ಮಂಗಳೂರು : ಹಾಸ್ಟೆಲ್ನಲ್ಲಿದ್ದ ಪ್ರೇಯಸಿಯನ್ನು ಸುತ್ತಾಡಲು ಕರೆದಾಗ ನಿರಾಕರಿಸಿದಕ್ಕೆ ಹಾಸ್ಟೆಲ್ ಮೇಲೆ ಕಲ್ಲು ತೂರಾಟ ನಡೆಸಿದ ಯುವಕ!
ಮಂಗಳೂರು: ಪ್ರೇಯಸಿ ಸುತ್ತಾಟಕ್ಕೆ ಬಂದಿಲ್ಲವೆಂದು ಯುವಕನೊಬ್ಬ ಪಿಜಿ ಹಾಸ್ಟೆಲ್ ಕಟ್ಟಡಕ್ಕೆ ಕಲ್ಲೆಸೆದು ದಾಂಧಲೆ ನಡೆಸಿರುವ ಘಟನೆ ನಗರದ ಆಗ್ನೆಸ್ ಕಾಲೇಜು ಬಳಿ ಗುರುವಾರ ರಾತ್ರಿ ನಡೆದಿದೆ. ಸ್ಥಳದಲ್ಲಿ ಜಮಾಯಿಸಿದ ಜನತೆ ಹಿಡಿದು ಆತನಿಗೆ ಥಳಿಸಿ ಪೊಲೀಸರಿಕೊಪ್ಪಿಸಿದ್ದಾರೆ.
ಸುಳ್ಯ ಮೂಲದ ವಿವೇಕ್ (18) ಎಂಬಾತ ಕೃತ್ಯ ಎಸಗಿರುವ ಆರೋಪಿ. ಈತ ಮಂಗಳೂರಿನಲ್ಲಿ ಇಲೆಕ್ಟ್ರಿಜ್ ಕೆಲಸ ಮಾಡುತ್ತಿದ್ದ. ನಗರದ ಆಗ್ನೆಸ್ ಬಳಿಯ ವಿದ್ಯಾರ್ಥಿನಿಯರ ಪಿಜಿಯಲ್ಲಿ ಕೆಲಸಕ್ಕಿದ್ದ ಯುವತಿಯೊಂದಿಗೆ ಪ್ರೀತಿ ಹೊಂದಿದ್ದ. ಗುರುವಾರ ಸಂಜೆ ಆಕೆಗೆ ಕರೆ ಮಾಡಿ, ಹೊರಗೆ ಸುತ್ತಾಡಲು ಬರುವಂತೆ ಕೇಳಿಕೊಂಡಿದ್ದ. ಆದರೆ ಯುವತಿ ಬರುವುದಿಲ್ಲ ಎಂದು ನಿರಾಕರಿಸಿದ್ದಾಳೆ.
ಪದೇ ಪದೇ ಕರೆ ಮಾಡಿದರೂ ಕೆಲಸ ಇದೆಯೆಂದು ಹೇಳಿ ಆಕೆ ನಿರಾಕರಿಸಿದ್ದರಿಂದ ಸಿಟ್ಟಿಗೆದ್ದ ಯುವಕ ಪಿಜಿ ಹಾಸ್ಟೆಲ್ ಮೇಲೆ ಕಲ್ಲು ತೂರಾಟ ಮಾಡಿ ದಾಂಧಲೆ ಮಾಡಿದ್ದಾನೆ. ಪರಿಣಾಮ ಹಾಸ್ಟೆಲ್ ಕಿಟಕಿ, ಗಾಜು ಒಡೆದು ಹೋಗಿದೆ. ಯುವಕನನ್ನು ತಕ್ಷಣ ಸ್ಥಳೀಯರು ಹಿಡಿದು ಥಳಿಸಿದ್ದಾರೆ. ಬಳಿಕ ಕದ್ರಿ ಪೊಲೀಸರನ್ನು ಕರೆಸಿ ಅವರ ವಶಕ್ಕೆ ಒಪ್ಪಿಸಿದ್ದಾರೆ. ಯುವಕನ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ. ಮದ್ಯದ ನಶೆಯಲ್ಲಿ ಆತ ಕಲ್ಲು ತೂರಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುಳ್ಯ ಮಸೂದ್ ಕೊಲೆ ಪ್ರಕರಣ – ಇಬ್ಬರು ಅರೋಪಿಗಳಿಗೆ ಹೈಕೋರ್ಟ್ ಜಾಮೀನು..!
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೆಳ್ಳಾರೆಯಲ್ಲಿ 2022 ರ ಜುಲೈ ತಿಂಗಳಲ್ಲಿ ನಡೆದಿದ್ದ ಮಸೂದ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಇಬ್ಬರು ಆರೋಪಿಗಳಿಗೆ ರಾಜ್ಯ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಬೆಳ್ಳಾರೆ ಸಮೀಪದ ಕಳೆಂಜ ಎಂಬಲ್ಲಿ ಮಸೂದ್ ಕೊಲೆ ಕೃತ್ಯ ನಡೆದಿತ್ತು. ಈ ಪೈಕಿ ಅಭಿಲಾಷ್ ಮತ್ತು ಸುನಿಲ್ ಇವರಿಗೆ ಈಗ ಜಾಮೀನು ಲಭಿಸಿದೆ. ಆರು ಮಂದಿಗೆ ಈ ಮೊದಲೇ ಜಾಮೀನು ಸಿಕ್ಕಿತ್ತು. ಈ ಪ್ರಕರಣಕ್ಕೆ ಸಂಬ0ಧಿಸಿ ಒಟ್ಟು ಎಂಟು ಮಂದಿಯನ್ನು ಬಂಧಿಸಲಾಗಿತ್ತು.
ಜಾಮೀನು ಅರ್ಜಿಯನ್ನು ಪರಿಗಣಿಸಿದ ಕರ್ನಾಟಕದ ಉಚ್ಚ ನ್ಯಾಯಾಲಯದ ಏಕಸದಸ್ಯ ಪೀಠದ ಜಸ್ಟಿಸ್ ವಿಶ್ವಜೀತ್ ಎಸ್ ಶೆಟ್ಟಿ, ಒಂದು ವರ್ಷದ ಮೇಲೆ ಆರೋಪಿಯಾಗಿ ಜೈಲಿನಲ್ಲಿದ್ದಾರೆಂಬ ವಾದಕ್ಕೆ ಪುರಸ್ಕರಿಸಿದ್ದಾರೆ.ಆರೋಪಿಗಳ ಪರವಾಗಿ ಹಿರಿಯ ವಕೀಲ ಅರುಣ್ ಶಾಮ್ ವಾದ ಮಂಡಿಸಿದ್ದರು. ವಕೀಲರಾದ ಸುಯೋಗ್ ಹೇರಳೆ ಮತ್ತು ನಿಶಾಂತ್ ಕುಶಾಲಪ್ಪ ವಕಾಲತ್ತು ವಹಿದ್ದರು.