ಗುರುವಾರ, ಮಾರ್ಚ್ 13, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Tata Nexon: ಭಾರತೀಯ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿದ ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್‌ ಬಿಡುಗಡೆ!

Twitter
Facebook
LinkedIn
WhatsApp
Tata Nexon: ಭಾರತೀಯ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿದ ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್‌ ಬಿಡುಗಡೆ!

ದೇಶೀಯ ವಾಹನ ತಯಾರಕ ಸಂಸ್ಥೆಯಾದ ಟಾಟಾ ತನ್ನ ನವೀನ ಕಾರುಗಳ ಮೂಲಕ ಗ್ರಾಹಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿದೆ. ಇದರ ಜೊತೆಗೆ ತನ್ನ ಕಾರುಗಳಿಗೆ ಹೊಸ ರೂಪ, ನವೀಕರಣದ ಸ್ಪರ್ಶದೊಂದಿಗೆ ಟಾಟಾ ಮಾರುಕಟ್ಟೆಗೆ ಪರಿಚಯಿಸುತ್ತಿವೆ. ಅಂತೆಯೇ ಈಗ ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದೆ. ನೆಕ್ಸಾನ್‌ ಫೇಸ್‌ಲಿಫ್ಟ್‌ನ ಎಕ್ಸ್‌ಶೋರೂಮ್ ಬೆಲೆ 8.10 ಲಕ್ಷ ರೂಪಾಯಿಗಳಿಂದ ಆರಂಭವಾಗುತ್ತದೆ. ನೆಕ್ಸಾನ್ ಫೇಸ್‌ಲಿಫ್ಟ್‌ಗಾಗಿ ಈಗಾಗಲೇ ಬುಕ್ಕಿಂಗ್ ಆರಂಭವಾಗಿದೆ. 21,000 ರೂಪಾಯಿ ಆರಂಭಿಕ ಮೊತ್ತವನ್ನು ಪಾವತಿಸಿ ಈ ಹೊಸ ಎಸ್‌ಯುವಿಯನ್ನು ಬುಕ್ ಮಾಡಿಕೊಳ್ಳಬಹುದಾಗಿದೆ.

Tata Nexon: ಭಾರತೀಯ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿದ ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್‌ ಬಿಡುಗಡೆ!

ಎಂಜಿನ್ ಸಾಮರ್ಥ್ಯ

ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್‌ ಅದೇ 1.2-ಲೀಟರ್ ಮೂರು-ಸಿಲಿಂಡರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ನಿಂದ ನಿಯಂತ್ರಿಸಲ್ಪಡುತ್ತದೆ. ಈ ಎಂಜಿನ್ 120 ಎಚ್‌ಪಿ ಗರಿಷ್ಟ ಶಕ್ತಿ ಮತ್ತು 170 Nm ಗರಿಷ್ಠ ಟಾರ್ಕ್ ಅನ್ನು ಹೊರಹಾಕುತ್ತದೆ. ಇದರ ಜೊತೆಗೆ 1.5-ಲೀಟರ್ ಫೋರ್ ಸಿಲಿಂಡರ್ ಡೀಸೆಲ್ ಎಂಜಿನ್ ಆಯ್ಕೆಯನ್ನೂ ಇದು ಹೊಂದಿದೆ. ಈ ಎಂಜಿನ್ 115 ಎಚ್‌ಪಿ ಗರಿಷ್ಟ ಶಕ್ತಿ ಮತ್ತು 260 ನ್ಯೂಟನ್ ಮೀಟರ್ ಟಾರ್ಕ್‌ ಅನ್ನು ಉತ್ಪಾದಿಸುತ್ತದೆ. ಹಳೆಯ ಮಾದರಿಯ ನೆಕ್ಸಾನ್‌ನಲ್ಲಿ ಇರುವಂತೆ 6-ಸ್ಪೀಡ್ ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಟ್ರಾನ್ಸ್‌ಮಿಷನ್ ಆಯ್ಕೆಗಳನ್ನು ಮುಂದುವರಿಸಿಕೊಂಡು ಹೋಗಲಾಗುತ್ತಿದೆ. ಇದರ ಜೊತೆಗೆ ಹೆಚ್ಚುವರಿಯಾಗಿ ಹೊಸ ನೆಕ್ಸಾನ್‌ ಪೆಟ್ರೋಲ್ ಎಂಜಿನ್ ಈಗ ಪ್ರವೇಶ ಮಟ್ಟದ ರೂಪಾಂತರಗಳಿಗಾಗಿ 5-ಸ್ಪೀಡ್ ಮ್ಯಾನ್ಯುವಲ್ ಮತ್ತು ಹೊಸ 7-ಸ್ಪೀಡ್ ಡ್ಯುಯಲ್-ಕ್ಲಚ್ ಆಟೋಮ್ಯಾಟಿಕ್ ಅನ್ನೂ ಹೊಂದಿದೆ.

Tata Nexon: ಭಾರತೀಯ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿದ ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್‌ ಬಿಡುಗಡೆ!

ಬೆಲೆಯ ವಿವರ :

1.2-ಲೀಟರ್ ಪೆಟ್ರೋಲ್‌ ಮ್ಯಾನ್ಯುವಲ್ ವೇರಿಯೆಂಟ್‌ನ ಎಕ್ಸ್‌ಶೋರೂಮ್ ಬೆಲೆ ಇಂತಿದೆ

ಸ್ಮಾರ್ಟ್‌ : 8.10 ಲಕ್ಷ ರೂಪಾಯಿ
ಸ್ಮಾರ್ಟ್‌ ಪ್ಲಸ್ : 9.10 ಲಕ್ಷ ರೂಪಾಯಿ
ಪ್ಯೂರ್ : 9.70 ಲಕ್ಷ ರೂಪಾಯಿ
ಕ್ರಿಯೇಟಿವ್ : 11 ಲಕ್ಷ ರೂಪಾಯಿ
ಕ್ರಿಯೇಟಿವ್ ಪ್ಲಸ್ : 11.70 ಲಕ್ಷ ರೂಪಾಯಿ
ಫಿಯರ್‌ಲೆಸ್ : 12.50 ಲಕ್ಷ ರೂಪಾಯಿ
ಫಿಯರ್‌ಲೆಸ್‌ ಪ್ಲಸ್ : 13 ಲಕ್ಷ ರೂಪಾಯಿ

| Image Courtesy : cars.tatamotors.com

ವಿನ್ಯಾಸದ ವಿಷಯದಲ್ಲಿ ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್‌ ಸಾಕಷ್ಟು ಬದಲಾವಣೆಗಳನ್ನು ಕಂಡಿದೆ. ಇದು ಟಾಟಾ ಕರ್ವ್ವ್ ಪರಿಕಲ್ಪನೆಯಿಂದ ಪ್ರೇರಿತವಾಗಿದೆ. ಮರುವಿನ್ಯಾಸಗೊಳಿಸಲಾದ ಡಿಆರ್‌ಎಲ್‌ಗಳು, ಹೆಡ್‌ಲೈಟ್‌ಗಳ ಜೊತೆಗೆ ಈಗ ಪರಿಷ್ಕೃತ ಮುಂಭಾಗದ ಬಂಪರ್ ಹೌಸಿಂಗ್ ಬೈ-ಫಂಕ್ಷನಲ್ ಎಲ್‌ಇಡಿ ಹೆಡ್‌ಲ್ಯಾಂಪ್‌ಗಳನ್ನು ಇದು ಹೊಂದಿದೆ.

Tata Nexon: ಭಾರತೀಯ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿದ ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್‌ ಬಿಡುಗಡೆ!

ವೈಶಿಷ್ಟ್ಯಗಳು

ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್ ಹೊಸ 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಅನ್ನು ಹೊಂದಿದೆ. ಜೊತೆಗೆ ಅದೇ ಗಾತ್ರದ ಸಂಪೂರ್ಣ ಡಿಜಿಟಲ್ ಇನ್ಸ್ಟ್ರುಮೆಂಟ್‌ ಕ್ಲಸ್ಟರ್ , ವಾಯ್ಸ್‌ ಆಪರೇಟೆಡ್‌ ಅರ್ಥಾತ್ ಧ್ವನಿ ಚಾಲಿತ ಎಲೆಕ್ಟ್ರಿಕ್ ಸನ್‌ರೂಫ್, ಟು ಸ್ಟೋಕ್ ಸ್ಟೀರಿಂಗ್ ವ್ಹೀಲ್, ಟಚ್‌ ಆಪರೇಟೆಡ್‌ ಎಫ್‌ಎಟಿಸಿ ಪ್ಯಾನಲ್‌, ವೈರ್‌ಲೆಸ್ ಚಾರ್ಜಿಂಗ್ ಸೇರಿ ಸಾಕಷ್ಟು ವೈಶಿಷ್ಟ್ಯಗಳನ್ನು ಇದು ಒಳಗೊಂಡಿದೆ. ನವೀಕೃತ ನೆಕ್ಸಾನ್‌ 6 ಏರ್‌ಬ್ಯಾಗ್‌ಗಳು, 360-ಡಿಗ್ರಿ ಕ್ಯಾಮೆರಾ, ರಿವರ್ಸ್ ಕ್ಯಾಮೆರಾ, ಪಾರ್ಕಿಂಗ್ ಸೆನ್ಸರ್ ಸೇರಿದಂತೆ ಸಾಕಷ್ಟು ಸುರಕ್ಷತಾ ವೈಶಿಷ್ಟ್ಯಗಳನ್ನೂ ಹೊಂದಿದೆ.
Tata Nexon: ಭಾರತೀಯ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿದ ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್‌ ಬಿಡುಗಡೆ!

ಜನಪ್ರಿಯ ಎಸ್‌ಯುವಿ

ನೆಕ್ಸಾನ್ ಭಾರತದಲ್ಲಿ ಹೆಚ್ಚು ಮಾರಾಟವಾಗುವ ಸಬ್-4 ಮೀಟರ್ ಎಸ್‌ಯುವಿಗಳಲ್ಲಿ ಒಂದಾಗಿದೆ. ಇದುವರೆಗೆ ನೆಕ್ಸಾನ್ ಎಕ್ಸ್‌ಇ ನಿಂದ ಎಕ್ಸ್‌ಝಡ್‌ ಟ್ರಿಮ್ ಮಟ್ಟವನ್ನು ಹೊಂದಿತ್ತು. ಆದರೆ ಇನ್ನು ಮುಂದೆ ಇವುಗಳ ಹೆಸರು ಬದಲಾಗಿದ್ದು, ಈ ಟ್ರಿಮ್ ಹಂತಗಳು ಸ್ಮಾರ್ಟ್, ಸ್ಮಾರ್ಟ್ ಪ್ಲಸ್, ಪ್ಯೂರ್ , ಕ್ರಿಯೇಟಿವ್, ಕ್ರಿಯೇಟಿವ್ ಪ್ಲಸ್, ಫಿಯರ್‌ಲೆಸ್, ಫಿಯರ್‌ಲೆಸ್ ಪ್ಲಸ್ ಮತ್ತು ಫಿಯರ್‌ಲೆಸ್ ಪ್ಲಸ್ (ಎಸ್), ಎಂಪವರ್ಡ್‌ ಮತ್ತು ಎಂಪವರ್ಡ್ ಪ್ಲಸ್‌ ಈ ಹೆಸರಿನೊಂದಿಗೆ ಲಭ್ಯವಾಗಲಿದೆ. ನೆಕ್ಸಾನ್ ಸತತ ಎರಡು ವರ್ಷಗಳಲ್ಲಿ ಇದು ಭಾರತದ ನಂಬರ್ ವನ್ ಎಸ್‌ಯುವಿಯಾಗಿದೆ ಎಂದು ಟಾಟಾ ಮೋಟಾರ್ಸ್ ಪ್ಯಾಸೆಂಜರ್ ವೆಹಿಕಲ್ಸ್ ಲಿಮಿಟೆಡ್ ಮತ್ತು ಟಾಟಾ ಪ್ಯಾಸೆಂಜರ್ ಎಲೆಕ್ಟ್ರಿಕ್ ಮೊಬಿಲಿಟಿ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಶೈಲೇಶ್ ಚಂದ್ರ ಹೇಳಿದ್ದಾರೆ. ಟಾಟಾ ಮೋಟಾರ್ಸ್ ಇದುವರೆಗೆ 5.5 ಲಕ್ಷ ಕಾರುಗಳನ್ನು ಮಾರಾಟ ಮಾಡಿದೆ ಎಂದು ಇವರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist