ಭಾನುವಾರ, ಫೆಬ್ರವರಿ 23, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್: ಹೈಕೋರ್ಟ್ ಆದೇಶಕ್ಕೆ ಸುಪ್ರಿಂ ಕೋರ್ಟ್ ತಡೆಯಾಜ್ಞೆ!

Twitter
Facebook
LinkedIn
WhatsApp
ಪ್ರಜ್ವಲ್ ರೇವಣ್ಣ big relief for prajwal revanna1

ಪ್ರಜ್ವಲ್ ರೇವಣ್ಣ: ಪ್ರಜ್ವಲ್ ರೇವಣ್ಣ(Prajwal revanna) ಸಂಸದ ಸ್ಥಾನ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್​ (Karnataka High Court ) ನೀಡಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ (Supreme Court) ತಡೆಯಾಜ್ಞೆ ನೀಡಿದೆ. ಇದರಿಂದ ಪ್ರಜ್ವಲ್ ರೇವಣ್ಣಗೆ ಬಿಗ್​ ರಿಲೀಫ್ ಸಿಕ್ಕಂತಾಗಿದ್ದು, ಸಂಸದ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ. ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ.

ನವದೆಹಲಿ: ಕರ್ನಾಟಕದ ಏಕೈಕ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅನೂರ್ಜಿತ ಎಂದು ಘೋಷಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಇಂದು ತಡೆಯಾಜ್ಞೆ ನೀಡಿದೆ. 

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠ ತಡೆಯಾಜ್ಞೆ ನೀಡಿದೆ. ಆದರೆ ಪ್ರಜ್ವಲ್ ಅವರು ಸಂಸತ್ತಿನ ಕಲಾಪಗಳಲ್ಲಿ ಭಾಗವಹಿಸಬಹುದಾದರೂ ಸಂಸದರಾಗಿ ಮತ ಚಲಾಯಿಸಲು ಮತ್ತು ಯಾವುದೇ ಭತ್ಯೆಗಳನ್ನು ಪಡೆಯಲು ಅರ್ಹರಾಗಿರುವುದಿಲ್ಲ ಎಂದು ಪೀಠ ಹೇಳಿದೆ.

ಮುಂದಿನ ನಾಲ್ಕು ವಾರಗಳ ಅವಧಿಗೆ ಈ ತಡೆಯಾಜ್ಞೆ ನೀಡಿದ್ದು, ಮುಂದಿನ ವಿಚಾರಣೆ ಬಳಿಕ ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ಪ್ರಕಟಿಸಲಿದೆ. ಅರ್ಜಿದಾರರ ಪರವಾಗಿ ಹಿರಿಯ ವಕೀಲ ಮುಕುಲ್ ರೋಹಟಗಿ ಮತ್ತು ಕೆಕೆ ವೇಣುಗೋಪಾಲ್ ಅವರ ವಾದವನ್ನು ಆಲಿಸಿದ ನಂತರ ನ್ಯಾಯಾಲಯವು ತನ್ನ ಆದೇಶವನ್ನು ನೀಡಿದೆ.

ಚುನಾವಣಾ ಅರ್ಜಿದಾರರ ಪರ ಹಿರಿಯ ವಕೀಲರಾದ ಪ್ರಮೀಳಾ ನೇಸರ್ಗಿ ಹಾಗೂ ವಕೀಲ ಬಾಲಾಜಿ ಶ್ರೀನಿವಾಸನ್ ವಾದ ಮಂಡಿಸಿದರು. 

ನಿಯಮಗಳು ಮತ್ತು ಕಾರ್ಯವಿಧಾನಗಳ ವಿರುದ್ಧ ತನ್ನ ನಿರ್ಧಾರಕ್ಕೆ ಬರಲು ಇತರ ಕಾರಣಗಳ ನಡುವೆ ಹೈಕೋರ್ಟ್ ತನ್ನ ವಿರುದ್ಧ ಸಲ್ಲಿಸಲಾದ ಎರಡು ಪ್ರತ್ಯೇಕ ಚುನಾವಣಾ ಅರ್ಜಿಗಳನ್ನು ಕ್ರೋಢೀಕರಿಸಿದೆ ಎಂದು ಪ್ರಜ್ವಲ್ ತನ್ನ ಮನವಿಯಲ್ಲಿ ಪ್ರತಿಪಾದಿಸಿದ್ದಾರೆ.

ಹೈಕೋರ್ಟ್ ತನ್ನ ತೀರ್ಪಿನಲ್ಲಿ, ಪ್ರಜ್ವಲ್ ಅವರ ಚುನಾವಣಾ ಅಫಿಡವಿಟ್‌ನಲ್ಲಿ ಅವರ ಆಸ್ತಿ ಸೇರಿದಂತೆ ಸಂಪೂರ್ಣ ಅಗತ್ಯವಿರುವ ವಿವರಗಳನ್ನು ಬಹಿರಂಗಪಡಿಸದ ಕಾರಣ 2019ರ ಚುನಾವಣೆಯನ್ನು ಅಮಾನ್ಯ ಮತ್ತು ಅನೂರ್ಜಿತ ಎಂದು ಹೈಕೋರ್ಟ್ ಘೋಷಿಸಿತು. ನ್ಯಾಯಮೂರ್ತಿ ಕೆ ನಟರಾಜನ್ ಅವರು ಅಂದಿನ ಬಿಜೆಪಿ ಅಭ್ಯರ್ಥಿ ಮತ್ತು ಈಗ ಜೆಡಿಎಸ್ ಶಾಸಕ ಎ ಮಂಜು ಮತ್ತು ಇನ್ನೊಬ್ಬರು ಸಲ್ಲಿಸಿದ್ದ ಚುನಾವಣಾ ಅರ್ಜಿಗಳ ಮೇಲೆ ತೀರ್ಪು ನೀಡಿದ್ದರು.

2019ರ ಮೇ 23ರಂದು ಪ್ರಜ್ವಲ್ 6,76,606 ಮತಗಳನ್ನು ಗಳಿಸಿ ವಿಜಯಿ ಎಂದು ಘೋಷಿಸಲಾಯಿತು. ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎ. ಮಂಜು 5,35,282 ಮತಗಳನ್ನು ಪಡೆದು ಪರಾಜಿತರಾಗಿದ್ದರು.

ಇನ್ನು ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡುತ್ತಿದ್ದಂತೆಯೇ ಪ್ರಜ್ವಲ್ ರೇವಣ್ಣ ರೇವಣ್ಣ ಅವರು ಹೆಚ್​ಡಿ ದೇವೇಗೌಡಗೆ ಕರೆ ಮಾಡಿ ಚರ್ಚಿಸಿದರು. ಈ ವೇಳೆ ನಾಳೆ (ಸೆಪ್ಟೆಂಬರ್ 19) ದೆಹಲಿಗೆ ಬಂದು ಸಂಸತ್ ಕಲಾಪಕ್ಕೆ ಹಾಜರಾಗುವಂತೆ ದೇವೇಗೌಡ ಅವರು ಪ್ರಜ್ವಲ್​ಗೆ ಹೇಳಿದ್ದಾರೆ. ಅದರಂತೆ ಪ್ರಜ್ವಲ್ ರೇವಣ್ಣ ಅವರು ನಾಳೆಯಿಂದ ಹೊಸ ಸಂಸತ್‌ ಭವನದಲ್ಲಿ ಆರಂಭವಾಗಲಿರುವ ವಿಶೇಷ ಅಧಿವೇಶನಕ್ಕೆ ಹಾಜರಾಗಲಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist