ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ; ಕರಾವಳಿಯಲ್ಲಿ ಮಳೆ ಆರ್ಭಟ..!
ಮಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿ ಮಂಗಳೂರು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ವಾಯುಭಾರ ಕುಸಿತವು ಕಡಿಮೆ ಒತ್ತಡದ ಪ್ರದೇಶವಾಗಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದ್ದು, ಮುಂದಿನ 24 ಗಂಟೆಗಳಲ್ಲಿ ಕ್ರಮೇಣ ಪಶ್ಚಿಮ-ವಾಯುವ್ಯಕ್ಕೆ ಚಲಿಸುತ್ತದೆ.
ಹೀಗಾಗಿ ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 01 ರವರೆಗೆ, ಉತ್ತರ ಒಳ ಕರ್ನಾಟಕ ಮತ್ತು ಕರಾವಳಿ ಕರ್ನಾಟಕ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ವ್ಯಾಪಕ ಸಾಧಾರಣದಿಂದ ಭಾರೀ ಮಳೆ ಮತ್ತು ಪ್ರತ್ಯೇಕ ಸ್ಥಳಗಳಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಕರ್ನಾಟಕ ಕರಾವಳಿಯಲ್ಲಿ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಚಂಡಮಾರುತದ ವಾತಾವರಣವಿದೆ.
ಮುಂದಿನ 3 ದಿನಗಳಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಕಾರಣ ಸೆ.29ರಿಂದ ಸೆ.30ರ ಬೆಳಗ್ಗಿನವರೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
ರಾಜ್ಯದ ಹವಾಮಾನ ವರದಿ: 30-09-2023
ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಮುಂದಿನ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶಿವಮೊಗ್ಗ, ಮಡಿಕೇರಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾವೇರಿ, ಬಳ್ಳಾರಿ ಸೇರಿದಂತೆ ಕೆಲವು ನಗರಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 27-21
ಮಂಗಳೂರು: 28-25
ಶಿವಮೊಗ್ಗ: 27-22
ಬೆಳಗಾವಿ: 25-21
ಮೈಸೂರು: 28-21
ಮಂಡ್ಯ: 29-22
ಮಡಿಕೇರಿ: 23-18
ರಾಮನಗರ: 28-21
ಹಾಸನ: 24-20
ಚಾಮರಾಜನಗರ: 29-21
ಚಿಕ್ಕಬಳ್ಳಾಪುರ: 28-20
ಕೋಲಾರ: 28-21
ತುಮಕೂರು: 27-20
ಉಡುಪಿ: 28-25
ಕಾರವಾರ: 28-26
ಚಿಕ್ಕಮಗಳೂರು: 23-19
ದಾವಣಗೆರೆ: 29-22
ಹುಬ್ಬಳ್ಳಿ: 28-21
ಚಿತ್ರದುರ್ಗ: 29-21
ಹಾವೇರಿ: 28-22
ಬಳ್ಳಾರಿ: 32-23
ಗದಗ: 29-22
ಕೊಪ್ಪಳ: 30-23
ರಾಯಚೂರು: 32-23
ಯಾದಗಿರಿ: 32-23
ವಿಜಯಪುರ: 30-22
ಬೀದರ್: 29-22
ಕಲಬುರಗಿ: 31-23
ಬಾಗಲಕೋಟೆ: 31-23