ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಉದ್ಯಮಿಗೆ ಟಿಕೆಟ್ ಕೊಡಿಸುವುದಾಗಿ ವಂಚನೆ ಆರೋಪ ; ಚೈತ್ರಾ ಕುಂದಾಪುರ ಅರೆಸ್ಟ್!

Twitter
Facebook
LinkedIn
WhatsApp
ಉದ್ಯಮಿಗೆ ಟಿಕೆಟ್ ಕೊಡಿಸುವುದಾಗಿ ವಂಚನೆ ಆರೋಪ ; ಚೈತ್ರಾ ಕುಂದಾಪುರ ಅರೆಸ್ಟ್!

ಉಡುಪಿ: ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂ. ವಂಚಿಸಿದ ಆರೋಪಕ್ಕೆ ಸಂಬಂಧಿಸಿ ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಮತ್ತು ಅವರ ಜತೆಗಾರರನ್ನು ಬೆಂಗಳೂರು ಸಿಸಿಬಿ ಪೊಲೀಸರು ಮಂಗಳವಾರ ರಾತ್ರಿ ಉಡುಪಿಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ವಂಚಿಸಿರುವುದಾಗಿ ಚೈತ್ರಾ ಸಹಿತ 8 ಮಂದಿಯ ವಿರುದ್ಧ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಬೆಂಗಳೂರು ನಗರದ ಬಂಡೇಪಾಳ್ಯ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ಕಾವೇರಿ ನದಿ ನೀರು ವಿವಾದ: ಇಂದು ತುರ್ತು ಸಭೆ ಕರೆದ ಸಿದ್ದರಾಮಯ್ಯ, ಪ್ರತಿಪಕ್ಷಗಳ ನಾಯಕರಿಗೂ ಆಹ್ವಾನ:

ಬೆಂಗಳೂರು, (ಸೆಪ್ಟೆಂಬರ್ 13): ಕರ್ನಾಟಕಕ್ಕೆ ಬರದ ಹೊಡೆತದ ಮಧ್ಯೆಯೇ ಭಾರಿ ಆಘಾತ ಎದುರಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಬರದ ಛಾಯೆ ಆವರಿಸಿದೆ. ರೈತರು ಕೂಡ ನೀರಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮಧ್ಯೆ ತಮಿಳುನಾಡಿಗೆ (Tamil Nadu) ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಮತ್ತೆ ಆದೇಶ ನೀಡಿದೆ. ನಿನ್ನೆ ಸಭೆ ನಡೆಸಿದ ಕಾವೇರಿ ನೀರು ನಿಯಂತ್ರಣ ಸಮಿತಿ ನಿತ್ಯ ಐದು ಸಾವಿರ ಕ್ಯೂಸೆಕ್ ನಂತೆ ಹದಿನೈದು‌ ದಿನಗಳ ಕಾಲನೀರು ಹರಿಸಲು ಶಿಫಾರಸ್ಸು ಮಾಡಿದೆ. ಈ ಆದೇಶ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು (ಸೆಪ್ಟೆಂಬರ್ 13) ಸರ್ವ ಪಕ್ಷಗಳ ತುರ್ತು ಸಭೆ ಕರೆದಿದ್ದಾರೆ.

ಇಂದು ವಿಧಾನಸೌಧದಲ್ಲಿ ಮಧ್ಯಾಹ್ನ 12.30ಕ್ಕೆ ಸಭೆ ನಡೆಯಲಿದೆ. ಡಿಸಿಎಂ ಡಿ.ಕೆ.ಶಿವಕುಮಾರ್, ಕಾವೇರಿ ಜಲಾನಯನ ಪ್ರದೇಶ ವ್ಯಾಪ್ತಿ ಸಚಿವರುಗಳು, ರಾಜ್ಯ ಸಚಿವ ಸಂಪುಟದ ಹಿರಿಯ ಸಚಿವರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರತಿಪಕ್ಷಗಳ ಮಾಜಿ ಸಿಎಂಗಳು, ಲೋಕಸಭೆ ರಾಜ್ಯ ಸಭೆ ಸದಸ್ಯರುಗಳಿಗೂ ತುರ್ತು ಸಭೆಯಲ್ಲಿ ಭಾಗವಹಿಸಲು ಆಹ್ವಾನ ನೀಡಲಾಗಿದೆ.ಈ ಮಧ್ಯೆ ಸರ್ಕಾರ ಮುಂದೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಿಎಂ ಅಧ್ಯಕ್ಷತೆಯಲ್ಲಿ ನಿನ್ನೆ(ಸೆಪ್ಟೆಂಬರ್ 12) ವಿಧಾನಸೌಧದಲ್ಲಿ ಸಭೆ ನಡೆಯಿತು. ಡಿಸಿಎಂ ಡಿಕೆ.ಶಿವಕುಮಾರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಸಚಿವ ನಾಗೇಂದ್ರ, ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಳೆದ ಅಗಸ್ಟ್ 29 ರ CWMA ಆದೇಶ ಅಂತ್ಯವಾದ ಹಿನ್ನಲೆ ನಿನ್ನೆ ವಿಡಿಯೋ ಕಾನ್ಫರೆನ್ಸ್ ಮೂಲಕ CWRC ನಡೆಸಿತ್ತು. ಹಳೇ ಆದೇಶದಂತೆ ಮುಂದಿನ 15 ದಿನ 5 ಸಾವಿರ ಕ್ಯೂಸೆಕ್‌ ನೀರು ಹರಿಸಲು ಸೂಚನೆ ನೀಡಿದೆ. ಈ ಹಿಂದೆ 5 ಸಾವಿರ ಕ್ಯೂಸೆಕ್‌ ನೀರು ಬಿಡುವಂತೆ ಆದೇಶಿಸಿದ್ರೂ ನಿತ್ಯ 3 ಸಾವಿರದಿಂದ 3400 ಕ್ಯೂಸೆಕ್‌ ನೀರು ಮಾತ್ರ ರಿಲೀಸ್ ಮಾಡಿದೆ. ಇದ್ರಿಂದ ಬೆಳೆಗಳು ನಾಶವಾಗುತ್ತಿದೆ ಅಂತಾ ತಮಿಳುನಾಡು ಆರೋಪಿಸಿತ್ತು. ಅಷ್ಟೇ ಅಲ್ಲದೇ 36.76 ಟಿಎಂಸಿ ಬಾಕಿ ನೀರು ಬಿಡುಗಡೆಗೆ ಒತ್ತಾಯಿಸಿತು..

ಒಟ್ಟಿನಲ್ಲಿ ರಾಜ್ಯ ಸರ್ಕಾರ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶವನ್ನ ಪಾಲಿಸಬೇಕಾದ ಒತ್ತಡಕ್ಕೆ ಸಿಲುಕಿದೆ. ಆದೇಶ ಪಾಲಿಸದಿದ್ರೆ ಸೆಪ್ಟೆಂಬರ್ 26ಕ್ಕೆ ಕಾವೇರು ನೀರು ಪ್ರಾಧಿಕಾರ ಸಭೆ ನಡೆಸಲು ನಿರ್ಧರಿಸಿದೆ. ಇತ್ತ ರೈತರ ಹೋರಾಟ ತೀವ್ರಗೊಳ್ಳುತ್ತಿದ್ದು ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist