ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ
ಬೆಂಗಳೂರು: ಇಲ್ಲಿನ ಯಶವಂತಪುರ (Yeshwantpur) ಯಾರ್ಡ್ ಬಳಿ ನಡೆದ ಬಿಎಂಡಬ್ಲ್ಯೂ ಬೈಕ್ ಅಪಘಾತದಲ್ಲಿ (Bike Accident) ಇಬ್ಬರು ಯುವಕರು ದುರ್ಮರಣಕ್ಕೀಡಾಗಿದ್ದಾರೆ.
ಮನಮೋಹನ್ (31) ನಿಖಿಲ್ (25) ಮೃತ ದುರ್ದೈವಿಗಳು. ಮುಂಜಾನೆ 3:30ರ ಸಮಯದಲ್ಲಿ ಘಟನೆ ನಡೆದಿದೆ.
ಅತಿವೇಗವಾಗಿ ಬಿಎಂಡಬ್ಲೂ ಬೈಕ್ (BMW Bike) ಚಾಲನೆ ಮಾಡುತ್ತಿದ್ದ ಯುವಕರು ಯಶವಂತಪುರದಿಂದ ಆರ್ಎಂಸಿ ಯಾರ್ಡ್ ರೋಡ್ ಕಡೆಗೆ ಡ್ರೈವ್ ಮಾಡಿಕೊಂಡು ಬರುತ್ತಿದ್ದರು. ಮದ್ಯ ಸೇವಿಸಿ ಬೈಕ್ ಚಲಾಯಿಸುತ್ತಿದ್ದದ್ದು ಮಾತ್ರವಲ್ಲದೇ ಹೆಲ್ಮೆಟ್ ಸಹ ಧರಿಸಿರಲಿಲ್ಲ. ಕೊನೆಗೆ ಬೈಕ್ ನಿಯಂತ್ರಣಕ್ಕೆ ಸಿಗದೇ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಇಬ್ಬರು ಬೈಕ್ನಿಂದ ಕೆಳಗೆ ಬಿದ್ದು ತೀವ್ರ ರಕ್ತಸ್ರಾವವಾಗಿ, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೋಹನ್ ಮತ್ತು ನಿಖಿಲ್ ಸ್ನೇಹಿತರ ಜೊತೆ ಪಾರ್ಟಿ ಮುಗಿಸಿ ಮನೆಗೆ ವಾಪಸ್ ಬರುತ್ತಿದ್ದ ವೇಳೆ ಅಪಘಾತ ನಡೆದಿದೆ. ಇಬ್ಬರ ಮೃತದೇಹವನ್ನು ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಯಶವಂತಪುರ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.