ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಬಿ.ಕೆ. ಹರಿಪ್ರಸಾದ್‌ಗೆ (BK Hariprasad) ಎಐಸಿಸಿಯಿಂದ ಶೋಕಾಸ್ ನೋಟಿಸ್!

Twitter
Facebook
LinkedIn
WhatsApp
Show cause notice from AICC to BK Hariprasad

BK Hariprasad ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕರಾಗಿರುವ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ (BK Hariprasad)ಅವರಿಗೆ ಎಐಸಿಸಿ ಶಿಸ್ತುಸಮಿತಿ ಶೋಕಾಸ್ ನೋಟಿಸ್ ನೀಡಿದೆ.

ಕಾಂಗ್ರೆಸ್‌ ಕಾರ್ಯಕಾರಿಣಿ ಸಮಿತಿ ಖಾಯಂ ಸದಸ್ಯರೂ ಆಗಿರುವ ಬಿ.ಕೆ. ಹರಿಪ್ರಸಾದ್‌ ಪಕ್ಷದ ಶಿಸ್ತು ಉಲ್ಲಂಘಿಸಿದ್ದಾರೆ ಎಂಬ ದೂರನ್ನು ಸ್ವೀಕರಿಸಿದ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಾರ್ವಜನಿಕವಾಗಿ ಟೀಕಿಸಿರುವುದರ ಬಗ್ಗೆ 10 ದಿನಗಳ ಒಳಗಾಗಿ ಉತ್ತರ ನೀಡುವಂತೆ ಸೂಚಿಸಲಾಗಿದೆ.

ಕಳೆದ ಶನಿವಾರ  ಅರಮನೆ ಮೈದಾನದಲ್ಲಿ ಈಡಿಗ, ಬಿಲ್ಲವ, ನಾಮಧಾರಿ, ದೀವರು ಮತ್ತು ಅತಿ ಹಿಂದುಳಿದ ವರ್ಗಗಳ ಬೃಹತ್​​ ಸಮಾವೇಶದಲ್ಲಿ ಮಾತನಾಡಿದ ಬಿ.ಕೆ. ಹರಿಪ್ರಸಾದ್, ದೇವರಾಜ ಅರಸು ಕಾರಿನಲ್ಲಿ ಕುಳಿತರೆ ದೇವರಾಜ ಅರಸು ಆಗಲ್ಲ: ಹಿಂದಿನ ಯಾವ ಮುಖ್ಯಮಂತ್ರಿಗಳೂ ಜಾತಿ ರಾಜಕಾರಣ ಮಾಡಲಿಲ್ಲ. ಕಾಗೋಡು ತಿಮ್ಮಪ್ಪ, ಬಂಗಾರಪ್ಪ ಜಾತಿ ರಾಜಕಾರಣ ಮಾಡಲಿಲ್ಲ. ಪಂಚೆ ಹಾಕಿಕೊಂಡು ವಾಚ್ ಕಟ್ಟಿಕೊಂಡು ಖಾಕಿ ಚಡ್ಡಿ ಹಾಕೊಂಡು, ಸಮಾಜವಾದಿ ಅಂತಾ ಹೇಳಿದರೆ ಆಗುವುದಿಲ್ಲ, ದೇವರಾಜ ಅರಸು ಕಾರಿನಲ್ಲಿ ಕುಳಿತರೆ ದೇವರಾಜ ಅರಸು ಆಗಲ್ಲ. ದೇವರಾಜ ಅರಸು ಚಿಂತನೆ ಇರಬೇಕು ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದರು. 

ಪಕ್ಷಕ್ಕೆ ಡ್ಯಾಮೇಜ್ ಆಗುವ ಹೇಳಿಕೆ ಹಿನ್ನೆಲೆಯಲ್ಲಿ ಬಿ.ಕೆ. ಹರಿಪ್ರಸಾದ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಮಾಲೂರಿನ ಶಾಸಕ ಕೆ.ವೈ. ನಂಜೇಗೌಡ ಮತ್ತಿತರ ಸಿದ್ದು ಬಣದ ಶಾಸಕರು ಕೆಪಿಸಿಸಿ ಹಾಗೂ ಎಐಸಿಸಿ ಶಿಸ್ತು ಸಮಿತಿಯನ್ನು ಒತ್ತಾಯಿಸಿದ್ದರು. ಇದರ ಬೆನ್ನಲ್ಲಿಯೇ ಹರಿಪ್ರಸಾದ್‌ಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಕೇಳಿಬಂದಿದೆ.ಡಾ ಜಿ ಪರಮೇಶ್ವರ್ ಅವರನ್ನು ಸಿಎಂ ಇರಲಿ ಡಿಸಿಎಂ ಸ್ಥಾನದಿಂದಲೂ ಡಿಪ್ರಮೋಟ್ ಮಾಡಲಾಯಿತು. ಅತಿ ಹೆಚ್ಚು ಅವಧಿಗೆ ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷರಾಗಿದ್ದರು. ಅವರಿಗೆ ಸಿಎಂ ಆಗಲು ಎಲ್ಲಾ ಅರ್ಹತೆಗಳಿದ್ದವು. ಆದರೆ ಅವರನ್ನು ಮಾಡಲಿಲ್ಲ. ಈಗಲೂ ಸರ್ಕಾರದಲ್ಲಿ ದಲಿತರನ್ನು ಉಪಮುಖ್ಯಮಂತ್ರಿ ಮಾಡಬಹುದಿತ್ತು. ಸತೀಶ್ ಜಾರಕಿಹೊಳಿಯನ್ನು ಮಾಡಬಹುದಿತ್ತು, ಆದರೆ ಮಾಡಿಲ್ಲ ಎಂದು ಬಿ.ಕೆ. ಹರಿಪ್ರಸಾದ್‌ ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದರು. 

ಬಿಕೆ ಹರಿಪ್ರಸಾದ್ ಕಾಂಗ್ರೆಸ್ ಪಕ್ಷದಲ್ಲಿ ಕಟ್ಟಾಳಾಗಿ ಗುರುತಿಸಿಕೊಂಡವರು. 19 ರಾಜ್ಯಗಳ ಕಾಂಗ್ರೆಸ್‌ ಉಸ್ತುವಾರಿಯಾಗಿ ಕೆಲಸ ಮಾಡಿದವರು. 9 ಪಿಸಿಸಿ ಅಧ್ಯಕ್ಷರ ಆಯ್ಕೆ ಮತ್ತು ಐದು ರಾಜ್ಯಗಳಲ್ಲಿ ಕಾಂಗ್ರೆಸ್‌ ಸಿಎಂ ಆಯ್ಕೆಯಲ್ಲೂ ಬಿಕೆ ಹರಿಪ್ರಸಾದ್ ಪಾತ್ರ ಮಹತ್ವದ್ದಾಗಿತ್ತು. ಹೈಕಮಾಂಡ್‌ ಜೊತೆಗೆ ಒನ್ ಟು ಒನ್ ಒಡನಾಟವನ್ನು ಇಟ್ಟುಕೊಂಡವರು. ಪಕ್ಷದ ಸಂಘಟನೆಯಲ್ಲಿ ಹಾಗೂ ನಿರ್ಧಾರಗಳಲ್ಲಿ ಬಿಕೆ ಹರಿಪ್ರಸಾದ್ ಪಾತ್ರವೂ ಗಮನಾರ್ಹವಾಗಿದೆ.

ರಾಷ್ಟ್ರೀಯ ರಾಜಕಾರಣದಲ್ಲಿ ಹೆಚ್ಚಾಗಿ ಗುರುತಿಸಿಕೊಂಡಿದ್ದ ಬಿ.ಕೆ ಹರಿಪ್ರಸಾದ್ ಗೆ ಚುನಾವಣಾ ರಾಜಕೀಯ ಸ್ವಲ್ಪ ದೂರ. ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣದಲ್ಲಿ ಕಳೆದ ಬಾರಿ ನಿಂತರೂ ಸೋಲನ್ನು ಅನುಭವಿಸಿದರು. ರಾಜ್ಯಸಭೆ ಸದಸ್ಯರಾಗಿದ್ದ ಬಳಿಕ ರಾಜ್ಯ ರಾಜಕೀಯಕ್ಕೆ ಎಂಟ್ರಿ ಪಡೆದುಕೊಂಡ ಅವರು, ವಿಧಾನಪರಿಷತ್ ವಿರೋಧ ಪಕ್ಷದ ನಾಯಕರಾಗಿ ಕೆಲಸ ಮಾಡಿದವರು.

ಸಂಘಪರಿವಾರ ಹಾಗೂ ಬಲಪಂಥೀಯರ ವಿರುದ್ಧ ಕಾಂಗ್ರೆಸ್‌ ಪಕ್ಷದಲ್ಲಿ ನೇರ ವಾಗ್ದಾಳಿ ನಡೆಸುವ ಕೆಲವೇ ನಾಯಕರ ಪೈಕಿ ಇವರು ಒಬ್ಬರೆಂದೇ ಗುರುತಿಸಿಕೊಂಡವರು. ಭಾರತ್ ಜೋಡೋ ಯಾತ್ರೆಯ ರಾಜ್ಯದ ಸಂಚಾಲಕರಾಗಿಯೂ ಕಾರ್ಯನಿರ್ವಹಿಸಿದ್ದರು. ರಾಜ್ಯದ ಚುನಾವಣೆಯಲ್ಲಿ ಕರಾವಳಿ ಸೇರಿದಂತೆ ಐದು ಜಿಲ್ಲೆಗಳಲ್ಲಿ ಉಸ್ತುವಾರಿ ಜವಾಬ್ದಾರಿಯನ್ನು ನಿರ್ವಹಣೆ ಮಾಡಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist