ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಉಡುಪಿ: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣ; ಚಾಣಾಕ್ಷತನದಿಂದ ಎಸ್ಕೇಪ್ ಆಗುತ್ತಿರುವ ಕೊಲೆಗಾರರು ..!

Twitter
Facebook
LinkedIn
WhatsApp
ಉಡುಪಿ: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣ; ಚಾಣಾಕ್ಷತನ ಎಸ್ಕೇಪ್ ಆಗುತ್ತಿರುವ ಕೊಲೆಗಾರರು ..!

ಉಡುಪಿ, (ನವೆಂಬರ್ 14): ನಉಡುಪಿಯ (Udupi) ನೇಜಾರಿನ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ(Murder) ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕನ ಚಾಣಾಕ್ಷತನ ಕಂಡು ಪೊಲೀಸರೇ ತಬ್ಬಿಬ್ಬಾಗಿದ್ದಾರೆ. ಹೌದು..ಆರೋಪಿ ಕೊಲೆ ಮಾಡಿದ ಬಳಿಕ ಪೊಲೀಸರಿಗೆ ಸಿಳಿವು ಸಿಗದಂತೆ ಉಡುಪಿ ನಗರದೊಳಗೆ ನಾಲ್ಕು ಬಾರಿ ವಾಹನ ಬದಲಾಯಿಸಿ ಪರಾರಿಯಾಗಿದ್ದಾನೆ. ಇದರಿಂದ ಆರೋಪಿಯನ್ನು ಕಂಡುಹಿಡಿಯಲು ಪೊಲೀಸರಿಗೆ ಇದುವರೆಗೂ ಸಾಧ್ಯವಾಗಿಲ್ಲ. ಇದೀಗ ಕೊನೆ ಪೊಲೀಸರು ಟೆಕ್ನಿಕಲ್ ಎವಿಡೆನ್ಸ್ ಆಧಾರದ ಮೇಲೆ ಕೊಲೆಗಾರನ ಪತ್ತೆಗೆ ಬಲೆ ಬೀಸಿದ್ದಾರೆ.

ದುಷ್ಕರ್ಮಿಯೊಬ್ಬ ನವೆಂಬರ್ 12ರಂದು ಮನೆಗೆ ನುಗ್ಗಿ ನಾಲ್ವರನ್ನು ಕೊಲೆ ಮಾಡಿ ಪರಾರಿಯಾಗಿದ್ದ. ಈಗಾಗಲೇ ಹಂತಕನ ಬಂಧನಕ್ಕೆ ಉಡುಪಿ ಜಿಲ್ಲಾ ಪೊಲೀಸ್ ಐದು ತಂಡಗಳನ್ನು ರಚಿಸಿದ್ದು, ಹತ್ಯೆಯಾದ ಅಯ್ನಾಸ್ ಮತ್ತು ಅಫ್ನಾನ್ ಕಾಲ್ ಡೀಟೇಲ್ಸ್ ಆಧಾರದಲ್ಲಿ ತನಿಖೆ ತೀವ್ರಗೊಳಿಸಿದ್ದಾರೆ. ಕೊಲೆಗೆ ಆರ್ಥಿಕ ವ್ಯವಹಾರ ಕಾರಣ ಎನ್ನುವ ಶಂಕೆ ವ್ಯಕ್ತವಾಗಿದೆ. ಆದ್ರೆ, ಈವರೆಗೆ ಪೊಲೀಸರಿಗೆ ಯಾವುದೇ ಮಹತ್ವದ ಸುಳಿವು ಸಿಕ್ಕಿಲ್ಲ.

ಸಿಸಿ ಕ್ಯಾಮರಾ ಫೂಟೇಜ್ ಹೊರತುಪಡಿಸಿ ಬೇರೆ ಯಾವುದೇ ಸುಳಿವು ಪೋಲಿಸರಿಗೆ ಸಿಕ್ಕಿಲ್ಲ. ಸಾಕಷ್ಟು ಸಿಸಿಟಿವಿ ಫೋಟೇಜ್ ಸಿಕ್ಕರು ಆರೋಪಿಯ ಪತ್ತೆ ಮಾಡಲು ಪೊಲೀಸರಿಂದ ಸಾಧ್ಯವಾಗಿಲ್ಲ. ಹೀಗಾಗಿ ಪೊಲೀಸರು ಅಕ್ಕ ಪಕ್ಕದ ಜಿಲ್ಲೆಗಳಲ್ಲಿಯೂ ತನಿಖೆ ಚುರುಕುಗೊಳಿಸಿದ್ದಾರೆ.

ಮಹಿಳೆ ಡಿಸ್ಷಾರ್ಜ್

ನಾಲ್ವರ ಕಗ್ಗೊಲೆ ಘಟನೆಯಲ್ಲಿ ಚಾಕು ಇರಿತಕ್ಕೊಳಗಾಗಿದ್ದ ಹಾಜಿರಾ ಎನ್ನುವ ಮಹಿಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ನವೆಂಬರ್ 12ರಂದು ಹಾಜಿರಾ ಸಹ ದುಷ್ಕರ್ಮಿ ಎರಡು ಕಡೆ ಚಾಕು ಇರಿದು ಪರಾರಿಯಾಗಿದ್ದ. ಇದೀಗ ಚಿಕತ್ಸೆ ಪಡೆದು ಮಣಿಪಾಲ ಕೆ.ಎಂಸಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಸಂಪೂರ್ಣ ವಿಶ್ರಾಂತಿ ಪಡೆಯಲು ವೈದ್ಯರ ಸೂಚನೆ ನೀಡಿದ್ದಾರೆ.

ಬೆಂಗಳೂರು: ಕೆಲಸದಿಂದ ತೆಗೆದಿದ್ದಕ್ಕೆ ಕಂಪನಿಗೆ ಯುವತಿಯಿಂದ ಬಾಂಬ್ ಬೆದರಿಕೆ ಕರೆ

ಬೆಂಗಳೂರು ನ.14: ಕೆಲಸದಿಂದ ತೆಗೆದಿದ್ದಕ್ಕೆ ಕೋಪಗೊಂಡ ಯುವತಿ (Young Girl) ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಟಿ.ಸಿ.ಎಸ್​ ಕಂಪನಿಗೆ ​ಹುಸಿ ಬಾಂಬ್ ಕರೆ (Bomb threat) ಮಾಡಿದ್ದಾಳೆ. ಕರೆ ಬರುತ್ತಿದ್ದಂತೆ ಉದ್ಯೋಗಿಗಳು ಕಂಪನಿಯಿಂದ ಹೊರಬಂದಿದ್ದು, ಕೂಡಲೇ ಪರಪ್ಪನ ಅಗ್ರಹಾರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪರಪ್ಪನ ಅಗ್ರಹಾರ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯದಳ ಸ್ಥಳಕ್ಕೆ ಆಗಮಿಸಿ ಮೂಲೆ-ಮೂಲೆ ಜಾಲಾಡಿದ ನಂತರ ಇದೊಂದು ಹುಸಿ ಬಾಂಬ್​ ಕರೆ ಎಂದು ಖಚಿತವಾಗಿದೆ.

ಬೆಳಗಾವಿ ಮೂಲದ ಯುವತಿ ಟಿ.ಸಿ.ಎಸ್​ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದು, ಇತ್ತೀಚಿಗೆ ಕೆಲಸದಿಂದ ತೆಗೆಯಲಾಗಿತ್ತು. ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾಗೆ ಯುವತಿ ಕ್ಯಾಬ್ ಚಾಲಕನನ್ನು ಪರಿಚಯ ಮಾಡಿಕೊಂಡಿದ್ದಳು. ಪರಿಚಿತ ಕ್ಯಾಬ್ ಚಾಲಕನಿಗೆ ಕುಡಿದ ಮತ್ತಿನಲ್ಲಿ ಯುವತಿ ಕರೆ ಮಾಡಿ ಕಂಪನಿಯ ಬಿ ಬ್ಲಾಕ್​ನಲ್ಲಿ ಬಾಂಬ್ ಇದೆ ಎಂದು ಹೇಳಿದ್ದಳು.

ಇದರಿಂದ ಗಾಭರಿಗೊಂಡು ಪೊಲೀಸರಿಗೆ ಮಾಹಿತಿ ನೀಡಿದಾಗ ಇದೊಂದು ಹುಸಿ ಬಾಂಬ್​ ಕರೆ ಎಂದು ತಿಳಿದುಬಂದಿದೆ. ಇನ್ನು ಪೊಲೀಸರ ತಪಾಸಣೆ ವೇಳೆ ಯುವತಿ ಕರೆ ಮಾಡಿರುವುದು ಕನ್ಫರ್ಮ್ ಆಗಿದ್ದು, ಯುವತಿಯನ್ನ ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist