Yash-Radhika: ಯಶ್-ರಾಧಿಕಾ ಪುತ್ರಿ ಜೊತೆ ತುಂಟಾಟ; ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್!
Yash-Radhika: ಸ್ಯಾಂಡಲ್ವುಡ್ನ ಸ್ಟಾರ್ ಜೋಡಿ ಅಂದ್ರೆ ಥಟ್ ಅಂತ ನೆನಪಾಗೋದೆ ಯಶ್ ಹಾಗೂ ರಾಧಿಕಾ ಪಂಡಿತ್ (Yash-Radhika), ಈ ಜೋಡಿಗೆ ಅಪಾರ ಅಭಿಮಾನಿಗಳಿದ್ದಾರೆ. ಯಶ್ ಸಿನಿಮಾ ಕೆಲಸದಲ್ಲಿ ಬ್ಯುಸಿ ಆಗಿದ್ದು, ರಾಧಿಕಾ ಮಕ್ಕಳ ಲಾಲನೆ-ಪಾಲನೆಯಲ್ಲಿ ಬ್ಯುಸಿ ಆಗಿದ್ದಾರೆ.
ಚಂದನವನದ ಚಂದದ ಕಪಲ್ ನಟ ಯಶ್ ಹಾಗೂ ರಾಧಿಕಾ ಪಂಡಿತ್ ಇದೀಗ ವೆಕೇಷನ್ ಮೂಡ್ನಲ್ಲಿದ್ದಾರೆ. ಮಕ್ಕಳ ಜೊತೆ ಟ್ರಿಪ್ ಎಂಜಾಯ್ ಮಾಡ್ತಿದ್ದಾರೆ.
ಕೆಜಿಎಫ್ 2 (KGF 2) ಸಕ್ಸಸ್ ಬಳಿಕ ಸಿನಿಮಾದಿಂದ ನ್ಯಾಷನಲ್ ಸ್ಟಾರ್ ಯಶ್(Yash) ಬ್ರೇಕ್ ತೆಗೆದುಕೊಂಡಿದ್ದಾರೆ. ಕುಟುಂಬಕ್ಕೆ ಹೆಚ್ಚು ಸಮಯ ಮೀಸಲಿಡುತ್ತಿದ್ದಾರೆ. ಇದೀಗ ಸಮುದ್ರ ತೀರದಲ್ಲಿ ಕಾಲ ಕಳೆಯುತ್ತಿರುವ ಸುಂದರ ಫೋಟೋವನ್ನು ರಾಧಿಕಾ ಪಂಡಿತ್ (Radhika Pandit) ಹಂಚಿಕೊಂಡಿದ್ದಾರೆ. ನಟಿಯ ಹೊಸ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಮುದ್ದಾದ ಜೋಡಿಗೆ ಲೈಕ್ಗಳ ಸುರಿಮಳೆಯಾಗಿದೆ.
ರಾಧಿಕಾ ಪಂಡಿತ್ ಅವರು ಪ್ರತಿ ವಾರಾಂತ್ಯ ಫ್ಯಾನ್ಸ್ಗಾಗಿ ಹೊಸ ಪೋಸ್ಟ್ ಶೇರ್ ಮಾಡುತ್ತಾರೆ. ಈ ವಾರವೂ ಅದನ್ನು ಮುಂದುವರಿಸಿಕೊಂಡು ಹೋಗಿದ್ದಾರೆ. ರಾಧಿಕಾ ಪಂಡಿತ್ ಅವರು ಸಮುದ್ರ ತೀರದಲ್ಲಿ ಕುಳಿತಿದ್ದಾರೆ. ಯಶ್ ಕೂಡ ಅವರ ಜೊತೆ ಇದ್ದಾರೆ. ಯಶ್ ಹೆಗಲ ಮೇಲೆ ಆಯ್ರಾ ಯಶ್ ಕೂಡ ಕುಳಿತಿದ್ದಾರೆ. ಅವರ ಕುಟುಂಬದ ಚೆಂದದ ಫೋಟೋ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.
ಸಮುದ್ರ ತೀರದಲ್ಲಿ ಮಕ್ಕಳ ಜೊತೆ ಯಶ್-ರಾಧಿಕಾ ಆಟ-ತುಂಟಾಟ ಮಾಡುತ್ತಾ ಕಾಲ ಕಳೆದಿದ್ದಾರೆ. ಮಕ್ಕಳು ಕೂಡ ಎಂಜಾಯ್ ಮಾಡಿದ್ದಾರೆ. ಯಶ್ ಹಾಗೂ ರಾಧಿಕಾ ಪಂಡಿತ್ ಇಬ್ಬರು ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಶೇರ್ ಮಾಡಿದ್ದಾರೆ.
ನಟ ಯಶ್ ಅವರನ್ನು ಪ್ರೀತಿಸುತ್ತಿದ್ದ ರಾಧಿಕಾ ಪಂಡಿತ್, 2016 ಡಿಸೆಂಬರ್ 9ರಂದು ಗೋವಾದಲ್ಲಿ ಮದುವೆಯಾದ್ರು. ಈ ಜೋಡಿಗೆ ಐರಾ ಹಾಗೂ ಯಥರ್ವ್ ಎಂಬ ಇಬ್ಬರು ಮುದ್ದಾದ ಮಕ್ಕಳಿದ್ದಾರೆ. ರಾಧಿಕಾ ಪಂಡಿತ್ ಮಕ್ಕಳಾದ ಐರಾ ಹಾಗೂ ಯಥರ್ವ್ ಜೊತೆ ಸಾರ್ವಜನಿಕವಾಗಿ ಹೆಚ್ಚಾಗಿ ಕಾಣಿಸಿಕೊಳ್ತಾರೆ.
ಯಶ್ 19 (Yash 19) ಸಿನಿಮಾಗಾಗಿ ರಾಕಿಭಾಯ್ ತೆರೆಮರೆಯಲ್ಲಿ ತಯಾರಿ ಮಾಡ್ತಿದ್ದಾರೆ. ಮುಂದಿನ ಸಿನಿಮಾ ಬಗ್ಗೆ ಅಧಿಕೃತವಾಗಿ ಅನೌನ್ಸ್ ಆಗುವವರೆಗೂ ತಮ್ಮ ಪ್ರಾಜೆಕ್ಟ್ ಬಗ್ಗೆ ಎಲ್ಲಿಯೂ ಲೀಕ್ ಆಗದಂತೆ ನಟ ನೋಡಿಕೊಳ್ತಿದ್ದಾರೆ. ಅಕ್ಟೋಬರ್ನಲ್ಲಿ ಯಶ್ ಮುಂದಿನ ಸಿನಿಮಾ ಬಗ್ಗೆ ಉತ್ತರ ಸಿಗಲಿದೆ ಎನ್ನಲಾಗುತ್ತಿದೆ.
ಸ್ಯಾಂಡಲ್ವುಡ್ (Sandalwood) ಸಿಂಡ್ರೆಲಾ ರಾಧಿಕಾ ಪಂಡಿತ್ (Radhika Pandit) ನಟನೆಯ ಮೊಗ್ಗಿನ ಮನಸ್ಸು (Moggina Manasu) ಟು ಆದಿಲಕ್ಷ್ಮಿ ಪುರಾಣ ಸಿನಿಮಾವರೆಗೂ ಉತ್ತಮ ಸಿನಿಮಾಗಳನ್ನ ನೀಡಿ ಅಭಿಮಾನಿಗಳ ಪಾಲಿಗೆ ನೆಚ್ಚಿನ ನಾಯಕಿಯಾಗಿ ಮಿಂಚಿದವರು. ಈಗ ಮದುವೆ, ಸಂಸಾರ ಅಂತಾ ಕುಟುಂಬದ ಕಡೆಗೆ ಹೆಚ್ಚಿನ ಗಮನ ನೀಡುತ್ತಿದ್ದಾರೆ. ಸಿನಿಮಾಗೆ ಕಮ್ಬ್ಯಾಕ್ ಆಗುವ ಬಗ್ಗೆ ನಟಿ ಮನಸ್ಸು ಮಾಡಿದ್ದಾರೆ ಎನ್ನಲಾಗುತ್ತಿದೆ.