ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹೆಚ್. ಡಿ ಕುಮಾರಸ್ವಾಮಿ ನಿವಾಸದ ದೀಪಾಲಂಕಾರಕ್ಕೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ; ವಿಡಿಯೋ ವೈರಲ್

Twitter
Facebook
LinkedIn
WhatsApp
ಹೆಚ್. ಡಿ ಕುಮಾರಸ್ವಾಮಿ ನಿವಾಸದ ದೀಪಾಲಂಕಾರಕ್ಕೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ; ವಿಡಿಯೋ ವೈರಲ್

ನಿನ್ನೆಯಷ್ಟೇ ವಿದ್ಯುತ್ ಸಮಸ್ಯೆ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ(HD Kumaraswamy) ವಾಗ್ದಾಳಿ ನಡೆಸಿದ್ದರು. ಆದ್ರೆ, ಇದೀಗ ಮನೆಗೆ ವಿದ್ಯುತ್ ದೀಪಾಲಂಕಾರಕ್ಕೆ ಅನಧಿಕೃತವಾಗಿ ವಿದ್ಯುತ್​ ಸಂಪರ್ಕ ಪಡೆದ(illegal electricity connection )ಆರೋಪ ಕೇಳಿಬಂದಿದೆ. ಹೌದು…ಇಂದು ದೀಪಾವಳಿ ಹಬ್ಬದ ಪ್ರಯುಕ್ತ ಬೆಂಗಳೂರಿನ ಜೆ.ಪಿ.ನಗರದಲ್ಲಿರುವ ಕುಮಾರಸ್ವಾಮಿ ನಿವಾಸಕ್ಕೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಆದ್ರೆ, ವಿದ್ಯುತ್​ ಅನ್ನು ಅನಧಿಕೃತವಾಗಿ ಬೀದಿ ದೀಪದ ಕಂಬದಿಂದ ನೇರವಾಗಿ ವಿದ್ಯುತ್ ಪಡೆಯಲಾಗಿದೆ ಎಂದು ಆರೋಪಿಸಲಾಗಿದೆ.

ಇನ್ನು ಈ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಜಗತ್ತಿನ ಏಕೈಕ ಮಹಾಪ್ರಾಮಾಣಿಕ ಹೆಚ್.ಡಿ ಕುಮಾರಸ್ವಾಮಿಯವರ ಜೆ ಪಿ ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ ಎಂದು ಟೀಕಿಸಿ ವಿಡಿಯೋ ಬಿಡುಗಡೆ ಮಾಡಿದೆ.

ಕುಮಾರಸ್ವಾಮಿ ಅವರೇ ನಮ್ಮ ಸರ್ಕಾರ ಗೃಹಜ್ಯೋತಿಯಲ್ಲಿ 200 ಯೂನಿಟ್ ಉಚಿತ ಕೊಡುತ್ತಿದೆಯೇ ಹೊರತು 2000 ಯೂನಿಟ್ ಅಲ್ಲ. ತಮಗೆ ಅಷ್ಟೊಂದು ದಾರಿದ್ರ್ಯ ಬಂದಿದ್ದರೆ ಗೃಹಜ್ಯೋತಿ ಯೋಜನೆಗೆ ಒಂದು ಅರ್ಜಿ ಹಾಕಬಹುದಿತ್ತಲ್ಲ, ಒಹ್, ತಿಳಿದಿರಲಿಲ್ಲ ಗೃಹಜ್ಯೋತಿಯಲ್ಲಿ ಒಬ್ಬರಿಗೆ ಒಂದೇ ಮೀಟರ್ ಗೆ ಅವಕಾಶವಿದೆ, ತಮ್ಮ ಹೆಸರಲ್ಲಿ ಹಲವು ಮೀಟರ್ ಗಳಿವೆಯಲ್ಲವೇ ಎಂದು ಕುಮಾರಸ್ವಾಮಿಗೆ ಟಾಂಗ್ ಕೊಟ್ಟಿದೆ.

ರಾಜ್ಯದ ವಿದ್ಯುತ್ ಕೊರತೆಯ ನಡುವೆಯೂ ರೈತರಿಗೆ 7 ಗಂಟೆ ವಿದ್ಯುತ್ ಕೊಡುವ ಕ್ರಮ ಕೈಗೊಂಡಿದ್ದರೂ ಪುಂಖಾನುಪುಂಕವಾಗಿ ಮಾತಾನಾಡುವ ತಾವು ಇಂತಹ ಚೀಪ್ ಕಳ್ಳತನಕ್ಕೆ ಇಳಿಯುವಷ್ಟು “ಬರ” ಎದುರಿಸುತ್ತಿದ್ದೀರಾ? ಅದೇನೋ ಪತ್ರಿಕಾಗೋಷ್ಠಿ ನಡೆಸಿ “ಕರ್ನಾಟಕ ಕತ್ತಲಲ್ಲಿದೆ“ ಎನ್ನುತ್ತಾ ಬಡಬಡಿಸಿದ್ದಿರಲ್ಲವೇ, ಈಗ ಕದ್ದ ವಿದ್ಯುತ್ತಿನಲ್ಲಿ ನಿಮ್ಮ ಮನೆಗೆ ಬೆಳಕು ಮಾಡಿಕೊಂಡಿದ್ದೀರಿ, ನಿಮ್ಮ ಮನೆ ಹೀಗೆ ಜಗಮಗ ಹೊಳೆಯುತ್ತಿರುವಾಗ ಅದ್ಯಾವ ಬಾಯಲ್ಲಿ ಕರ್ನಾಟಕ ಕತ್ತಲಲ್ಲಿದೆ ಎನ್ನುವಿರಿ ಸ್ವಾಮಿ? ಎಂದು ಪ್ರಶ್ನಿಸಿದೆ.

ನಿಮ್ಮದೇ ಶೈಲಿಯ ಪ್ರಶ್ನೆ ಕೇಳಬೇಕೆಂದರೆ, ರಾಜ್ಯ ಬರ ಎದುರಿಸುತ್ತಿರುವಾಗ ನಿಮ್ಮ ಮನೆ ಮಾತ್ರ ಜಗಮಗಿಸಬೇಕೆ? ರೈತರ ಪಾಲಿನ ವಿದ್ಯುತ್ ಕಳ್ಳತನ ಮಾಡಿ ಮೋಜು ಮಾಡಬೇಕೆ? ನಿಮ್ಮ ಮನೆಯ ದೀಪಾವಳಿಗೆ ರಾಜ್ಯದ ಜನರ “ದಿವಾಳಿ”ಯನ್ನು ಬಯಸುತ್ತಿದ್ದೀರಾ? ವಿದ್ಯುತ್ತನ್ನೇ ಬಿಡದೆ ಲೂಟಿ ಮಾಡುವ ತಾವು ರಾಜ್ಯವನ್ನು ಇನ್ನೆಷ್ಟು ಲೂಟಿ ಮಾಡಿರಬಹುದು? ಕಾಂಗ್ರೆಸ್​ ಕುಮಾರಸ್ವಾಮಿಗೆ ತಿರುಗೇಟು ನೀಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist