ಗುರುವಾರ, ಮಾರ್ಚ್ 13, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಚೈತ್ರಾ ಕುಂದಾಪುರ ನಾಟಕಕ್ಕೆ ಸಿಸಿಬಿ ಪೊಲೀಸರು‌ ಕಂಗಾಲು..! ಸಾಬೂನು ನೊರೆ ಬಾಯಿಗೆ ಹಾಕಿ ನಟಿಸಿದ್ರಾ?

Twitter
Facebook
LinkedIn
WhatsApp
ಚೈತ್ರಾ ಕುಂದಾಪುರ ನಾಟಕಕ್ಕೆ ಸಿಸಿಬಿ ಪೊಲೀಸರು‌ ಕಂಗಾಲು..! ಸಾಬೂನು ನೊರೆ ಬಾಯಿಗೆ ಹಾಕಿ ನಟಿಸಿದ್ರಾ?

ಬೆಂಗಳೂರು: ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಚೈತ್ರಾ ಕುಂದಾಪುರ ಅವರು ಸಿಸಿಬಿ ಪೊಲೀಸರ ವಿಚಾರಣೆ ಎದುರಿಸುತ್ತಿದ್ದಾಗಲೇ ಬಾಯಲ್ಲಿ ನೊರೆ ಬಂದು ಕುಸಿದು ಬಿದ್ದಿದ್ದರು. ಹೀಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚೈತ್ರಾ ಅವರಿಗೆ ಪಿಡ್ಸ್ ಇಲ್ಲ ಎಂದು ವೈದ್ಯರು ಹೇಳಿದ್ದಾರೆ. ಹೀಗಾಗಿ ಬಟ್ಟೆ ತೊಳೆಯಲು ಕೊಟ್ಟ ಸಾಬೂನಿನ ನೊರೆಯನ್ನು ಬಾಯಿಗೆ ಹಾಕಿರುವ ಶಂಕೆ ವ್ಯಕ್ತವಾದ ಹಿನ್ನೆಲೆ ಸಿಸಿಬಿ ಕಚೇರಿಯಲ್ಲಿರುವ ವಾಶ್​ ರೂಮ್ ಅನ್ನು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಅದಾಗ್ಯೂ, ಮುನ್ನೆಚ್ಚರಿಕೆ ಸಲುವಾಗಿ ಚೈತ್ರಾ ಕುಂದಾಪುರ ಅವರ ಆರೋಗ್ಯವನ್ನು ಎಲ್ಲಾ ರೀತಿಯಲ್ಲಿ ತಪಾಸಣೆ ನಡೆಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಅದರಂತೆ, ಬಿಪಿ, ಪಲ್ಸ್ ರೇಟ್ ನಾರ್ಮಲ್ ಇದೆ. ಅದರೂ ಮೂರ್ಛೆ ರೋಗಕ್ಕೆ ಸಂಬಂಧಿಸಿದ ತಪಾಸಣೆಗಳು, ಬಿಪಿ, ಹೃದಯ ಸಂಬಂಧಿ ಚೆಕಪ್, ಉಸಿರಾಟದ ಸಮಸ್ಯೆ ಸೇರಿದಂತೆ ಎಲ್ಲ ರೀತಿಯ ಪರೀಕ್ಷೆ ನಡೆಸಲು ಸೂಚನೆ ನೀಡಲಾಗಿದೆ.

ವೈದ್ಯರ ತಪಾಸಣೆ ವೇಳೆ ಪಿಡ್ಸ್ ಅಥವಾ ಮೂರ್ಛೆ ರೋಗಕ್ಕೆ ಸಂಬಂಧಿಸಿದ ಯಾವುದೇ ಕುರುಹು ಕಂಡು ಬಂದಿಲ್ಲ ಎಂದು ತಿಳಿದುಬಂದಿದೆ. ಸದ್ಯ ಇನ್ನೂ ಕೆಲಕಾಲ ಅಸ್ಪತ್ರೆಯಲ್ಲೆ ಚಿಕಿತ್ಸೆ ಕೊಡಿಸಲು ಸಿಸಿಬಿ ಪೊಲೀಸರ ನಿರ್ಧಾರ ಮಾಡಿದ್ದಾರೆ. ಸದ್ಯ ಚೈತ್ರಾ ಕುಂದಾಪುರ ಆರೋಗ್ಯದ ಬಗ್ಗೆ ಮಾಹಿತಿ ಪಡೆದು ಬಂದ ತನಿಖಾಧಿಕಾರಿ ಸಿಸಿಬಿ ಕಚೇರಿಗೆ ವಾಪಸ್ ಆಗಿದ್ದಾರೆ. ಅಲ್ಲದೇ ಈ ಹಿಂದೆ ಇದೇ ರೀತಿ ಆಗಿದ್ದ ಘಟನೆಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಚೈತ್ರಾ ಕುಂದಾಪುರ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಆಸ್ಪತ್ರೆ ವೈದ್ಯೆ ಡಾ.ಅಸೀಮಾ ಬಾನು, ಚೈತ್ರಾ ಕುಂದಾಪುರ ಆರೋಗ್ಯ ಸ್ಥಿರವಾಗಿದೆ. ಚೈತ್ರಾ ಕುಂದಾಪುರ ಸಿಟಿ ಸ್ಕ್ಯಾನ್, ಇಸಿಜಿ ರಿಪೋರ್ಟ್ ನಾರ್ಮಲ್​ ಇದೆ. ಚೈತ್ರಾ ಕುಂದಾಪುರಗೆ ನಡೆಸಿದ ಎಲ್ಲಾ ಟೆಸ್ಟ್​ನಲ್ಲೂ ನಾರ್ಮಲ್ ಇದೆ. ಅವರನ್ನು ಆಸ್ಪತ್ರೆಗೆ ಕರೆತಂದಾಗ ಮೂರ್ಛೆ ರೋಗ ಇರಲಿಲ್ಲ. ಸದ್ಯ ಐಸಿಯುನಲ್ಲಿ ಚೈತ್ರಾ ಕುಂದಾಪುರಗೆ ಚಿಕಿತ್ಸೆ ಮುಂದುವರಿಸಿದ್ದೇವೆ ಎಂದರು.

ಬಾಯಿ ಬಿಡದ ಚೈತ್ರಾ ಕುಂದಾಪುರ

ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾದ ಬಳಿಕ ಚೈತ್ರಾ ಕುಂದಾಪುರ ಬಾಯಿ ಬಿಡುತ್ತಿಲ್ಲವಂತೆ. ವೈದ್ಯರು ಮಾತಾಡಿಸಿದ್ದಕ್ಕೆ ಸನ್ನೆ ಮೂಲಕ ಮಾತನಾಡಲು ಆಗುತ್ತಿಲ್ಲ ಎಂದು ಹೇಳುತ್ತಿದ್ದಾಳಂತೆ. ಆದರೆ, ಆಕೆಗೆ ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ಹೇಳಿದ್ದಾರೆ. ಸದ್ಯ ಚೈತ್ರಾ ಕುಂದಾಪುರ ನಾಟಕಕ್ಕೆ ಸಿಸಿಬಿ ಪೊಲೀಸರು‌ ಕಂಗಾಲಾಗಿದ್ದಾರೆ. ಅದಾಗ್ಯೂ, ಸಿಸಿಬಿ ಅಧಿಕಾರಿಗಳು ಕೂಡ ಚೈತ್ರಾ ಅವರನ್ನು ಮಾತನಾಡಿಸಲು ಯತ್ನಿಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist