ಉಡುಪಿಗೆ ಸೊರಕೆ-ರಾಜಶೇಖರ ಕೋಟ್ಯಾನ್ ಹೆಸರು ಮುಂಚೂಣಿಯಲ್ಲಿ. ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನ್ನೂ ನಿಗೂಢ!
ಉಡುಪಿಗೆ ಸೊರಕೆ-ರಾಜಶೇಖರ ಕೋಟ್ಯಾನ್ ಹೆಸರು ಮುಂಚೂಣಿಯಲ್ಲಿ
ಮಂಗಳೂರು: ಉಡುಪಿ- ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಜಶೇಖರ ಕೋಟ್ಯಾನ್ ಹೆಸರು ಮುಂಚೂಣಿಯಲ್ಲಿದೆ ಎಂದು ತಿಳಿದುಬಂದಿದೆ. ಈ ನಡುವೆ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಕಾಂಗ್ರೆಸ್ ಕಾರ್ಯಧ್ಯಕ್ಷರು ಆಗುತ್ತಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಈ ಬೆಳವಣಿಯ ನಡುವೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಜಶೇಖರ ಕೋಟ್ಯಾನ್ ಹೆಸರು ಚಾಲ್ತಿಗೆ ಬಂದಿದೆ.
ಈ ನಡುವೆ ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾರಾಗಬಹುದು ಎಂಬ ನಿಗೂಢತೆ ಇನ್ನು ಮುಂದುವರಿದಿದೆ. ಹಲವಾರು ಮಂದಿ ಆಕಾಂಕ್ಷಿಗಳಿದ್ದರೂ ಯಾರೂ ಬಹಿರಂಗವಾಗಿ ಇನ್ನು ಹೇಳಿಕೊಂಡಿಲ್ಲ. ಯಾರಾಗಬಹುದು ಎಂಬ ಕುತೂಹಲ ಮನೆಮಾಡಿದೆ. ಕಳೆದ ಬಾರಿ ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮಿಥುನ್ ರೈ ಸ್ಪರ್ಧಿಸಿದ್ದರು. ಈ ನಡುವೆ ಈ ಬಾರಿ ಅಭ್ಯರ್ಥಿಗಳು ಯಾರಾಗಬಹುದು ಎಂಬ ಕುತೂಹಲ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹಾಗೂ ಜನರಲ್ಲಿ ನೆಲೆಸಿದೆ.
ಬಿಜೆಪಿ ಅಭ್ಯರ್ಥಿಯಾಗಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಬಹುತೇಕ ಆಯ್ಕೆ ಆಗುವುದು ಖಚಿತವಾಗಿದೆ. ಬ್ರಿಜೇಶ್ ಚೌಟ ಹೆಸರು ಕೂಡಾ ಕೇಳಿಬರುತ್ತದೆ ಎಂದು ತಿಳಿದುಬಂದಿದೆ.
ಲೋಕಸಭಾ ಚುನಾವಣೆಗೆ ಇನ್ನು ಆರು ತಿಂಗಳು ಬಾಕಿ ಉಳಿದಿದೆ. ಆದರೆ ಮಂಗಳೂರಿನ ಕಾಂಗ್ರೆಸ್ ನಲ್ಲಿ ಯಾವುದೇ ಬೆಳವಣಿಗೆಗಳು ನಡೆಯದಿರುವುದು ಎಲ್ಲರಿಗೂ ಆಶ್ಚರ್ಯ ಮೂಡಿಸಿದೆ. ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ
ಕಳೆದ ಬಾರಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಶೋಭಾ ಕರಂದ್ಲಾಜೆ ವಿಜಯರಾಗಿದ್ದರು. ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ಆದರೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಈ ಕಾರಣದಿಂದ ಪ್ರಬಲ ಪೈಪೋಟಿ ಈ ಲೋಕಸಭಾ ಕ್ಷೇತ್ರದಲ್ಲಿ ನಡೆಯಬಹುದು ಎಂದು ಅಂದಾಜಿಸಲಾಗುತ್ತಿದೆ. ಉಡುಪಿ ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಹೈಕಮಾಂಡ್ ನ ಗಮನ ಸೆಳೆದಿದೆ.
ವಿನಯ್ ಕುಮಾರ್ ಸೊರಕೆ ಈ ಮೊದಲು ಹಳೆಯ ಉಡುಪಿ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದರು. ಅಲ್ಲದೆ ಕಾಪು ವಿಧಾನ ಸಭಾ ಕ್ಷೇತ್ರವನ್ನು ಒಂದು ಬಾರಿ ಪ್ರತಿನಿಧಿಸಿದ್ದರು. ಈ ಬಾರಿ ಅವರು ಕಳೆದುಕೊಂಡಿದ್ದರು.
ರಾಜಶೇಖರ್ ಕೋಟ್ಯಾನ್ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಉಡುಪಿ ಮಾತ್ರವಲ್ಲದೆ ಚಿಕ್ಕಮಂಗಳೂರಿನಲ್ಲಿಯೂ ತನ್ನ ಸಂಪರ್ಕವನ್ನು ರಾಜಶೇಖರ ಕೋಟ್ಯಾನ್ ಹೊಂದಿದ್ದಾರೆ. ಈ ಇಬ್ಬರು ನಾಯಕರುಗಳ ಹೆಸರು ಗಂಭೀರವಾಗಿ ಪರಿಶೀಲನೆಯಲ್ಲಿದೆ ಎಂದು ತಿಳಿದುಬಂದಿದೆ.