ಸೋಮವಾರ, ಮೇ 13, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೂಡಬಿದಿರೆ : ಆಳ್ವಾಸ್ ಶಿಕ್ಷಣ ಸಂಸ್ಥೆಯ ಆಧ್ಯಕ್ಷ ಡಾ. ಮೋಹನ್ ಆಳ್ವರ ತಂದೆ ಆನಂದ ಆಳ್ವ ನಿಧನ!

Twitter
Facebook
LinkedIn
WhatsApp
ಮೂಡಬಿದಿರೆ : ಆಳ್ವಾಸ್ ಶಿಕ್ಷಣ ಸಂಸ್ಥೆಯ ಆಧ್ಯಕ್ಷ ಡಾ. ಮೋಹನ್ ಆಳ್ವರ ತಂದೆ ಆನಂದ ಆಳ್ವ ನಿಧನ!

ಮಂಗಳೂರು : ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆಧ್ಯಕ್ಷ ಡಾ. ಮೋಹನ್ ಆಳ್ವರ ತಂದೆ ಆನಂದ ಆಳ್ವ ಇಂದು ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ.

106 ವರ್ಷ ಪ್ರಾಯದ ಆನಂದ ಆಳ್ವ ಇಳಿ ವಯಸ್ಸಿನಲ್ಲೂ ಅತ್ಯಂತ ಕ್ರೀಯಾಶೀಲರಾಗಿ ಗುರುತಿಸಿಕೊಂಡಿದ್ದರು.

ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆಯುವ ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲೂ ಮುಂಚೂಣಿಯಲ್ಲಿ ಭಾಗವಹಿಸುವ ಕೆಲವೇ ಮಂದಿಗಳಲ್ಲಿ ಆನಂದ ಆಳ್ವರೂ ಒಬ್ಬರಾಗಿದ್ದಾರೆ. ಮಕ್ಕಳಾದ ಸೀತಾರಾಮ, ಬಾಲಕೃಷ್ಣ, ಡಾ.ಮೋಹನ್ ಆಳ್ವ, ಮೀನಾಕ್ಷಿ ಸೇರಿದಂತೆ ಅಸಂಖ್ಯಾತ ಬಂಧು-ಮಿತ್ರರನ್ನು ಅಗಲಿರುವ ಆನಂದ ಆಳ್ವ ನಿಧನಕ್ಕೆ ಗಣ್ಯರು ಕಂಬನಿ ಮಿಡಿದ್ದಾರೆ.

ದೇವಸ್ಥಾನಗಳ ಜೀರ್ಣೋದ್ಧಾರ ಸೇರಿದಂತೆ ಹಲವು ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಆನಂದ ಆಳ್ವ ಮೂಡಬಿದಿರೆ ಪರಿಸರದಲ್ಲಿ ಜನಾನುರಾಗಿಯಾಗಿ ಗುರುತಿಸಿಕೊಂಡಿದ್ದರು.

ಪ್ರಗತಿಪರ ರೈತರೂ ಆಗಿದ್ದ ಆನಂದ ಆಳ್ವ ಕಷ್ಟಗಳಿಗೆ ಯಾವಾಗಲೂ ವಿಚಲಿತರಾಗಿರಲಿಲ್ಲ 1974 ರಲ್ಲಿ ಜಾರಿಗೆ ಬಂದ ಭೂ ನ್ಯಾಯಮಂಡಳಿ ಕಾಯಿದೆಯು ಕೃಷಿ ಕೈಗಳ ತೀವ್ರ ಕೊರತೆಯನ್ನು ಉಂಟುಮಾಡಿತು. ಆ ಸಮಯದಲ್ಲಿ, ಅವರು 15 ಜೋಡಿ ಎಮ್ಮೆಗಳನ್ನು ಖರೀದಿಸಿದರು ಮತ್ತು ಅವರ ಕುಟುಂಬದ ಸದಸ್ಯರೊಂದಿಗೆ ಭತ್ತದ ಗದ್ದೆಗಳನ್ನು ಉಳುಮೆ ಮಾಡಿದ್ದರು.

1979 ರಿಂದ 1989 ರವರೆಗೆ ತಮ್ಮ ವಿಶಾಲವಾದ ಭತ್ತದ ಗದ್ದೆಯಲ್ಲಿ ಕಂಬಳವನ್ನು ಪ್ರವೇಶ ಟಿಕೆಟ್‌ಗಳೊಂದಿಗೆ ಆಯೋಜಿಸಿದ್ದ ಕೀರ್ತಿ ಕೂಡ ಆನಂದ ಆಳ್ವರಿಗೆ ಸಲ್ಲುತ್ತಿದೆ.ಅವರು ತಮ್ಮ ನೆರೆಹೊರೆಯ ಅನೇಕ ದೇವಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ವಿವಿಧ ದೇವಾಲಯಗಳ ಜೀರ್ಣೋದ್ಧಾರಕ್ಕೆ ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ.

ಮಂಗಳೂರು, ಉಡುಪಿಯಲ್ಲಿ ಬೆಳ್ಳಂಬೆಳಗ್ಗೆ ಆಭರಣ ಮಳಿಗೆಗಳ ಮೇಲೆ ಐಟಿ ದಾಳಿ..!

ಮಂಗಳೂರು/ಉಡುಪಿ :  ಮಂಗಳೂರು, ಉಡುಪಿಯಲ್ಲಿ ಬೆಳ್ಳಂಬೆಳಗ್ಗೆ ಆಭರಣ ಮಳಿಗೆಗಳ ಮೇಲೆ ಐಟಿ ದಾಳಿ ನಡೆದಿದೆ.  ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಮಣ್ಣಗುಡ್ಡ, ಮಂಗಳೂರು ನಗರದ ಶಿವಭಾಗ್  ಹಾಗೂ ಉಡುಪಿ ಜಿಲ್ಲೆಯಲ್ಲಿ ಏಕಾ ಕಾಲದಲ್ಲಿ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ನಿನ್ನೆ ಅಷ್ಟೇ ಕರ್ನಾಟಕದ 75 ಕಡೆಗಳಲ್ಲಿ ರಾಜ್ಯ ಲೋಕಾಯುಕ್ತ ದಾಳಿಯಾಗಿತ್ತು. ಇದರ ಬೆನ್ನಲ್ಲೇ ಇಂದು ಬೆಳ್ಳಂಬೆಳಗ್ಗೆ ಕರಾವಳಿ ಭಾಗದಲ್ಲಿ ಐಟಿ ದಾಳಿಯಾಗಿದೆ

ಉಡುಪಿ, ಕಾರ್ಕಳ, ಕುಂದಾಪುರ, ಪಡುಬಿದ್ರಿ, ಬ್ರಹ್ಮಾವರ, ಸೇರಿದಂತೆ ಹಲವೆಡೆ ಚಿನ್ನದ ಅಂಗಡಿಗಳ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕರಾವಳಿಯ ಅನೇಕ ಭಾಗಗಳಲ್ಲಿ ತನ್ನ ಶೋರೂಮ್ ಹೊಂದಿರುವ ಪ್ರಸಿದ್ಧ ಚಿನ್ನದ ಮಳಿಗಳ ಮೇಲೆ ಏಕಕಾಲದಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು ಇತ್ತೀಚಿನ ದಿನಗಳಲ್ಲಿ ಇದೇ ಮೊದಲ ಸಲವಾಗಿದ್ದು,ಅಧಿಕಾರಿಗಳ ತಂಡ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನೀರೀಕ್ಷಿಸಲಾಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು