ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೋಟ: ಬೈಕ್ ಗಳ ನಡುವೆ ಅಪಘಾತ: ಓರ್ವ ಸವಾರ ಮೃತ್ಯು

Twitter
Facebook
LinkedIn
WhatsApp
ಕೋಟ: ಬೈಕ್ ಗಳ ನಡುವೆ ಅಪಘಾತ: ಓರ್ವ ಸವಾರ ಮೃತ್ಯು

ಕೋಟ: ಇಲ್ಲಿನ ಕೋಡಿ ಕನ್ಯಾನ-ಪಾರಂಪಳ್ಳಿ ಪಡುಕೆರೆ ಮುಖ್ಯ ರಸ್ತೆಯಲ್ಲಿ ಅ 15 ರಂದು ರಾತ್ರಿ 8-30 ರ ವೇಳೆ ಮೂರು ಬೈಕ್ ಗಳ ನಡುವೆ ಸರಣಿ ಅಪಘಾತ ಸಂಭವಿಸಿ ಗಾಯಗೊಂಡಿದ್ದ ಮೂವರು ಸವಾರರ ಪೈಕಿ ಓರ್ವ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ರವಿ ಪೂಜಾರಿ(30) ಮೃತ ಬೈಕ್ ಸವಾರ. ಮೆಕ್ಯಾನಿಕ್ ಆಗಿದ್ದ ಇವರು ಕೋಟದಲ್ಲಿ ಗ್ಯಾರೇಜ್ ನಡೆಸುತ್ತಿದ್ದರು. ತಂದೆ,ತಾಯಿಗೆ ಒಬ್ಬನೇ ಮಗನಾಗಿ ಮನೆಗೆ ಆಧಾರವಾಗಿದ್ದರು.

ಪ್ರಶಾಂತ ಎಂಬವರು ಬೈಕನ್ನು ಕೋಡಿ ಕನ್ಯಾನ ಕಡೆಯಿಂದ ಪಡುಕೆರೆ ಕಡೆಗೆ ಅತೀವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ಸೂಚನೆ ಇಲ್ಲದೇ ನಿರ್ಲಕ್ಷವಾಗಿ ರಸ್ತೆಯಲ್ಲಿ ನಿಲ್ಲಿಸಿದ್ದ ಕಾರಿನ ಎಡ ಭಾಗಕ್ಕೆ ಢಿಕ್ಕಿ ಹೊಡೆದು ಒಮ್ಮೇಲೆ ಬಲಕ್ಕೆ ಚಲಾಯಿಸಿದ್ದಾರೆ. ಈ ವೇಳೆ ಕೋಡಿ ಕನ್ಯಾನ ಕಡೆಯಿಂದ ಪಡುಕೆರೆ ಕಡೆಗೆ ಬರುತ್ತಿದ್ದ ರವಿ ಪೂಜಾರಿ ಬೈಕ್ ಎದುರಿನಿಂದ ಬರುತ್ತಿದ್ದ ಚರಣ್‌ರವರ ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಮೂರೂ ಬೈಕ್ ಗಳು ರಸ್ತೆಗೆ ಎಸೆಯಲ್ಪಟ್ಟಿವೆ.

ಮೂರು ಪ್ರತ್ಯೇಕ ಬೈಕ್ ಗಳಲ್ಲಿ ಇದ್ದ ಸವಾರರಾದ ರವಿ ಪೂಜಾರಿ, ಚರಣ್‌ ರಿಗೆ ಕುತ್ತಿಗೆಗೆ ಎದೆಗೆ ಸೇರಿ ಗಂಭೀರ ಸ್ವರೂಪದ ಗಾಯವಾಗಿದ್ದು, ಪ್ರಶಾಂತ ಎಂಬವರಿಗೆ ಕೈಗೆ ಗಾಯವಾಗಿತ್ತು. ಮೂವರನ್ನೂ ಚಿಕಿತ್ಸೆಗೆ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅಪಘಾತಕ್ಕೆ ಕಾರು ಚಾಲಕ ಸೂಚನೆ ನೀಡದೇ ನಿರ್ಲಕ್ಷವಾಗಿ ನಿಲ್ಲಿಸಿರುವುದು ಮತ್ತು ಬೈಕ್ ಸವಾರ ಪ್ರಶಾಂತ್ ಅವರ ಅತೀವೇಗ ಹಾಗೂ ನಿರ್ಲಕ್ಷ್ಯ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು