ಗುರುವಾರ, ನವೆಂಬರ್ 21, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Karkala : ಸಾಫ್ಟ್‌ವೇರ್ ಉದ್ಯೋಗಿ ಯುವತಿ ನೇಣಿಗೆ ಶರಣು

Twitter
Facebook
LinkedIn
WhatsApp
Karkala : ಸಾಫ್ಟ್‌ವೇರ್ ಉದ್ಯೋಗಿ ಯುವತಿ ನೇಣಿಗೆ ಶರಣು

ಕಾರ್ಕಳ : ಸಾಫ್ಟ್‌ವೇರ್ ಉದ್ಯೋಗಿಯಾಗಿದ್ದ ಯುವತಿಯೋರ್ವಳು ನೇಣಿಗೆ ಕೊರಳೊಡ್ಡಿ ಜೀವಾಂತ್ಯ ಮಾಡಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳಲ್ಲಿ ನಡೆದಿದೆ.

ಕಾರ್ಕಳ ತಾಲೂಕಿನ ಕಲ್ಲೊಟ್ಟೆಯ ಸಂಪತ್ ಕುಮಾರ್ ಎಂಬವರ ಪುತ್ರಿ ಚಾರ್ವಿ (23) ಆತ್ಮಹತ್ಯೆಗೆ ಶರಣಾದ ಯುವತಿಯಾಗಿದ್ದಾಳೆ.

ಸೋಮವಾರ ಮನೆಯಲ್ಲೇ ಇದ್ದ ಚಾರ್ವಿ ನೇಣಿಗೆ ಶರಣಾಗಿದ್ದಾಳೆ ಎನ್ನಲಾಗಿದೆ.

ಇಂಜಿನಿಯರಿಂಗ್ ಮುಗಿಸಿ ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಚಾರ್ವಿ ಮನೆಯಿಂದಲೇ ಕೆಲಸ ನಿರ್ವಹಣೆ ಮಾಡುತ್ತಿದ್ದಳು.

ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.

ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮಕ್ಕಳ ನಡುವೆ ರಿಮೋಟ್ ಗಾಗಿ ಗಲಾಟೆ -ಮಗನ ಕತ್ತು ಸೀಳಿದ ಅಪ್ಪ ಎಸೆದ ಕತ್ತರಿ

ಚಿತ್ರದುರ್ಗ ಅಕ್ಟೋಬರ್ 16: ಟಿವಿ ರಿಮೋಟ್​​ಗಾಗಿ ಇಬ್ಬರು ಮಕ್ಕಳು ಗಲಾಟೆ ಮಾಡಿದ್ದಕ್ಕೆ ಸಿಟ್ಟಿಗೆದ್ದ ತಂದೆ ಕತ್ತರಿ ಎಸೆದ ಪರಿಣಾಮ ಹಿರಿಯ ಮಗನ ಕತ್ತು ಸಿಳಿ ಸಾವನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದ ಈ ಘಟನೆ ನಡೆದಿದೆ.

ಮೃತನನ್ನು ಚಂದ್ರಶೇಖರ್ (16) ಎಂದು ಗುರುತಿಸಲಾಗಿದೆ. ಲಕ್ಷ್ಮಣಬಾಬು ಕತ್ತರಿ ಎಸೆದ ತಂದೆ ಎಂದು ತಿಳಿದುಬಂದಿದೆ. ಚಂದ್ರಶೇಖರ್ ಮತ್ತು ಆತನ ಸಹೋದರ ಪವನ್ ಕುಮಾರ್(14) ಟಿವಿ ಶೋ ವೀಕ್ಷಿಸಲು ರಿಮೋಟ್ ಗಾಗಿ ಜಗಳವಾಡುತ್ತಿದ್ದರು ಎನ್ನಲಾಗಿದೆ. ಇದರಿಂದ ಕುಪಿತಗೊಂಡ ಲಕ್ಷ್ಮಣ್ ಬಾಬು ಚಂದ್ರಶೇಖರ್ ಮೇಲೆ ಕತ್ತರಿ ಎಸೆದಿದ್ದಾರೆ. ಕತ್ತರಿ ಸೀದಾ ಬಾಲಕನ ಗಂಟಲಿಗೆ ಕತ್ತರಿ ಚುಚ್ಚಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಚಂದ್ರಶೇಖರ್ ನನ್ನು ಆತನ ತಾಯಿ ಲಕ್ಷ್ಮಿ ಮೊಳಕಾಲ್ಮೂರಿನ ತಾಲೂಕು ಆಸ್ಪತ್ರೆಗೆ ಕರೆದೊಯ್ದರು. ಆದರೆ ಅಲ್ಲಿನ ವೈದ್ಯರು ಚಂದ್ರಶೇಖರ್ ನನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಸೂಚಿಸಿದರು.

ಬಳ್ಳಾರಿಗೆ ತೆರಳುವ ಮಾರ್ಗ ಮಧ್ಯೆ ಚಂದ್ರಶೇಖರ್ ಮೃತಪಟ್ಟಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಲಕ್ಷ್ಮಣ್ ಬಾಬು ಅವರನ್ನು ವಶಕ್ಕೆ ಪಡೆದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು