. ಹೀಗಾಗಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿಯವರಿಗೆ ಅವರು ಗಾಳ ಹಾಕುತ್ತಿದ್ದಾರೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರು ಹೊಸ ಬಾಂಬ್‌ ಸಿಡಿಸಿದ್ದಾರೆ.

ವಿಜಯಪುರ ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ರೋಗಿಗಳ ನೋಂದಣಿ ಕೊಠಡಿ ಕಾಮಗಾರಿ ಉದ್ಘಾಟನೆ ಸಮಾರಂಭದ ನಂತರ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು. ಲೋಕಸಭೆ ಚುನಾವಣೆ ಮುಂಚೆ ಅಥವಾ ನಂತರ ರಾಜಕೀಯ ವಲಯದಲ್ಲಿ ಅನಾಹುತ ಕಾದಿದೆ ಎಂದು ಕಾಂಗ್ರೆಸ್‌ ಪಕ್ಷ ಭಯಗೊಂಡಿದೆ. ಅದಕ್ಕಾಗಿಯೇ ಕಾಂಗ್ರೆಸ್‌ ಹೆದರಿ ಬಿಜೆಪಿಯವರನ್ನು ತಮ್ಮತ್ತ ಸೆಳೆದು ಬರುವ ಲೋಕಸಭೆ ಚುನಾವಣೆ ಗೆಲ್ಲಲ್ಲು ಸಂಚು ಹೂಡುತ್ತಿದೆ. ಬಿಜೆಪಿಯವರು ಬಂದರೆ ಮಾತ್ರ ಲೋಕಸಭೆ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂಬ ವಿಶ್ವಾಸವನ್ನು ಕಾಂಗ್ರೆಸ್‌ ಮುಖಂಡರು ಹೊಂದಿದ್ದಾರೆ ಎಂದು ಲೇವಡಿ ಮಾಡಿದರು.

ಬಿಜೆಪಿಯವರು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗುವ ವಿಚಾರದ ಕುರಿತು ಮಾತನಾಡಿದ ಅವರು, ಕರ್ನಾಟಕದಲ್ಲಿ ಬಿಜೆಪಿ ಮುಳುಗುತ್ತಿದೆ ಎಂದು ಗುಲ್ಲೆಬ್ಬಿಸಿರುವ ಕಾಂಗ್ರೆಸ್‌ನವರು ಜನರಲ್ಲಿ ಗೊಂದಲ ಹುಟ್ಟುಹಾಕಲು ಯತ್ನಿಸುತ್ತಿದ್ದಾರೆ. ಆದರೆ, ಬಿಜೆಪಿ ಫಿನಿಕ್ಸ್‌ ಪಕ್ಷಿಯಂತೆ ಮತ್ತೆ ಪುಟಿದೇಳಲಿದೆ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist