ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹೈಕಮಾಂಡ್ ನ ನಿಲುವಿಗೆ ಹೆದರಿ ನಿವೃತ್ತಿ ಘೋಷಿಸಿದ್ರಾ ಡಿ ವಿ ಸದಾನಂದ ಗೌಡರು ; ಯಡಿಯೂರಪ್ಪ ಕೊಟ್ಟ ಸ್ಪಷ್ಟನೆ ಏನು?

Twitter
Facebook
LinkedIn
WhatsApp
ಹೈಕಮಾಂಡ್ ನ ನಿಲುವಿಗೆ ಹೆದರಿ ನಿವೃತ್ತಿ ಘೋಷಿಸಿದ್ರಾ ಡಿ ವಿ ಸದಾನಂದ ಗೌಡರು ; ಯಡಿಯೂರಪ್ಪ ಕೊಟ್ಟ ಸ್ಪಷ್ಟನೆ ಏನು?

ಚುನಾವಣಾ ರಾಜಕೀಯದಿಂದ ಬಿಜೆಪಿ ಸಂಸದ ಡಿವಿ ಸದಾನಂದಗೌಡ( D.V.Sadananda Gowda) ಅವರು ನಿವೃತ್ತಿ ಘೋಷಿಸಿದ್ದಾರೆ. ಇದರಿಂದ ರಾಜ್ಯ ಬಿಜೆಪಿ ಸಂಚಲನಕ್ಕೆ ಕಾರಣವಾಗಿದೆ. ಏಕಾಏಕಿ ಚುನಾವಣಾ ರಾಜಕೀಯದಿಂದ ನಿವೃತ್ತಿಗೊಳ್ಳಲು ಕಾರವೇನು? ಹೈಕಮಾಂಡ್ ಏನಾದರೂ ನಿವೃತ್ತಿ ಘೋಷಿಸಲು ಹೇಳಿತ್ತಾ? ಹೀಗೆ ಹಲವು ಪ್ರಶ್ನೆಗಳು ಕಾರ್ಯಕರ್ತರಲ್ಲಿ ಉದ್ಭವಿಸಿವೆ. ಇದರ ಮಧ್ಯೆ ಇದಕ್ಕೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿ, ಚುನಾವಣೆಗೆ ನಿಲ್ಲದಂತೆ ನೇರವಾಗಿ ಕೇಂದ್ರ ಸೂಚಿಸಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಮತ್ತೊಂದೆಡೆ ಇದಕ್ಕೆ ಸ್ವತಃ ಸದಾನಂದಗೌಡ ಮಾತನಾಡಿ, ಪಕ್ಷ ಏನಾದರೂ ಚಿರತೆ ಹೊಡಿಸುವಂತೆ ಹೇಳಿದರೂ ಸಹ ನಾನು ಅದನ್ನು ಮಾಡುತ್ತೇನೆ. ರಾಜಕೀಯ ನಿವೃತ್ತಿ ಹಿಂದೆ ಯಾರ ಒತ್ತಡ ಇಲ್ಲ ಎಂದು ಸ್ಪಷ್ಟಪಡಿಸಿದರು.

ಸದಾನಂದಗೌಡ ಹೇಳಿದ್ದೇನು?

ಇನ್ನು ಈ ಬಗ್ಗೆ ಮಂಡ್ಯದಲ್ಲಿಂದ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸದಾನಂದಗೌಡ, ಮನುಷ್ಯನಿಗೆ ಕೆಲವು ಇತಿಮಿತಿ ಇರಬೇಕು. ಮೂವತ್ತು ವರ್ಷದಿಂದ ಎಲ್ಲ ಸ್ಥಾನಮಾನ ನೋಡಿದ್ದೇನೆ. ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಕೂಡ ಅಗಿದ್ದೆ. ಕೇಂದ್ರದಲ್ಲಿ ಏಳು ವರ್ಷ ಮೋದಿ ಜೊತೆ ಇದ್ದೆ. ಸಿಎಂ ಆಗಿದ್ದೆ, ರಾಜ್ಯಾಧ್ಯಕ್ಷ ಕೂಡ ಆಗಿದ್ದೆ. ಬಿಜೆಪಿ ದೊಡ್ಡ ಮಟ್ಟದ ಸಂಘಟನೆ ಆಗುತ್ತಿದೆ. 40 ವರ್ಷಕ್ಕಿಂತ ಕೆಳಗಿನವರು ದೇಶದಲ್ಲಿ 60 ಪರ್ಸೆಂಟ್ ಇದ್ದಾರೆ. ನಾನು ಸಾಯುವಾಗ ನನ್ನ ಶವಕ್ಕೆ ಬಿಜೆಪಿ ಬಟ್ಟೆ ಹಾಕಬೇಕು ಎನ್ನುವ ರಾಜನೀತಿ ಒಪ್ಪಲ್ಲ ಎಂದರು.

ಪಕ್ಷ ಎಲ್ಲವೂ ಕೊಟ್ಟಿದೆ. 25 ವರ್ಷದ ನಂತರ ಚುನಾವಣಾ ರಾಜಕೀಯ ದೂರ ಆಗಬೇಕು ಎಂದುಕೊಂಡಿದ್ದೇ. ಆದ್ರೆ, ಪಕ್ಷದ ಒತ್ತಡದ ಹಿನ್ನೆಲೆಯಲ್ಲಿ ನಾನು ಕಳೆದ ಬಾರಿ ಸ್ವರ್ಧೆ ಮಾಡಿದ್ದೆ. ಈ ಬಾರಿ ಆರು ತಿಂಗಳ ಮುಂಚೆ ಹೇಳಿದ್ರೆ ಹೊಸಬರನ್ನ ಹುಡುಕಲು ಅನುಕೂಲ ಆಗುತ್ತೆ. ಪಾರ್ಟಿ ಕೆಲಸ ಮಾಡಲು ಅವಕಾಶ ಸಿಗುತ್ತೆ. ಪಕ್ಷ ಏನಾದರೂ ಚಿರತೆ ಹೊಡಿಸುವಂತೆ ಹೇಳಿದರೂ ಸಹ ನಾನು ಅದನ್ನು ಮಾಡುತ್ತೇನೆ. ನಾನು ಯಾರ ಹಿಂದೆ ಚೀಲ ಹಿಡಿದುಕೊಂಡು ಹೋಗಿಲ್ಲ. ಯಾರಿಗೂ ಬೆಣ್ಣೆ ಹಾಕಿಕೊಂಡು ಹೋಗಿಲ್ಲ. ಗುಂಪುಗಾರಿಕೆ ಮಾಡಿಲ್ಲ. ಬಿಜೆಪಿ ಗುಂಪು‌ ಮಾತ್ರ. ರಾಜಕೀಯ ನಿವೃತ್ತಿ ಹಿಂದೆ ಯಾರ ಒತ್ತಡ ಇಲ್ಲ ಎಂದು ಸ್ಪಷ್ಟಪಡಿಸಿದರು.

ಯಡಿಯೂರಪ್ಪ ಹೇಳಿದ್ದಿಷ್ಟು

ಸದಾನಂದ ಗೌಡ ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ ವಿಚಾರದ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸದಾನಂದ ಗೌಡರಿಗೆ ಕೇಂದ್ರ ಸೂಚನೆ ಕೊಟ್ಟಿದೆ. ಹೀಗಾಗಿ ಅವರು ಈ ಬಾರಿ ಚುನಾವಣೆಗೆ ನಿಲ್ಲುವುದಿಲ್ಲ. ಪಕ್ಷದ ಕಾರ್ಯಕ್ರಮದಲ್ಲಿ ಸಕ್ರಿಯರಾಗಿ ಇರಲು ಪಕ್ಷ ಹೇಳಿದೆ. ನೇರವಾಗಿ ಚುನಾವಣೆಗೆ ನಿಲ್ಲದಂತೆ ಸೂಚಿಸಿದೆ ಎಂದು ಹೇಳಿದರು.

ಈ ಬಾರಿ ಲೋಕಸಭಾ ಚುನಾವಣೆಗೆ ಟಿಕೆಟ್ ನೀಡಲು ಆಗಲ್ಲ. ಚುನಾವಣೆಗೆ ನಿಲ್ಲಬೇಡಿ ಎಂದು ನೇರವಾಗಿ ಹೈಕಮಾಂಡ್ ಸದಾನಂದಗೌಡರಿಗೆ ಹೇಳಿದೆ  ಎನ್ನುವ ಅರ್ಥದಲ್ಲಿ ಬಿಎಸ್​ವೈ ಹೇಳಿದ್ದಾರೆ. ಆದ್ರೆ, ನಿವೃತ್ತಿಯಿಂದ ಯಾರ ಒತ್ತಡ ಇಲ್ಲ ಎಂದು ಸದಾನಂದಗೌಡ ಹೇಳಿದ್ದಾರೆ. ಒಟ್ಟಿನಲ್ಲಿ ಸದಾನಂಗೌಡ ಅವರ ಚುನಾವಣಾ ರಾಜಕೀಯ ನಿವೃತ್ತಿ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist