ಭದ್ರತಾ ವಿಭಾಗದ ಐಜಿಪಿಯಾಗಿ ಡಿ.ರೂಪಾ ನಿಯೋಜನೆ
ಬೆಂಗಳೂರು: 7 ತಿಂಗಳ ಬಳಿಕ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಜೊತೆಗೆ ಐಪಿಎಸ್ ಅಧಿಕಾರಿ ಡಿ.ರೂಪಾಗೂ (D.Roopa Moudgil) ಸರ್ಕಾರ ಹುದ್ದೆ ನಿಯೋಜನೆ ಮಾಡಿದೆ. ಆಂತರಿಕ ಭದ್ರತಾ ವಿಭಾಗದ ಐಜಿಯಾಗಿ ರೂಪಾರನ್ನ ನಿಯೋಜಿಸಲಾಗಿದೆ.
ರೋಹಿಣಿ ಸಿಂಧೂರಿ ಮತ್ತು ರೂಪಾ ಮೌದ್ಗಿಲ್ ಪರಸ್ಪರ ಕಿತ್ತಾಡಿಕೊಂಡಿದ್ದರು. ಆಗ ರಾಜ್ಯ ಸರ್ಕಾರ ಇಬ್ಬರನ್ನೂ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಆದರೆ ಯಾವುದೇ ಹುದ್ದೆಯನ್ನು ನೀಡಿರಲಿಲ್ಲ. ಇದಾದ 7 ತಿಂಗಳ ಬಳಿಕ ರೋಹಿಣಿ ಸಿಂಧೂರಿ ಅವರನ್ನು ಕರ್ನಾಟಕ ಗೆಜೆಟಿಯರ್ ಡಿಪಾರ್ಟ್ಮೆಂಟ್ನ ಮುಖ್ಯ ಸಂಪಾದಕರನ್ನಾಗಿ ನಿಯೋಜಿಸಲಾಗಿದೆ.
ರೋಹಿಣಿ ಸಿಂಧೂರಿ ಅವರಿಗೆ ಹುದ್ದೆ ನಿಯೋಜನೆಯಾದ ಬೆನ್ನಲ್ಲೇ ಡಿ.ರೂಪಾ ಅವರನ್ನು ಆಂತರಿಕ ಭದ್ರತಾ ವಿಭಾಗದ ಐಜಿಯಾಗಿ ನಿಯುಕ್ತಿಗೊಳಿಸಲಾಗಿದೆ.
ಮೈತ್ರಿ ಬೆನ್ನಲ್ಲೇ ಆನಂದ್ ಅಸ್ನೋಟಿಕರ್ ಬಿಜೆಪಿ ಸೇರುವ ಇಂಗಿತ
ಕಾರವಾರ: ಬಿಜೆಪಿ-ಜೆಡಿಎಸ್ (BJP- JDS) ಲೋಕಸಭಾ ಚುನಾವಣಾ (Loksabha Election) ಮೈತ್ರಿ ಬೆನ್ನಲ್ಲೇ ಜೆಡಿಎಸ್ ಮಾಜಿ ಸಚಿವರೊಬ್ಬರು ಬಿಜೆಪಿ ಸೇರ್ಪಡೆಗೆ ಇಂಗಿತ ವ್ಯಕ್ತಪಡಿಸಿದ್ದಾರೆ.
ಇಂದು ಕಾರವಾರದಲ್ಲಿ (Karwar) ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಆನಂದ್ ಅಸ್ನೋಟಿಕರ್ (Anand Asnotikar) ಅವರು, ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಹಾಲಿ ಸಂಸದ ಅನಂತಕುಮಾರ್ ಹೆಗಡೆ ಸ್ಪರ್ಧೆ ಮಾಡದಿದ್ರೆ, ತಾನು ಬಿಜೆಪಿಯಿಂದ ಸ್ಪರ್ಧಾಕಾಂಕ್ಷಿಯಾಗಿದ್ದೇನೆ ಎಂದು ಹೇಳಿದ್ದಾರೆ.
ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ವೈಯಕ್ತಿಕ ಕಾರಣಕ್ಕಾಗಿ ಕಾಂಗ್ರೆಸ್ನ ಕಾರವಾರ, ಜೋಯಿಡಾ ಭಾಗದ ಅಭ್ಯರ್ಥಿಗೆ ಬೆಂಬಲ ನೀಡಿ ಗೆಲ್ಲಿಸಿದ್ದೇನೆ, ರಾಷ್ಟ್ರೀಯ ಪಕ್ಷಕ್ಕೆ ಸೇರ್ಪಡೆಗೊಳ್ಳಬೇಕು ಎಂದಿದ್ದೇನೆ. ಸದ್ಯ ನಾನು ಯಾವ ಪಕ್ಷದಲ್ಲೂ ಇಲ್ಲ, ಬಿಜೆಪಿಯಿಂದ ಟಿಕೆಟ್ ನೀಡಿದ್ರೆ ಲೋಕಸಭೆಗೆ ಸ್ಪರ್ಧೆ ಮಾಡುತ್ತೇನೆ ಎನ್ನುವ ಮೂಲಕ ಬಿಜೆಪಿಗೆ ಸೇರ್ಪಡೆಗೊಳ್ಳುವ ಇಂಗಿತ ವ್ಯಕ್ತಪಡಿಸಿದ್ದಾರೆ.
ನನ್ನ ಕ್ಷೇತ್ರ ಸರ್ಕಾರಿ ಯೋಜನೆಗಳಿಂದ ವಂಚಿತವಾಗಿದೆ. ಆ ಹಿನ್ನೆಲೆಯಲ್ಲಿ ನಮ್ಮ ಕ್ಷೇತ್ರಕ್ಕೆ ಲೋಕಸಭಾ ಅಭ್ಯರ್ಥಿ ಒಳ್ಳೆಯವರು ಆಗಬೇಕಿದೆ. ನಮ್ಮ ಜಿಲ್ಲೆಯ ಕೂಗನ್ನು ರಾಷ್ಟ್ರಮಟ್ಟದಲ್ಲಿ ತೆಗೆದುಕೊಂಡು ಅಭಿವೃದ್ಧಿಗಾಗಿ ಹೋರಾಟ ಮಾಡಬೇಕು ಎಂಬುದಿದೆ ಎಂದು ತಿಳಿಸಿದರು.