ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಾಂಗ್ರೆಸ್ ವಿರುದ್ಧ ತೀವ್ರ ಅಸಮಾಧಾನ; ಅಖಿಲೇಶ್ ಯಾದವ್ ವಾಗ್ದಾಳಿ!

Twitter
Facebook
LinkedIn
WhatsApp
ಕಾಂಗ್ರೆಸ್ ವಿರುದ್ಧ ತೀವ್ರ ಅಸಮಾಧಾನ; ಅಖಿಲೇಶ್ ಯಾದವ್ ವಾಗ್ದಾಳಿ!

ನವದೆಹಲಿ, ಅಕ್ಟೋಬರ್​​​ 21: ಮಧ್ಯ ಪ್ರದೇಶ ಚುನಾವಣೆಗೆ ಮೈತ್ರಿ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ತೀವ್ರ ಅಸಮಾಧಾನಗೊಂಡಿರುವ ಸಮಾಜವಾದಿ ಪಕ್ಷದ (Samajwadi Party) ಅಧ್ಯಕ್ಷ ಅಖಿಲೇಶ್​ ಯಾದವ್​ (Akhilesh Yadav) ‘ಕೈ’ ಪಡೆ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ. ರಾಷ್ಟ್ರವ್ಯಾಪಿ ಜಾತಿ ಆಧಾರಿತ ಜನಗಣತಿಗೆ ಕಾಂಗ್ರೆಸ್ಸಿನ ಬೇಡಿಕೆಯ ಬಗ್ಗೆ ಟೀಕಾ ಪ್ರಹಾರ ನಡೆಸಿದ ಅವರು, ಇದೊಂದು ಪವಾಡ ಎಂದು ಹೇಳಿದ್ದಾರೆ. ದೇಶದ ಅತ್ಯಂತ ಹಳೆಯ ಪಕ್ಷವು ಜಾತಿ ಗಣತಿಯನ್ನು ಬೆಂಬಲಿಸಿರುವುದು ‘ಪವಾಡ’ವೇ ಸರಿ. ಹಿಂದುಳಿದ ಜಾತಿಗಳ ಬೆಂಬಲವಿಲ್ಲದೆ ಯಶಸ್ವಿಯಾಗುವುದು ಸಾಧ್ಯವಿಲ್ಲ ಎಂಬ ಕಾರಣಕ್ಕಾಗಿ ಕಾಂಗ್ರೆಸ್ ಜಾತಿ ಗಣತಿಯ ಬೇಡಿಕೆಯನ್ನು ಬೆಂಬಲಿಸಿದೆ ಎಂದು ಅವರು ಟೀಕಿಸಿದ್ದಾರೆ.

ಇದೇ ಕಾಂಗ್ರೆಸ್ ಪಕ್ಷ ಜಾತಿ ಗಣತಿಯ ಅಂಕಿ-ಅಂಶಗಳನ್ನು ನೀಡಿರಲಿಲ್ಲ. ಈಗ ಜಾತಿ ಗಣತಿಯನ್ನು ಬೆಂಬಲಿಸುತ್ತಿದೆ. ಇದೊಂದು ಪವಾಡ. ಏಕೆಂದರೆ ಹಿಂದುಳಿದ ಜಾತಿಗಳ ಬೆಂಬಲವಿಲ್ಲದಿದ್ದರೆ ಅವರು ಯಶಸ್ವಿಯಾಗುವುದಿಲ್ಲ ಎಂಬುದು ಈಗ ಎಲ್ಲರಿಗೂ ತಿಳಿದಿದೆ ಎಂದು ಅಖಿಲೇಶ್ ಭದೋಹಿಯಲ್ಲಿ ಹೇಳಿರುವುದಾಗಿ ‘ಎಎನ್‌ಐ’ ಸುದ್ದಿಸಂಸ್ಥೆ ವರದಿ ಮಾಡಿದೆ.

ಕಾಂಗ್ರೆಸ್​​ನವರಿಗೆ ಈಗ ಹಿಂದುಳಿದ ಜಾತಿಗಳ ಬೆಂಬಲ ಇಲ್ಲದೆ ಯಶಸ್ವಿಯಾಗಲು ಸಾಧ್ಯವಿಲ್ಲ ಎಂಬ ಅರಿವಾಗಿದೆ. ಆದರೆ. ಅವರು ಹುಡುಕುತ್ತಿರುವ ಮತಗಳು ಈಗ ಅವರಿಗೆ ಬೆಂಬಲ ನೀಡುವುದಿಲ್ಲ ಎಂದು ಅಖಿಲೇಶ್ ಹೇಳಿದ್ದಾರೆ.

ಭಾರತೀಯ ಜನತಾ ಪಕ್ಷದ ವಿರುದ್ಧ 28 ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಯು ರಾಷ್ಟ್ರೀಯ ರಾಜಕೀಯಕ್ಕಾಗಿ ರೂಪುಗೊಂಡಿದೆಯೇ ವಿನಃ, ಪ್ರಾದೇಶಿಕ ಚುನಾವಣೆಗಳಿಗಾಗಿ ಅಲ್ಲ ಎಂದು ಕಾಂಗ್ರೆಸ್ ಹೇಳಿದ ಕೆಲವೇ ದಿನಗಳಲ್ಲಿ ಸಮಾಜವಾದಿ ಪಕ್ಷದ ಜತೆ ಒಡಕುಮೂಡಿದೆ. ಮಧ್ಯ ಪ್ರದೇಶ ಚುನಾವಣೆಗೆ ಕಾಂಗ್ರೆಸ್‌ನ 144 ಅಭ್ಯರ್ಥಿಗಳ ಪಟ್ಟಿಯನ್ನು ಸಮಾಜವಾದಿ ಪಕ್ಷವು ವಿರೋಧಿಸಿದ ನಂತರ ಉಭಯ ಪಕ್ಷಗಳ ನಡುವಣ ಅಂತರ ಹೆಚ್ಚಾಗಿದೆ.

ಕನಿಷ್ಠ ಆರು ಸ್ಥಾನಗಳನ್ನು ನೀಡುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು. ಆದರೆ ಯಾವುದನ್ನೂ ನೀಡಿಲ್ಲ ಎಂದು ಯಾದವ್ ಇತ್ತೀಚೆಗೆ ಹೇಳಿದ್ದರು.

ಇಂಡಿಯಾ ಮೈತ್ರಿಕೂಟ ಯಶಸ್ವಿಯಾಗದು ಎಂದ ಅಖಿಲೇಶ್

ಈಗಿರುವ ಗೊಂದಲವು ಮುಂದುವರಿದರೆ ಇಂಡಿಯಾ ಮೈತ್ರಿಕೂಟವು ಬಿಜೆಪಿಯನ್ನು ಸೋಲಿಸಲು ಎಂದಿಗೂ ಸಾಧ್ಯವಾಗುವುದಿಲ್ಲ ಎಂದು ಯಾದವ್ ಶುಕ್ರವಾರ ಹೇಳಿದ್ದಾರೆ. ದೇಶಕ್ಕೆ 2024 ರಲ್ಲಿ ದೊಡ್ಡ ಸವಾಲಿದೆ. ಬಿಜೆಪಿ ಒಂದು ದೊಡ್ಡ ಪಕ್ಷವಾಗಿದೆ. ಅದು ಅತ್ಯಂತ ಸಂಘಟಿತವಾಗಿ ಸಜ್ಜಾಗಿದೆ. ಆದ್ದರಿಂದ ಅದನ್ನು ಎದುರಿಸಲು ಇಂಡಿಯಾ ಮೈತ್ರಿಕೂಟದಲ್ಲಿ ಯಾವುದೇ ಗೊಂದಲ ಉಂಟಾಗಬಾರದು. ನೀವು ಗೊಂದಲದಿಂದ ಬಿಜೆಪಿಯನ್ನು ಎದುರಿಸಿದರೆ, ನೀವು ಯಶಸ್ವಿಯಾಗುವುದಿಲ್ಲ ಎಂದು ಅಖಿಲೇಶ್ ಹೇಳಿದ್ದಾರೆ.

ಮಧ್ಯಪ್ರದೇಶದಲ್ಲಿ ನವೆಂಬರ್ 17 ರಂದು ಮತದಾನ ನಡೆಯಲಿದೆ. ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist