ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಾಂಗ್ರೆಸ್ ಸೇರ್ತಾರಾ ಹಿರಿಯೂರು ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌?

Twitter
Facebook
LinkedIn
WhatsApp
ಕಾಂಗ್ರೆಸ್ ಸೇರ್ತಾರಾ ಹಿರಿಯೂರು ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌?

ಬೆಂಗಳೂರು: “ಆಪರೇಷನ್‌ ಹಸ್ತ’ದ ಸುದ್ದಿಗಳು ನಿತ್ಯ ಚರ್ಚೆಯಾಗುತ್ತಿರುವುದರ ನಡುವೆಯೇ ಹಿರಿಯೂರು ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಅವರು ತಮಗೆ ಕಾಂಗ್ರೆಸ್‌ನಿಂದ ಆಹ್ವಾನವಿದೆ. ಆದರೆ ಬಿಜೆಪಿ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಶ್ರೀಕೃಷ್ಣಜನ್ಮಾಷ್ಟಮಿ ಅಂಗವಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ತನ್ನ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಪೂರ್ಣಿಮಾ, ಹಬ್ಬಕ್ಕೆ ಆಹ್ವಾನ ನೀಡಿದ್ದರಿಂದ ಅವರು ಬಂದಿದ್ದರು. ಅದರಲ್ಲಿ ವಿಶೇಷತೆ ಏನೂ ಇಲ್ಲ ಎಂದರು.

ಕಾಂಗ್ರೆಸ್‌ನಿಂದ ಆಹ್ವಾನ ಇರುವುದು ನಿಜ. ಕದ್ದುಮುಚ್ಚಿ ಕಾಂಗ್ರೆಸ್‌ ಸೇರುವುದಿಲ್ಲ. ಆದರೆ ಬಿಜೆಪಿ ಬಿಡುವ ಬಗ್ಗೆ ಯೋಚಿಸಿಲ್ಲ ಎಂದಿದ್ದಾರೆ.


ಡಿಕೆಶಿ ಪ್ರತಿಕ್ರಿಯೆ
ಪೂರ್ಣಿಮಾ ಹಬ್ಬಕ್ಕೆ ಕರೆದಿದ್ದ ಕಾರಣ ಬಂದಿದ್ದೆ. ಕೃಷ್ಣನ ಆಶೀರ್ವಾದ ಪಡೆದಿದ್ದೇನೆ. ಊಟ ಮಾಡಿದ್ದೇನೆ ಎಂದಷ್ಟೇ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.

ಬಾರದ ಸಚಿವರು: ಕಳೆಗುಂದಲಾರಂಭಿಸಿದೆ ಶಕ್ತಿಸೌಧ

ಬೆಂಗಳೂರು: ಸರಕಾರ ಅಧಿಕಾರಕ್ಕೆ ಬಂದ ಆರಂಭದಲ್ಲಿ ಸಾರ್ವಜನಿಕರು ಹಾಗೂ ಕಾರ್ಯಕರ್ತರಿಂದ ವಿಧಾನಸೌಧ ಗಿಜಿಗುಡುತ್ತಿತ್ತು. ಶಕ್ತಿಕೇಂದ್ರದಲ್ಲಿ ತಮ್ಮ ಸಂಕಷ್ಟಗಳಿಗೆ ಪರಿಹಾರ ಸಿಗಬಹುದೆಂಬ ಆಶಾವಾದದೊಂದಿಗೆ ಸಾವಿರಾರು ಜನರು ವಿಧಾನಸೌಧಕ್ಕೆ ಭೇಟಿ ನೀಡುತ್ತಿದ್ದರು. ಆದರೆ ಶತದಿನೋತ್ಸವದ ಸಂಭ್ರಮ ಮುಗಿಯುವ ಹೊತ್ತಿಗೆ ಶಕ್ತಿಸೌಧದಲ್ಲಿ ಈಗ ಮೊದಲಿನ ಉತ್ಸಾಹ ಉಳಿದಿಲ್ಲ.

ಐದು ವರ್ಷಗಳ ಬಳಿಕ ಅಧಿಕಾರಕ್ಕೆ ಬಂದ ಸಂಭ್ರಮದಲ್ಲಿ ವಿಧಾನಸೌಧದಲ್ಲಿ ವಿಶೇಷ ಪೂಜೆ ಮಾಡಿ ಕಚೇರಿಗೆ ಆಗಮಿಸಿದ್ದ ಸಚಿವರು ಈಗ ವಿಧಾನಸೌಧಕ್ಕೆ ಆಗಮಿಸುವುದೇ ವಿರಳವಾಗಿದೆ. ಸಚಿವ ಸಂಪುಟ ಸಭೆ, ಉಪಸಮಿತಿ ಸಭೆ, ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಆಯೋಜನೆಯಾದ ಸಭೆಗಳಿಗೆ ಮಾತ್ರ ಸಂಬಂಧಪಟ್ಟ ಸಚಿವರು ಮಾತ್ರ ಆಗಮಿಸುತ್ತಿದ್ದು, ಉಳಿದಂತೆ ಸಚಿವರ ಕಚೇರಿ ಈಗ ಭಣಗುಟ್ಟುತ್ತಿದೆ. ಸಚಿವರು ಪ್ರವಾಸದಲ್ಲಿದ್ದಾಗ ಅಥವಾ ಕ್ಷೇತ್ರದಲ್ಲಿ ಇದ್ದಾಗ ಆಪ್ತ ಕಾರ್ಯದರ್ಶಿಗಳು (ಪಿಎಸ್‌) ಕಚೇರಿಯ ಮೇಲ್ವಿಚಾರಣೆಯ ಜವಾಬ್ದಾರಿ ಹೊತ್ತಿರುತ್ತಾರೆ. ಆದರೆ ಎಷ್ಟೋ ಕಚೇರಿಗಳಲ್ಲಿ ಈಗ ಆಪ್ತ ಕಾರ್ಯದರ್ಶಿಗಳೂ ಸಾರ್ವಜನಿಕರಿಗೆ ಲಭ್ಯರಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಅವಧಿ ಮುಕ್ತಾಯದ ಹಂತದಲ್ಲಿರುವ ಸರಕಾರ ಅಸ್ತಿತ್ವದಲ್ಲಿದೆಯೋ ಎಂಬ ಭಾವನೆ ಮೂಡುತ್ತಿದೆ.

ನವೀಕರಣ ಮುಗಿದಿಲ್ಲ
ಕೆಲವು ಸಚಿವರು ವಿಧಾನಸೌಧಕ್ಕೆ ಬರುವ ಆಸಕ್ತಿಯನ್ನು ಕಳೆದುಕೊಳ್ಳುತ್ತಿದ್ದರೆ, ಇನ್ನು ಕೆಲವರ ಕಚೇರಿ ನವೀಕರಣ ಕಾರ್ಯ ಪ್ರಗತಿಯಲ್ಲಿದೆ. ಮೂರನೇ ಮಹಡಿಯಲ್ಲಿರುವ ಮೂರು ಪ್ರಮುಖ ಸಚಿವರ ಕಚೇರಿ ಇನ್ನೂ ನವೀಕರಣವಾಗುತ್ತಲೇ ಇದೆ. ಮೂರನೇ ಮಹಡಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌, ಗೃಹ ಸಚಿವ ಡಾ| ಜಿ.ಪರಮೇಶ್ವರ, ಕೆ.ಜೆ.ಜಾರ್ಜ್‌ ಹೊರತುಪಡಿಸಿದರೆ ಉಳಿದ ಸಚಿವರ ಕಚೇರಿಗಳು ಬಹುತೇಕ ಸಂದರ್ಭದಲ್ಲಿ ಭಣಗುಡುತ್ತಿವೆ. ಸಂಪುಟ ಸಭೆಯ ದಿನ ಮಾತ್ರ ವಿಧಾನಸೌಧದಲ್ಲಿ ಕೊಂಚ ಚಟುವಟಿಕೆ ಕಾಣುತ್ತಿದೆ.

ಸಚಿವರು ವಿಧಾನಸೌಧದಲ್ಲಿ ಲಭ್ಯವಾಗದಿರುವ ಬಗ್ಗೆ ಕಾಂಗ್ರೆಸ್‌ ಶಾಸಕರಿಂದಲೂ ಬೇಸರ ವ್ಯಕ್ತವಾಗುತ್ತಿದೆ. ಶಾಸಕಾಂಗ ಸಭೆ ಸಂದರ್ಭದಲ್ಲಿ ಸೃಷ್ಟಿಯಾದ ವಿವಾದದ ಬಳಿಕವೂ ಸಚಿವರು ಕೈಗೆ ಸಿಗುತ್ತಿಲ್ಲ. ಈ ಬಗ್ಗೆ ಬಹಿರಂಗವಾಗಿ ಅಭಿಪ್ರಾಯ ವ್ಯಕ್ತಪಡಿಸಲಾಗದ ಸ್ಥಿತಿ ನಿರ್ಮಾಣವಾಗಿದೆ. ಈ ಹಿಂದೆ ವರ್ಗಾವಣೆ ಸಂದರ್ಭದಲ್ಲಾದರೂ ಸಚಿವರ ಕಚೇರಿಯಲ್ಲಿ ಕಾಣುತ್ತಿದ್ದ ಚಟುವಟಿಕೆ ಈಗ ಮಾಯವಾಗಿದೆ.

ಸಚಿವರಿಂದ ತಮ್ಮ ಅಹವಾಲುಗಳಿಗೆ ಬೆಲೆ ಇಲ್ಲ ಎಂಬುದನ್ನು ಮನಗಂಡಿರುವ ಶಾಸಕರು ಈಗ ನೇರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಭೇಟಿ ಮಾಡುತ್ತಿದ್ದಾರೆ. ರಾಜ್ಯ ಮುಖ್ಯ ಕಾರ್ಯದರ್ಶಿ, ಪೊಲೀಸ್‌ ಮಹಾನಿರ್ದೇಶಕರು, ಗುಪ್ತದಳದ ಐಜಿಪಿ ಜತೆಗೆ ಮುಖ್ಯಮಂತ್ರಿಗಳ ಮುಂಜಾನೆಯ ಸಭೆ ಮುಕ್ತಾಯವಾಗುವ ಹೊತ್ತಿಗೆ ಶಾಸಕರು ಭೇಟಿ ಮಾಡಿ ತಮ್ಮ ಅಹವಾಲುಗಳನ್ನು ತೋಡಿಕೊಳ್ಳುತ್ತಿದ್ದಾರೆ.

ಈ ಹಿಂದೆ ಸಿದ್ದರಾಮಯ್ಯ ಸರಕಾರ ಅಧಿಕಾರದಲ್ಲಿದ್ದಾಗಲೂ ಸಚಿವರು ವಿಧಾನಸೌಧದಲ್ಲಿ ಲಭ್ಯರಿಲ್ಲ ಎಂಬ ಕೂಗು ಬಲವಾಗಿತ್ತು. ಈ ಹಿನ್ನೆಲೆಯಲ್ಲಿ ಶಾಸಕರ ಭೇಟಿಗೆ ಸಚಿವರು ಹಾಗೂ ಪ್ರಧಾನ ಕಾರ್ಯದರ್ಶಿಗಳು ಸಮಯ ನಿಗದಿ ಮಾಡುವಂತೆ ನಿರ್ದೇಶನ ನೀಡಲಾಗಿತ್ತು. ಈಗ ಮತ್ತೆ ಹಳೆಯ ಸನ್ನಿವೇಶ ನಿರ್ಮಾಣವಾಗಿದ್ದು, ವಿಧಾನಸೌಧ ಬಿಟ್ಟು ಬೇರೆಡೆ ಕಾರ್ಯಕ್ಷೇತ್ರ ಬದಲಾಯಿಸಿಕೊಂಡಿರುವ ಸಚಿವರಿಗೆ ಖುದ್ದು ಮುಖ್ಯಮಂತ್ರಿಯೇ ಪಾಠ ಮಾಡುವ ಸ್ಥಿತಿ ನಿರ್ಮಾಣವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist