ಪತಿಯನ್ನ ಬಿಟ್ಟು ಬರುವಂತೆ ಶಾಲಾ ಶಿಕ್ಷಕಿಗೆ ಧಮ್ಕಿ, ಬೆದರಿಕೆ; ಪ್ರಕರಣ ದಾಖಲು!
ಪತಿಯನ್ನ ಬಿಟ್ಟು ಬರುವಂತೆ ಶಾಲಾ ಶಿಕ್ಷಕಿಗೆ ಧಮ್ಕಿ: ಕೆಲವು ಖಾಸಗಿ ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬ್ಲಾಕ್‌ಮೇಲ್ ಮಾಡುತ್ತಿದ್ದ ಮಾಜಿ ಪ್ರೇಮಿ ಮತ್ತು ಆತನ ಸಹಚರನ ವಿರುದ್ಧ ಶಿಕ್ಷಕಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ.
10 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಯು, ಪತಿಯನ್ನ ತೊರೆದು ಬರುವಂತೆ ಬ್ಲಾಕ್‌ಮೇಲ್ ಮಾಡುತ್ತಿದ್ದ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಚಾಮರಾಜನಗರ, (ಸೆಪ್ಟೆಂಬರ್ 19): ಶಾಲಾ ಶಿಕ್ಷಕಿಯ(Teacher) ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಧಮ್ಕಿ ಹಾಕುವುದಲ್ಲದೇ 10 ಲಕ್ಷ ರೂಪಾಯಿ ಹಣ ನೀಡದೆ ಇದ್ರೆ ಏರಿಯಾದಲ್ಲಿ ದೊಡ್ಡದಾಗಿ ಫ್ಲೆಕ್ಸ್ ಹಾಕುವುದಾಗಿ ಬ್ಲ್ಯಾಕ್ ಮೇಲ್(blackmail) ಮಾಡಿರುವ ಘಟನೆ ಚಾಮರಾಜನಗರ (Chamarajnagar) ಜಿಲ್ಲೆ ಕೊಳ್ಳೆಗಾಲದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಬ್ದುಲ್ ಅಸೀಮ್ ಹಾಗೂ ಮಯೂರ್ ಎನ್ನುವರ ಶಿಕ್ಷಕಿ ಬಳಿ ಹಣಕ್ಕೆ ಡಿಮ್ಯಾಂಡ್ ಇಟ್ಟಿದ್ದಲ್ಲದೇ ಗಂಡನನ್ನು ಬಿಟ್ಟು ಬರುವಂತೆ ಒತ್ತಾಯಿಸಿದ್ದಾರೆ.
ಒಂದು ವೇಳೆ ಪತಿಯನ್ನು ಬಿಟ್ಟು ಬರದಿದ್ದರೆ ಹಿಂದೂ-ಮುಸ್ಲಿಂ ಗಲಾಟೆ ಮಾಡಿಸುವುದಾಗಿ ಕಿರುಕುಳ ನೀಡಿದ್ದಾರೆ. ಇದರಿಂದ ನೊಂದ ಶಿಕ್ಷಕಿಗೆ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಅಬ್ದುಲ್ ಅಸೀಮ್ ಹಾಗೂ ಮಯೂರ್ ಎಂಬುವವರು ಶಿಕ್ಷಕಿಯ ಅಶ್ಲೀಲ ವಿಡಿಯೋ ಹಾಗೂ ಫೋಟೋಗಳನ್ನು ಪತಿ ಹಾಗೂ ಕುಟುಂಬಸ್ಥರಿಗೆ ಕಳುಹಿಸಿದ್ದಾರೆ. ಅಬ್ಧುಲ್ ಅಸೀಮ್ ಎನ್ನುವಾತ ನೊಂದ ಸಂತ್ರಸ್ಥೆ (ಶಿಕ್ಷಕಿ) ಜೊತೆ ಕಳೆದ 7 ವರ್ಷಗಳಿಂದ ಸ್ನೇಹಿತನಾಗಿದ್ದ. ಆದ್ರೆ, ಶಿಕ್ಷಕಿ ಕಳೆದ 2 ವರ್ಷದ ಹಿಂದೆ ಬೇರೊಬ್ಬನ್ನೊಂದಿಗೆ ವಿವಾಹವಾಗಿದ್ದರು.
ವಿವಾಹದ ಬಳಿಕ ಪತಿಯನ್ನ ಬಿಟ್ಟು ನನ್ನ ಜೊತೆ ಬಾ ಎಂದು ದುಂಬಾಲು ಬಿದ್ದಿದ್ದ. ಪತಿಯನ್ನ ಬಿಟ್ಟು ಬರದೆ ಇದ್ದರೆ ನಮ್ಮಿಬ್ಬರ ಖಾಸಗಿ ವಿಡಿಯೋ ಅಪ್ ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.
ಇನ್ನು ವಿಡಿಯೋ ಸಾಮಾಜಿ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಬಾರದು ಅಂದ್ರೆ 10 ಲಕ್ಷ ರೂ. ಹಣ ನೀಡಬೇಕೆಂದು ಡಿಮ್ಯಾಂಡ್ ಇಟ್ಟಿದ್ದಾನೆ. ಇದರಿಂದ ನೊಂದ ಸಂತ್ರಸ್ಥೆ ಶಿಕ್ಷಕಿ ಚಾಮರಾಜನಗರದ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ಸಂಬಂಧ ಸಂತ್ರಸ್ತೆ ಸೈಬರ್ ಎಕನಾಮಿಕ್ ಅಂಡ್ ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣೆಗೆ (ಸಿಇಎನ್) ದೂರು ನೀಡಿದ್ದಾರೆ. ಸದ್ಯ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.