ಗುರುವಾರ, ನವೆಂಬರ್ 21, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪಣಂಬೂರು ಬೀಚ್ ನಲ್ಲಿ ಇಬ್ಬರ ಶವ ಪತ್ತೆ: ಆತ್ಮಹತ್ಯೆ ಶಂಕೆ!

Twitter
Facebook
LinkedIn
WhatsApp
ಪಣಂಬೂರು ಬೀಚ್ ನಲ್ಲಿ ಇಬ್ಬರ ಶವ ಪತ್ತೆ: ಆತ್ಮಹತ್ಯೆ ಶಂಕೆ!

ಮಂಗಳೂರು, ಅ 19 : ಪಣಂಬೂರು ಬಳಿಯ ಸಮುದ್ರ ತೀರದಲ್ಲಿ ಇಬ್ಬರ ಮೃತದೇಹ ಪತ್ತೆಯಾದ ಘಟನೆ ಅ.19 ರ ಗುರುವಾರ ಬೆಳಗ್ಗೆ ನಡೆದಿದೆ.

ಮೃತರನ್ನು ಲಕ್ಷ್ಮಿ (43) ಮತ್ತು ಬೋರಲಿಂಗಯ್ಯ (50) ಎಂದು ಗುರುತಿಸಲಾಗಿದೆ. ಇವರಿಬ್ಬರು ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸಂಬಂಧದಲ್ಲಿ ಇಬ್ಬರು ಅತ್ತಿಗೆ ಹಾಗೂ ಭಾವ ಎಂದು ತಿಳಿದು ಬಂದಿದೆ.

ಬೆಂಗಳೂರು ಮೂಲದರಾಗಿರುವ ಇವರು ಮನೆಯಲ್ಲಿ ಯಾರಿಗೂ ಹೇಳದೇ ಬಂದಿದ್ದರು ಎನ್ನುವ ಪ್ರಾಥಮಿಕ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಮೊಬೈಲ್ ಸಮುದ್ರ ದಂಡೆಯಲ್ಲಿ ಸಿಕ್ಕಿದ್ದರಿಂದ ಪಣಂಬೂರು ಪೊಲೀಸರು ಸಂಬಂಧಿಕರನ್ನು ಸಂಪರ್ಕಿಸಿದ್ದು, ಇವರಿಬ್ಬರ ಸಾವಿನ ಸುದ್ದಿ ಕೇಳಿ ಸಂಬಂಧಿಕರು ಮಂಗಳೂರಿಗೆ ಬರುತ್ತಿದ್ದಾರೆ ಎಂದು ತಿಳಿದುಬಂದಿದೆ. ಇಬ್ಬರ ಶವಗಳನ್ನು ಮೇಲೆತ್ತಿದ್ದು, ಶವಾಗಾರದಲ್ಲಿ ಇಡಲಾಗಿದೆ.

ಆ. 19ರಿಂದ ಮಲ್ಪೆ ಸೈಂಟ್‌ ಮೇರಿ ಐಲ್ಯಾಂಡ್‌ ಬೋಟ್‌ ಯಾನ ಶುರು

ಉಡುಪಿ, ಅ 19 : ಉಡುಪಿಯ ಪ್ರಸಿದ್ಧ ಪ್ರವಾಸಿಗರ ಆಕರ್ಷಣೀಯ ತಾಣ ಮಲ್ಪೆಯ ಸೈಂಟ್‌ ಮೇರೀಸ್‌ ದ್ವೀಪ ಪ್ರವಾಸಿಗರಿಗೆ ತೆರೆದುಕೊಳ್ಳಲಿದೆ. ಇಲ್ಲಿಗೆ ಪ್ರವಾಸಿ ಬೋಟ್‌ಗಳ ಸಂಚಾರ ಆ. 19ರಂದು ಆರಂಭಗೊಳ್ಳಲಿದೆ.

ಸೀವಾಕ್‌ ವೇ ಬಳಿ 4 ದೋಣಿ ಗಳು ಎಲ್ಲ ರೀತಿಯ ಸುರಕ್ಷಾ ಸಮಾಗ್ರಿ ಸಮೇತ ಸಜ್ಜಾಗಿ ಪ್ರವಾಸಿಗರ ಸೇವೆಗೆ ನಿಂತಿವೆ ಎಂದು ಪ್ರವಾಸಿ ಬೋಟ್‌ಗಳ ಮುಖ್ಯಸ್ಥ ಗಣೇಶ್‌ ಮಲ್ಪೆ ತಿಳಿಸಿದ್ದಾರೆ.

ಮಳೆಗಾಲದಲ್ಲಿ ದ್ವೀಪ ಯಾನ ಅಪಾಯಕಾರಿ ಎಂದು ಪ್ರತೀ ವರ್ಷ ಮೇ 15ರಿಂದ ಸೆ. 15ರ ವರೆಗೆ ದ್ವೀಪ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರುತ್ತದೆ. ಈ ಬಾರಿ ಟೆಂಡರ್‌ ಪ್ರಕ್ರಿಯೆಯಿಂದಾಗಿ ಒಂದು ತಿಂಗಳು ವಿಳಂಬಗೊಂಡಿತ್ತು.

ಸೈಂಟ್‌ಮೇರಿ ದ್ವೀಪದ ಪ್ರಾಕೃತಿಕ ಸೌಂದರ್ಯದ ಸೊಬಗು ಸವಿಯಲು ಲಕ್ಷಾಂತರ ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು