Mangalore : ಕರ್ನಾಟಕ ಬ್ಯಾಂಕ್ ಅಧಿಕಾರಿ ಶವ ಪತ್ತೆ; ಕತ್ತುಕೊಯ್ದ ಆತ್ಮಹತ್ಯೆ ಶಂಕೆ
ಮಂಗಳೂರಿನ ಪಂಪ್‌ವೆಲ್‌ನಲ್ಲಿರುವ ಕರ್ನಾಟಕ ಬ್ಯಾಂಕ್ ಶಾಖೆಯಲ್ಲಿ ಚೀಫ್ ಕಂಪ್ಲೈಂಟ್ ಆಫೀಸರ್ ಆಗಿದ್ದ ವಾದಿರಾಜ್ ಅವರ ಶವ ಕತ್ತು ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೇಲ್ನೋಟಕ್ಕೆ 52 ವರ್ಷದ ವಾದಿರಾಜ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Mangalore, ನ.09: ಮಂಗಳೂರು (Mangalore) ನಗರ ಹೊರವಲಯದ ಬೊಂದೇಲ್ನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಕತ್ತುಕೊಯ್ದ ಸ್ಥಿತಿಯಲ್ಲಿ ಕರ್ನಾಟಕ ಬ್ಯಾಂಕ್ನ ಜನರಲ್ ಮ್ಯಾನೇಜರ್(Karnataka Bank Manager) ಪತ್ತೆಯಾಗಿದ್ದು, ಗಂಭೀರ ಗಾಯಗೊಂಡಿದ್ದ ವಾದಿರಾಜ ಅವರು ಇದೀಗ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ವಾದಿರಾಜ ಕೆ.ಎ(51) ಮೃತ ವ್ಯಕ್ತಿ. ಪತ್ನಿ ಮಕ್ಕಳು ಹೊರಗಡೆ ಹೋಗಿದ್ದಾಗ ಈ ಘಟನೆ ನಡೆದಿದ್ದು, ಆತ್ಮಹತ್ಯೆ ಎಂಬ ಶಂಕೆ ಮೂಡಿದೆ. ಇನ್ನು ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ಘಟನೆ ಕುರಿತು ಪ್ರತಿಕ್ರಿಯಿಸಿದ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ‘ ವಾದಿರಾಜ ಆಚಾರ್ಯ ಒಂದು ವರ್ಷದಿಂದ ಇಲ್ಲಿ ಬಾಡಿಗೆ ಮನೆಯಲ್ಲಿದ್ದರು.
ಕರ್ನಾಟಕ ಬ್ಯಾಂಕ್‌ನಲ್ಲಿ ಚೀಫ್ ಕಂಪ್ಲೇಂಟ್ ಆಫೀಸರ್ ಆಗಿ, ನಾಲ್ಕು ವರ್ಷದಿಂದ ಅಲ್ಲಿ ಕೆಲಸ ಮಾಡುತ್ತಿದ್ದರು. ಇಂದು ವಾದಿರಾಜ ಅವರ ಹೆಂಡತಿ ಮಕ್ಕಳ ಜೊತೆ ಶಾಲೆಯಲ್ಲಿ ಪೋಷಕರ ಸಭೆಗೆ ತೆರಳಿದ್ದರು. ಈ ವೇಳೆ ವಾದಿರಾಜ ಒಬ್ಬರೇ ಮನೆಯಲ್ಲಿದ್ದರು, ಕಾರು ಚಾಲಕ ಮನೆಗೆ ಬಂದು ನೋಡಿದಾಗ ವಾದಿರಾಜ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ತಕ್ಷಣ ಅಪಾರ್ಟ್‌ಮೆಂಟ್‌ನಲ್ಲಿದ್ದವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಹೆಚ್ಚಿನ ಗಾಯವಾಗಿದ್ದರಿಂದ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಪಂಪ್‌ವೆಲ್ ಪ್ರಧಾನ ಕಚೇರಿಯಲ್ಲಿ ಚೀಫ್ ಕಂಪ್ಲೇಂಟ್ ಆಫೀಸರ್ ಆಗಿದ್ದ ವಾದಿರಾಜ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಬ್ಯಾಂಕ್ ಅಧಿಕಾರಿಗಳಿಗಷ್ಟೇ ಅಲ್ಲ, ಸ್ಥಳೀಯರಿಗೂ ಆತಂಕ ತಂದಿದೆ. ಬೆಳಗ್ಗೆ 10 ಗಂಟೆ ವೇಳೆಗೆ ವಾದಿರಾಜ್ ಅವರ ಪತ್ನಿ ತಮ್ಮ ಮಗುವಿನೊಂದಿಗೆ ಶಾಲೆಯಲ್ಲಿ ಪೇರೆಂಟ್ಸ್ ಮೀಟಿಂಗ್ ಇದೆ ಎಂದು ತೆರಳಿದ್ದರು. ನಂತರ ಮನೆಯಲ್ಲಿ ವಾದಿರಾಜ್ ಒಬ್ಬರೇ ಇದ್ದರು.
ಬ್ಯಾಂಕಿನ ವಾಹನ ಚಾಲಕ ವಾದಿರಾಜ್ ಕೆಳಗೆ ಬರುತ್ತಾರೆಂದು ಕಾಯುತ್ತ ಕುಳಿತಿದ್ದರು. ವಾದಿರಾಜ್ ಇನ್ನೂ ಬಂದಿಲ್ಲವೆಂದು ಚಾಲಕ ಮೇಲೆ ಹೋಗಿ ನೋಡಿದಾಗ ಕತ್ತು ಕೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಕಾರು ಚಾಲಕ ಕೂಡಲೇ ಸ್ಥಳೀಯರನ್ನು ಸೇರಿಸಿ ವಾದಿರಾಜ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ಒಯ್ದಿದ್ದಾರೆ. ಅದಾಗಲೇ ಬಹಳಷ್ಟು ರಕ್ತ ಹೋಗಿದ್ದರಿಂದ ಆಸ್ಪತ್ರೆ ತಲುಪುವಷ್ಟರಲ್ಲಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್‌ವಾಲ್ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
ವಾದಿರಾಜ ಸಾವು ಪ್ರಕರಣ ಕುರಿತು ಮಾತನಾಡಿದ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್‌ವಾಲ್, ʼವಾದಿರಾಜ ಆಚಾರ್ಯ ಒಂದು ವರ್ಷದಿಂದ ಈ ಅಪಾರ್ಟ್‌ಮೆಂಟ್‌ನಲ್ಲಿ ಬಾಡಿಗೆ ಮನೆಯಲ್ಲಿದ್ದರು. ಇವರು ಕರ್ನಾಟಕ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದರು.
ನಾಲ್ಕು ವರ್ಷದಿಂದ ಪಂಪ್‌ವೆಲ್‌ನ ಕಚೇರಿಯಲ್ಲಿದ್ದಾರೆ. ಅವರ ಹೆಂಡತಿ ಮಕ್ಕಳ ಜೊತೆ ಶಾಲೆಯಲ್ಲಿ ಪೋಷಕರ ಸಭೆಗೆ ತೆರಳಿದ್ದರು. ಆ ವೇಳೆ ವಾದಿರಾಜ ಒಬ್ಬರೇ ಮನೆಯಲ್ಲಿದ್ದು, ಕಾರು ಚಾಲಕ ಮನೆಗೆ ಬಂದು ನೋಡಿದಾಗ ವಾದಿರಾಜ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ತಕ್ಷಣ ಅಪಾರ್ಟ್‌ಮೆಂಟ್‌ನಲ್ಲಿದ್ದವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ ಗಾಯವಾಗಿದ್ದರಿಂದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಚಾಕುವಿನಿಂದ ಹೊಟ್ಟೆ ಮತ್ತು ಕುತ್ತಿಗೆ ಮೇಲೆ ಕೊಯ್ದಿರುವ ಗಾಯವಿದೆ. ದೂರಿನ ಆಧಾರದಲ್ಲಿ ತನಿಖೆ ಮಾಡುತ್ತೇವೆ. ಸಿಸಿಟಿವಿ ಫೋಟೇಜ್ ಎಲ್ಲಾ ಚೆಕ್ ಮಾಡಲಾಗಿದೆ. ಆ ಸಂದರ್ಭ ಫೋನ್‌ನಲ್ಲಿ ಯಾರೆಲ್ಲಾ ಮಾತನಾಡಿದ್ದಾರೆ ಎಂದು ತನಿಖೆ ಮಾಡುತ್ತಿದ್ದೇವೆʼ ಎಂದು ಅನುಪಮ್ ಅಗರ್‌ವಾಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.