ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬೆಂಗಳೂರಿನಲ್ಲಿ ಮಧ್ಯ ರಾತ್ರಿ 12 ಗಂಟೆಗೆ ಹೊತ್ತಿ ಉರಿದ 4 ಅಂತಸ್ತಿನ ಬಿಲ್ಡಿಂಗ್!

Twitter
Facebook
LinkedIn
WhatsApp
ಬೆಂಗಳೂರಿನಲ್ಲಿ ಮಧ್ಯ ರಾತ್ರಿ 12 ಗಂಟೆಗೆ ಹೊತ್ತಿ ಉರಿದ 4 ಅಂತಸ್ತಿನ ಬಿಲ್ಡಿಂಗ್!

ಬೆಂಗಳೂರು, ನ.13: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ (Fire Accident) ಅವಘಡ ಸಂಭವಿಸಿದೆ. ಬಾಣಸವಾಡಿ ಔಟರ್ ರಿಂಗ್ ರೋಡ್ ನಲ್ಲಿ ನಾಲ್ಕು ಅಂತಸ್ತಿನ‌ ಬಿಲ್ಡಿಂಗ್ ಧಗ-ಧಗನೇ ಹೊತ್ತಿ ಉರದಿದೆ. ಸದ್ಯ ಭಾರೀ ಅನಾಹುತ ತಪ್ಪಿದ್ದು ಕಟ್ಟಡದಲ್ಲಿ ಸಿಲುಕಿದ್ದ ಇಬ್ಬರು ಸೆಕ್ಯೂರಿಟಿ ಗಾರ್ಡ್​ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೆಕ್ಯೂರಿಟೀಸ್​ಗಳನ್ನ ಅಗ್ನಿಶಾಮಕದಳ ಸಿಬ್ಬಂದಿ ರಕ್ಷಿಸಿದ್ದಾರೆ. ಘಟನೆಯಲ್ಲಿ ಫರ್ನಿಚರ್ ಶಾಪ್, ಕೋಚಿಂಗ್ ಸೆಂಟರ್, ಐಟಿ ಕಂಪನಿಯ ದಾಖಲೆಗಳು ಸಂಪೂರ್ಣ ಸುಟ್ಟು ಕರಕಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.

 

ತಡ ರಾತ್ರಿ 12 ಘಂಟೆಗೆ ಬಾಣಸವಾಡಿ ಔಟರ್ ರಿಂಗ್ ರೋಡ್ ನಲ್ಲಿರುವ ನಾಲ್ಕು ಅಂತಸ್ತಿನ‌ ಬಿಲ್ಡಿಂಗ್ ಧಗ-ಧಗನೇ ಹೊತ್ತಿ ಉರದಿದೆ. ನೆಲ ಹಾಗೂ ಮೊದಲ ಮಹಡಿಯಲ್ಲಿ ಸ್ಟ್ಯಾನ್ಲಿ ಫರ್ನಿಚರ್ಸ್, ಎರಡನೇ ಮಹಡಿಯಲ್ಲಿ ಕಾಮೆಡ್ ಕೋಂಚಿಂಗ್ ಸೆಂಟರ್, 3 ಮತ್ತು 4 ನೇ ಮಹಡಿಯಲ್ಲಿ ಬ್ರೇಕ್ಸ್ ಕಂಟ್ರೋಲ್ಸ್, ಸಾಫ್ಟ್‌ವೇರ್ ಕಂಪನಿ ಇತ್ತು. ಇಡೀ ಕಟ್ಟಡ ಸಂಪೂರ್ಣ ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ಬಂದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಪಟಾಕಿ ಅವಘಡ, 16 ಪ್ರಕರಣ ದಾಖಲು

ಇನ್ನು ಮತ್ತೊಂದೆಡೆ ನರಕ ಚತುರ್ದಶಿ ದಿನವಾದ ಭಾನುವಾರ ನಗರದ ವಿವಿಧೆಡೆ ಪಟಾಕಿ ಅವಘಡಗಳು ಸಂಭವಿಸಿವೆ. ನಿನ್ನೆ ಒಂದೇ ದಿನ ನಾರಾಯಣ ನೇತ್ರಾಲಯದಲ್ಲಿ 16 ಪ್ರಕರಣಗಳು ವರದಿಯಾಗಿವೆ. ಈ ಪ್ರಕರಣಗಳಲ್ಲಿ ಆರು ಮಂದಿಗೆ ಗಂಭೀರ ಗಾಯಗಳಾಗಿದ್ದು, 10 ಮಂದಿಗೆ ಪಟಾಕಿ ಕಿಡಿಯಿಂದ ಸಣ್ಣ ಪುಟ್ಟ ಗಾಯಗಳಾಗಿವೆ. ಇವರಲ್ಲಿ ಶೇ 90ರಷ್ಟು ಮಂದಿ ಪಟಾಕಿ ಹಚ್ಚದಿದ್ದರೂ, ವೀಕ್ಷಿಸುವ ವೇಳೆ ಗಾಯಗೊಂಡಿದ್ದಾರೆ.

ಇನ್ನು ಗಂಭೀರವಾಗಿ ಗಾಯಗೊಂಡಿರುವ ಆರು ಪ್ರಕರಣಗಳಲ್ಲಿ ಮೂರು ಮಂದಿ 19 ರಿಂದ 22 ವರ್ಷದೊಳಗಿನವರಾಗಿದ್ದಾರೆ. ಇಬ್ಬರು ಹತ್ತು ವರ್ಷದದ ಮಕ್ಕಳಾಗಿದ್ದು, ಒಬ್ಬರು 50 ವರ್ಷದವರಾಗಿದ್ದಾರೆ. ಇಬ್ಬರಿಗೆ ಕಣ್ಣಿನ ಒಳಗಡೆ ರಕ್ತಸ್ರಾವ ಆಗಿದೆ. ಮಕ್ಕಳ ಕಣ್ಣಿನಲ್ಲಿ ಸೇರಿದ್ದ ರಾಸಾಯನಿಕ ಕಣಗಳನ್ನು ತೆಗೆದು, ಸ್ವಚ್ಛಗೊಳಿಸಲಾಗಿದೆ ಎಂದು ನಾರಾಯಣ ನೇತ್ರಾಲಯದ ಅಧ್ಯಕ್ಷ ಡಾ.ರೋಹಿತ್ ಶೆಟ್ಟಿ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist