ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಂಗಳೂರು : ಪೊಲೀಸ್ ಹೆಡ್ ಕಾನ್ಸ್ಟೇಬಲ್ ಚಂದ್ರ ಕೆ.ಅಡೂರು ವಿಧಿವಶ.!

Twitter
Facebook
LinkedIn
WhatsApp
ಮಂಗಳೂರು : ಪೊಲೀಸ್ ಹೆಡ್ ಕಾನ್ಸ್ಟೇಬಲ್ ಚಂದ್ರ ಕೆ.ಅಡೂರು ವಿಧಿವಶ.!

ಮಂಗಳೂರು: ಅಪರಾಧ ಪ್ರಕರಣಗಳ ಬೆನ್ನು ಬಿದ್ದು ಅಪರಾಧಿಗಳನ್ನು ಬಂಧಿಸುವಲ್ಲಿ ನಿಷ್ಣಾತನಾಗಿದ್ದ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಚಂದ್ರ ಕೆ. ಅಡೂರು(49) ಶನಿವಾರ ನಿಧನ ಹೊಂದಿದ್ದಾರೆ.

ಅಲ್ಪ ಕಾಲದ ಅಸೌಖ್ಯದ ಬಳಿಕ ಮಂಗಳೂರು ಖಾಸಾಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಚಂದ್ರ ಅವರು ಕೆಲ ದಿನಗಳ ಹಿಂದೆ ಅನಾರೋಗ್ಯ ಉಂಟಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು ಎನ್ನಲಾಗಿದೆ.

ಸೆಪ್ಟೆಂಬರ್ 19 ರಂದು ಗಣೇಶ ಚತುರ್ಥಿಯ ಕರ್ತವ್ಯದಲ್ಲಿದ್ದ ಅವರು ಬಳಿಕ ಏಕಾಏಕಿ ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದರು ಆದ್ರೆ ಶನಿವಾರ ಮುಂಜಾನೆ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ಚಂದ್ರ ಅಡೂರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದು ಅಂತ್ಯ ಕ್ರೀಯೆ ಹುಟ್ಟೂರು ಕಾಸರಗೋಡಿನ ಅಡೂರುನಲ್ಲಿ ನಡೆಯಲಿದೆ.

ಚಂದ್ರ ಕೆ ಅಡೂರು ಅವರ ನಿಧನಕ್ಕೆ ಹಿರಿಯ ಮತ್ತು ಕಿರಿಯ ಪೊಲೀಸ್ ಅಧಿಕಾರಿಗಳು, ಅವರ ಸಹೊದ್ಯೋಗಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಸುಳ್ಯ : ಹೃದಯಾಘಾತಕ್ಕೆ ಯುವಕ ಬಲಿ..!

ಸುಳ್ಯ : ಅನಾರೋಗ್ಯ ನಿಮಿತ್ತ ಔಷಧ ತರಲು ಆಟೋದಲ್ಲಿ ತೆರಳಿದ್ದ ಯುವಕ ದಾರಿ ಮಧ್ಯೆ ಹೃದಯಾಘಾತ ಕ್ಕೆ ಬಲಿಯಾದ ಘಟನೆ ದಕ್ಷಿಣ ಕನ್ನಡದ ಸುಳ್ಯ ತಾಲೂಕಿನ ನಿಂತಿಕಲ್ಲು ಎಂಬಲ್ಲಿ ನಡೆದಿದೆ.

ಚಂದ್ರಶೇಖರ್ (35) ಹೃದಯಾಘಾತಕ್ಕೆ ಬಲಿಯಾದ ಯುವಕನಾಗಿದ್ದಾರೆ.

ಮಡಿಕೇರಿಯ ಚೆಂಬು ಗ್ರಾಮದ ಆನ್ಯಾಳ ನಿವಾಸಿಯಾಗಿರುವ ಚಂದ್ರಶೇಖರ್ ಅನಾರೋಗ್ಯ ನಿಮಿತ್ತ ಔಷಧ ಪಡೆಯಲು ಸುಳ್ಯದ ನಿಂತಿಕಲ್ಲಿಗೆ ಹೋಗಿದ್ದರು.

ಅಲ್ಲಿಂದ ಔಷಧಿ ಪಡೆದು ಆಟೋದಲ್ಲಿ ವಾಪಸ್ ಬರುವಾಗ ದಾರಿ ಮಧ್ಯೆ ಅಸ್ಪಸ್ಥಗೊಂಡಿದ್ದಾರೆ ಕೂಡಲೇ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ನಡೆಸಲು ಯತ್ನಿಸಿದರೂ ಅದಾಗಲೇ ಅವರು ಮೃತಪಟ್ಟರು ಎಂದು ತಿಳಿದು ಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು