ಕರಾವಳಿ ಮತ್ತು ಉತ್ತರ ಕನ್ನಡ ಸೇರಿದಂತೆ ರಾಜ್ಯದಲ್ಲಿ ಕೆಲವೆಡೆ ಸಾಧಾರಣ ಮಳೆ ಸಾಧ್ಯತೆ!
![ಕರಾವಳಿ ಮತ್ತು ಉತ್ತರ ಕನ್ನಡ ಸೇರಿದಂತೆ ರಾಜ್ಯದಲ್ಲಿ ಕೆಲವೆಡೆ ಸಾಧಾರಣ ಮಳೆ ಸಾಧ್ಯತೆ!](https://urtv24.com/wp-content/uploads/2023/10/IMG_vivo_Pro_Kabaddi_Lea_2_1_QD9AJKCE-1.jpg)
ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಮಳೆಯಾಗಲಿದೆ.
ಉಪ್ಪಿನಂಗಡಿಯಲ್ಲಿ ಹೆಚ್ಚು ಮಳೆಯಾಗಿದೆ, ಮದ್ದೂರು, ವಿರಾಜಪೇಟೆ, ಸರಗೂರು, ಚನ್ನಪಟ್ಟಣ, ಶಿಗ್ಗಾಂ, ಸಾಲಿಗ್ರಾಮ, ಹುಣಸೂರು, ಪೊನ್ನಂಪೇಟೆ, ಮಡಿಕೇರಿ, ಮಂಡ್ಯ, ಪುತ್ತೂರು, ಕೊಳ್ಳೇಗಾಲ, ನಾಪೋಕ್ಲು, ಮಂಡ್ಯ, ಮಡಿಕೇರಿ, ಪುತ್ತೂರು, ಮೂರ್ನಾಡು, ಕೊಟ್ಟಿಗೆಹಾರ, ಮಾಣಿ, ಮಂಗಳೂರು, ಬೆಂಗಳೂರು, ಶ್ರೀರಂಗಪಟ್ಟಣ, ಸುಳ್ಯ, ಭಾಗಮಂಡಲ, ಸೋಮವಾರಪೇಟೆ, ರಾಮನಗರದಲ್ಲಿ ಮಳೆಯಾಗಿದೆ.
ಕಲಬುರ್ಗಿಯಲ್ಲಿ 34.7 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ವಿಜಯಪುರದಲ್ಲಿ 18.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ 3-4 ಡಿಗ್ರಿ ಸೆಲ್ಸಿಯಸ್ನಷ್ಟು ಮತ್ತು ಕೆಲವು ಕಡೆಗಳಲ್ಲಿ 2-3 ಡಿಗ್ರಿ ಸೆಲ್ಸಿಯಸ್ನಷ್ಟು ಗರಿಷ್ಠ ತಾಪಮಾನ ಹೆಚ್ಚಾಗಲಿದೆ.
ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಮಳೆಯಾಗುವ ನಿರೀಕ್ಷೆ ಇದೆ.
ಎಚ್ಎಎಲ್ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.