ಬೆಂಗಳೂರಿನ ವಿಧಾನಸೌಧಕ್ಕೆ ನೆದರ್ಲ್ಯಾಂಡ್ ಪ್ರಧಾನಮಂತ್ರಿ ಮಾರ್ಕ್ ರುಟ್ಟೆ ಭೇಟಿ
ಬೆಂಗಳೂರು, ಸೆ.11: ಬೆಂಗಳೂರಿನ ವಿಧಾನಸೌಧಕ್ಕೆ ನೆದರ್ಲ್ಯಾಂಡ್ ಪ್ರಧಾನಮಂತ್ರಿ ಭೇಟಿ ನೀಡಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ಎಂ.ಬಿ.ಪಾಟೀಲ್ ಅವರು ನೆದರ್ಲ್ಯಾಂಡ್ ಪ್ರಧಾನಿ ಮಾರ್ಕ್ ರುಟ್ಟೆ ಅವರಿಗೆ ಹೂ ಗುಚ್ಚ ನೀಡಿ ಸ್ವಾಗತಿಸಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾರ್ಕ್ ರುಟ್ಟೇ ಜೊತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಸಭೆ ನಡೆಸಲಿದ್ದಾರೆ.
ಬಿಕೆ ಹರಿಪ್ರಸಾದ್ ಯಾರ ಬಗ್ಗೆ ಯಾಕೆ ಟೀಕೆ ಮಾಡುತ್ತಿದ್ದಾರೆ ಅರ್ಥವಾಗುತ್ತಿಲ್ಲ: ದಿನೇಶ್ ಗುಂಡೂರಾವ್
ಮಂಗಳೂರು, ಸೆ.11: ಬಿ.ಕೆ.ಹರಿಪ್ರಸಾದ್ (B.K.Hariprasad) ಅವರು ಯಾರ ಬಗ್ಗೆ ಟೀಕೆ ಮಾಡುತ್ತಿದ್ದಾರೆ, ಯಾಕೆ ಮಾಡುತ್ತಿದ್ದಾರೆ ಎಂಬುದು ಅರ್ಥವಾಗುತ್ತಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಹೇಳಿದ್ದಾರೆ. ಕಾಂಗ್ರೆಸ್ ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ನಿರಂತರವಾಗಿ ವಾಗ್ದಾಳಿ ನಡೆಸುತ್ತಿರುವ ಬಗ್ಗೆ ಮಂಗಳೂರಿನಲ್ಲಿ ಮಾತನಾಡಿದ ಅವರು, ಈಗಾಗಲೇ ಹೈಕಮಾಂಡ್ ಅವರಿಗೆ ಏನೂ ಮಾತನಾಡಬೇಡಿ ಹೇಳಿದೆ. ಅವರು ಹೇಳುವುದು ಸರಿಯಲ್ಲ, ಒಬ್ಬ ರಾಜಕಾರಣಿ ಆ ರೀತಿ ಮಾತನಾಡಬಾರದು ಎಂದರು.
ಬಿಕೆ ಹರಿಪ್ರಸಾದ್ ಅವರಿಗೆ ಅಸಮಾಧಾನ ಯಾಕೆ ಎಂಬುದು ಗೊತ್ತಿಲ್ಲ. ಪಕ್ಷದಲ್ಲಿ ಸ್ಥಾನ ಸಿಗುತ್ತದೆ ಮತ್ತು ಹೋಗುತ್ತದೆ. ಆದರೆ ಒಂದು ಸಾರ್ವಜನಿಕ ವೇದಿಕೆಯಲ್ಲಿ ಆ ರೀತಿ ಮಾತನಾಡಬಾರದು. ಇದರಿಂದ ಯಾರಿಗೂ ತೊಂದರೆ ಆಗಿಲ್ಲ, ಅವರಿಗೇ ಡ್ಯಾಮೇಜ್ ಆಗುತ್ತಿದೆ. ನಮ್ಮ ಪಕ್ಷ ಬೇಧಬಾವ ಮಾಡಿಲ್ಲ, ಅಂಥದ್ದೂ ಮಾಡಿಯೂ ಇಲ್ಲ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಕೆ ಹರಿಪ್ರಸಾದ್ ನಿರಂತರವಾಗಿ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಯಾರ ಎಚ್ಚರಿಕೆಗೂ ಬಗ್ಗದ ಹರಿಪ್ರಸಾದ್ ಅವರ ಮನಿಸು ಕಾಂಗ್ರೆಸ್ ಹೈಕಮಾಂಡ್ಗೆ ತಲೆಬಿಸಿಯಾಗಿ ಪರಿಣಮಿಸಿದೆ. ಹೀಗಾಗಿ ಅವರ ಮುನಿಸು ಶಮನಕ್ಕೆ ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಯತ್ನಿಸಿದ್ದಾರೆ.