ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ತಾಯಿಯ ಬೆತ್ತಲೆಗೊಳಿಸಿ, ಮಗನ ಹತ್ಯೆ

Twitter
Facebook
LinkedIn
WhatsApp
ತಾಯಿಯ ಬೆತ್ತಲೆಗೊಳಿಸಿ, ಮಗನ ಹತ್ಯೆ

ಭೋಪಾಲ್‌: ಮಧ್ಯಪ್ರದೇಶದಲ್ಲಿ ದುಷ್ಕ ರ್ಮಿಗಳ ಗುಂಪೊಂದು ದಲಿತ ಕುಟುಂಬದ ಮೇಲೆ ಅಮಾನುಷವಾಗಿ ದಾಳಿ ನಡೆಸಿ, ದಲಿತ ಮಹಿಳೆಯನ್ನು ವಿವಸ್ತ್ರಗೊಳಿಸಿ, ಆಕೆಯ 18 ವರ್ಷದ ಪುತ್ರನನ್ನು ಥಳಿಸಿ ಕೊಂದಿರುವ ಘಟನೆ ವರದಿಯಾಗಿದೆ.

ಸಾಗರ ಜಿಲ್ಲೆಯಲ್ಲಿ ಈ ಕೃತ್ಯ ನಡೆದಿದೆ. 2019ರಲ್ಲಿ ದಲಿತ ಸಮುದಾಯದ ಯುವತಿಯೊಬ್ಬರು ನಾಲ್ವರ ವಿರುದ್ಧ ಲೈಂಗಿಕ ಕಿರುಕುಳದ ಪ್ರಕರಣ ದಾಖಲಿಸಿದ್ದರು. ಈಗ ಆ ಕೇಸನ್ನು ವಾಪಸ್‌ ಪಡೆಯುವಂತೆ ಪೀಡಿಸಿ, ದುಷ್ಕರ್ಮಿಗಳ ಗುಂಪು ಯುವತಿ ಮನೆಗೆ ಲಗ್ಗೆ ಇಟ್ಟಿದೆ. ಆಕೆಯನ್ನು ಥಳಿಸಿದ್ದು ಮಾತ್ರವಲ್ಲದೇ, ಯುವತಿಯ 18 ವರ್ಷದ ತಮ್ಮನನ್ನು ಹೊಡೆದು ಕೊಂದು ಹಾಕಿದ್ದಾರೆ. ಜತೆಗೆ ಯುವತಿಯ ತಾಯಿಯನ್ನು ವಿವಸ್ತ್ರಗೊಳಿಸಿ ಕ್ರೌರ್ಯ ಮೆರೆದಿದ್ದಾರೆ.

“ಘಟನೆ ನಡೆದ ಬಳಿಕ ಪೊಲೀಸರು ಸ್ಥಳಕ್ಕಾಗಮಿಸಿ ನನಗೆ ಟವೆಲ್‌ ನೀಡಿದರು, ನನಗಾಗಿ ಬೇರೆ ಸೀರೆ ಹುಡುಕಿ ತರು ವವರೆಗೂ ನಾನು ಟವಲ್‌ ಧರಿಸಿಯೇ ಇದ್ದೆ. ನನ್ನ ಮಗನನ್ನು ತೀವ್ರವಾಗಿ ಥಳಿಸಿದ್ದರಿಂದ ಆತ ಮೃತಪಟ್ಟಿದ್ದಾನೆ’ ಎಂದು ಯುವತಿಯ ತಾಯಿ ಹೇಳಿಕೊಂಡಿದ್ದಾರೆ. ಇನ್ನು ದುಷ್ಕರ್ಮಿಗಳು ಸಂತ್ರಸ್ತರ ಮನೆಯನ್ನು ಧ್ವಂಸಗೊಳಿಸಿದ್ದಲ್ಲದೇ, ಅಕ್ಕ-ಪಕ್ಕದಲ್ಲಿದ್ದ ನೆಂಟರಿಷ್ಟರ ಮನೆಗೂ ನುಗ್ಗಿ, ಯಾರೂ ಸಹಾಯ ಮಾಡಬಾರದೆಂದು ಬೆದರಿಕೆ ಹಾಕಿ ಹೋಗಿದ್ದಾರೆ ಎಂದೂ ಯುವತಿಯ ಕುಟುಂಬಸ್ಥರು ಆರೋಪಿಸಿದೆ.

ಈ ಸಂಬಂಧಿಸಿದಂತೆ ಪೊಲೀಸರು 12 ಮಂದಿ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ, 8 ಮಂದಿಯನ್ನು ಬಂಧಿಸಿದ್ದಾರೆ. ಉಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ. ಇತ್ತ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಹಾಗೂ ದಲಿತರ ಮೇ ಲಿನ ದೌರ್ಜನ್ಯ ತಡೆಗಟ್ಟುವಲ್ಲಿ ರಾಜ್ಯಸರಕಾರ ವಿಫ‌ಲವಾಗಿದೆ ಎಂ ದು ಬಿಜೆಪಿ ವಿರುದ್ಧ ಕಾಂಗ್ರೆಸ್‌ ಹರಿಹಾಯ್ದರೇ, ಸಾವಲ್ಲೂ ಕಾಂಗ್ರೆಸ್‌ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

ಆಡಳಿತಾಧಿಕಾರಿಗಳ ಕಿರುಕುಳ; ವೈದ್ಯ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಆಡಳಿತಾಧಿಕಾರಿಗಳ ಕಿರುಕುಳ ಆರೋಪ, ವೈದ್ಯರೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನಲ್ಲಿ ನಡೆದಿದೆ.

ಕೊಪ್ಪ ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ. ಸಂದೀಪ್ ಬಾಳೆಹೊನ್ನೂರಿನ ಮನೆಯಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಆಡಳಿತಾಧಿಕಾರಿ ಪದೇ-ಪದೇ ನೋಟಿಸ್ ನೀಡುತ್ತಿದ್ದರು ಎನ್ನಲಾಗುತ್ತಿದೆ ಹಾಗೂ ವೈಯಕ್ತಿಕ ಕಾರಣಗಳಿಂದಲೂ ವೈದ್ಯರು ಮನನೊಂದಿದ್ದರು ಎನ್ನಲಾಗುತ್ತಿದೆ.

ಮಾತ್ರೆ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ ವೈದ್ಯರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಆಡಳಿತಾಧಿಕಾರಿಗಳ ಕಿರುಕುಳ ತಾಳಲಾರದೆ ಕೆಲ ನರ್ಸ್ ಗಳ ವರ್ಗಾವಣೆ ಮಾಡಿದ್ದು, ಕೆಲಸ ನಿರ್ವಹಿಸಲು ಉತ್ತಮ ವಾತಾವರಣ ಇಲ್ಲವೆಂದು ಸಿಬ್ಬಂದಿಗಳು ಆರೂಪಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ