ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮೂಡುಬಿದಿರೆ : ಆಟೋ ರಿಕ್ಷಾ ಮತ್ತು ಬಸ್ ನಡುವೆ ಅಪಘಾತ : ವೃದ್ಧೆ ಮೃತ್ಯು!

Twitter
Facebook
LinkedIn
WhatsApp
ಮೂಡುಬಿದಿರೆ : ಆಟೋ ರಿಕ್ಷಾ ಮತ್ತು ಬಸ್ ನಡುವೆ ಅಪಘಾತ : ವೃದ್ಧೆ ಮೃತ್ಯು!

ಮೂಡುಬಿದಿರೆ: ಖಾಸಗಿ ಶಿಕ್ಷಣ ಸಂಸ್ಥೆಯ ಬಸ್ಸು ಮತ್ತು ಆಟೋ ರಿಕ್ಷಾ ಢಿಕ್ಕಿಯಾದ ಪರಿಣಾಮ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೃದ್ಧೆ ಮೃತಪಟ್ಟ ಘಟನೆ ನಡೆದಿದೆ.

 ಸುರತ್ಕಲ್ ನ ಆಲಿಯಮ್ಮ (76) ಮೃತಪಟ್ಟ ವೃದ್ಧೆ. ಮೂಡುಬಿದಿರೆಗೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸುರತ್ಕಲ್ ನಿಂದ ಬೀಪಾತಿಮ, ಆಯೀಷಾ ಹಾಗೂ ಆಲಿಯಮ್ಮ ಎಂಬವರು ಬರುತ್ತಿದ್ದ ಸಂದರ್ಭದಲ್ಲಿ ಪುತ್ತಿಗೆ ಗ್ರಾ.ಪಂ.ವ್ಯಾಪ್ತಿಯ ಸಂಪಿಗೆಯಲ್ಲಿ ಮೂಡುಬಿದಿರೆಯಿಂದ ಕಿನ್ನಿಗೋಳಿ ಕಡೆಗೆ ಹೋಗುತ್ತಿದ್ದ ಆಳ್ವಾಸ್ ಕಾಲೇಜಿನ ಬಸ್ ಢಿಕ್ಕಿ ಹೊಡೆದಿದೆ.

ಈ ಸಂದರ್ಭ ಗಾಯಗೊಂಡಿದ್ದ ಆಲಿಯಮ್ಮ ಕೊನೆಯುಸಿರೆಳೆದಿದ್ದಾರೆ. ಉಳಿದಿಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಬಸ್ಸಿನ ಚಾಲಕ ಸಂದೇಶ್ ನಾಯ್ಕ್ನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಆಸ್ಪತ್ರೆ ಆವರಣದಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ – ಇಬ್ಬರ ನ್ನ ಬಂಧಿಸಿದ ಅಬಕಾರಿ ದಳದ ಸಿಬ್ಬಂದಿಗಳು

ಮಂಗಳೂರು : ನುಳ್ಳಿಪ್ಪಾಡಿಯ ಖಾಸಗಿ ಆಸ್ಪತ್ರೆಯ ಆವರಣದಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಆರೋಪದಲ್ಲಿ ಇಬ್ಬರನ್ನು ಅಬಕಾರಿ ದಳದ ಸಿಬ್ಬಂದಿಗಳು ಬಂಧಿಸಿದ್ದಾರೆ.

ಉದುಮ ಎಡಚ್ಚಕೈ ನಿವಾಸಿ ಫೈಝಲ್ (37) ಮತ್ತು ತಳಿಪರಂಬ ನಿವಾಸಿ ಸಿ.ಟಿ.ಅಬ್ದುಲ್ಲ(46) ಬಂಧಿತ ಆರೋಪಿಗಳು. ರವಿವಾರ ಸಂಜೆ ನುಳ್ಳಿಪ್ಪಾಡಿಯ ಖಾಸಗಿ ಆಸ್ಪತ್ರೆಯ ಪಾರ್ಕಿಂಗ್ ಸ್ಥಳದಲ್ಲಿ ಗಾಂಜಾ ಹಸ್ತಾಂತರಿಸುತ್ತಿದ್ದಾಗ ಖಚಿತ ಮಾಹಿತಿಯಂತೆ ಹೊಂಚು ಹಾಕು ಕುಳಿತಿದ್ದ ಅಬಕಾರಿ ದಳದ ಸಿಬ್ಬಂದಿಗಳು ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದ ಎಂಟು ಗ್ರಾಂ ಎಂಡಿಎAಎ ಮಾದಕ ವಸ್ತು ಹಾಗೂ ಕಾರೊಂದನ್ನು ವಶಪಡಿಸಿಕೊಳ್ಳಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು