ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಖ್ಯಾತ ಓಬೇರಾಯ್ ಹೋಟೆಲ್ಸ್ ಸಂಸ್ಥೆಯ ಗೌರವಾಧ್ಯಕ್ಷರಾದ ಪೃಥ್ವಿರಾಜ್ ಸಿಂಗ್ ಓಬೇರಾಯ್ ನಿಧನ!

Twitter
Facebook
LinkedIn
WhatsApp
ಖ್ಯಾತ ಓಬೇರಾಯ್ ಹೋಟೆಲ್ಸ್ ಸಂಸ್ಥೆಯ ಗೌರವಾಧ್ಯಕ್ಷರಾದ ಪೃಥ್ವಿರಾಜ್ ಸಿಂಗ್ ಓಬೇರಾಯ್ ನಿಧನ!

ನವದೆಹಲಿ, ನವೆಂಬರ್ 14: ಖ್ಯಾತ ಓಬೇರಾಯ್ ಹೋಟೆಲ್ಸ್ ಸಂಸ್ಥೆಯ ಗೌರವಾಧ್ಯಕ್ಷರಾದ ಪೃಥ್ವಿರಾಜ್ ಸಿಂಗ್ ಓಬೇರಾಯ್ (Prithvi Raj Singh Oberoi) ಇಂದು ಮಂಗಳವಾರ ನಿಧನರಾಗಿದ್ದಾರೆ. ಇಬ್ಬರು ಪುತ್ರಿಯರು ಸೇರಿದಂತೆ ಅವರು ಮೂವರು ಮಕ್ಕಳನ್ನು ಅಗಲಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯ ಸಮಸ್ಯೆಯಿಂದ ಅವರು ಸಾವನ್ನಪ್ಪಿರುವುದು ತಿಳಿದುಬಂದಿದೆ.

ಪೃಥ್ವಿರಾಜ್ ಒಬೇರಾಯ್ ಅವರು ಕೆಲ ವರ್ಷಗಳಿಂದ ಸಂಸ್ಥೆಯ ಗೌರವಾಧ್ಯಕ್ಷರಾಗಿದ್ದರು. ಓಬೇರಾಯ್ ಗ್ರೂಪ್​ನ ಮಾಲೀಕ ಸಂಸ್ಥೆಯಾದ ಇಐಎಚ್ (ಈಸ್ಟ್ ಇಂಡಿಯಾ ಹೋಟೆಲ್ಸ್) ಲಿ ಸಂಸ್ಥೆಗೆ ಅವರು 2002ರಿಂದ 2013ರವರೆಗೂ ಛೇರ್ಮನ್ ಆಗಿ ಕಾರ್ಯನಿರ್ವಹಿಸಿದ್ದರು. ಓಬೇರಾಯ್ ಗ್ರೂಪ್​ನ ಲಕ್ಷುರಿ ಹೋಟೆಲ್ ಮತ್ತು ರೆಸಾರ್ಟ್​ಗಳ ವ್ಯವಹಾರವನ್ನು ಹೊಸ ಎತ್ತರಕ್ಕೆ ಕೊಂಡೊಯ್ದ ಶ್ರೇಯಸ್ಸು ಪೃಥ್ವಿರಾಜ್ ಅವರಿಗೆ ಸಲ್ಲಬೇಕು.

ಓಬೇರಾಯ್ ಗ್ರೂಪ್​ನ ಸಂಸ್ಥಾಪಕ ಅಧ್ಯಕ್ಷ ಮೋಹನ್ ಸಿಂಗ್ ಒಬೇರಾಯ್ ಅವರ ಮಗನಾದ ಪೃಥ್ವಿರಾಜ್ ಸಿಂಗ್ ಓಬೇರಾಯ್ ಅವರಿಗೆ ಸರ್ಕಾರ 2008ರಲ್ಲಿ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು. 2013ರಲ್ಲಿ ಸಂಸ್ಥೆಯ ಛೇರ್ಮನ್ ಸ್ಥಾನ ತ್ಯಜಿಸಿ ಗೌರವಾಧ್ಯಕ್ಷರಾಗಿದ್ದರು. ಅವರ ಮಗ ವಿಕ್ರಮ್ ಎಸ್ ಓಬೇರಾಯ್ ಅವರು ಈಸ್ಟ್ ಇಂಡಿಯಾ ಹೋಟೆಲ್ಸ್ ಸಂಸ್ಥೆಯ ಸಿಇಒ ಮತ್ತು ಎಂಡಿಯಾಗಿದ್ದಾರೆ.

ಉತ್ತರಾಖಂಡ್​ನ ದಾರ್ಜೀಲಿಂಗ್​ನಲ್ಲಿ ಶಾಲಾ ಶಿಕ್ಷಣ ಪಡೆದಿದ್ದ ಪೃಥ್ವಿರಾಜ್ ಸಿಂಗ್ ಒಬೇರಾಯ್ ಅವರು ಬ್ರಿಟನ್ ಮತ್ತು ಸ್ವಿಟ್ಜರ್​ಲ್ಯಾಂಡ್​ನಲ್ಲಿ ವೃತ್ತಿಪರ ಮತ್ತು ಉನ್ನತ ಶಿಕ್ಷಣ ಪಡೆದಿದ್ದರು. ಸ್ವಿಟ್ಜರ್​ಲ್ಯಾಂಡ್​ನ ಲೌಸಾನೆಯಲ್ಲಿ ಹೋಟೆಲ್ ಮ್ಯಾನೇಜ್ಮೆಂಟ್ ಶಿಕ್ಷಣ ಕೂಡ ಪಡೆದಿದ್ದ ಅವರು 2004ರಿಂದ ಜೆಟ್ ಏರ್ವೇಸ್​ನ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು. ಜಾಗತಿಕ ಹೋಟೆಲ್ ಉದ್ಯಮದಲ್ಲಿ 100 ಅತಿ ಪ್ರಬಲ ವ್ಯಕ್ತಿಗಳಲ್ಲಿ ಪೃಥ್ವಿರಾಜ್ ಓಬೇರಾಯ್ ಕೂಡ ಒಬ್ಬರೆಂದು ಇಂಟರ್ನ್ಯಾಷನಲ್ ಹಾಸ್ಪಿಟಾಲಿಟಿ ಇನ್ಸ್​ಟಿಟ್ಯೂಟ್ ಪರಿಗಣಿಸಿದೆ.

ಕೇರಳ: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಪ್ರಕರಣ; ಅಪರಾಧಿಗೆ ಮರಣದಂಡನೆ

ಆಲುವಾ ನವೆಂಬರ್14: ಜುಲೈ ತಿಂಗಳಲ್ಲಿ ಕೇರಳದ (Kerala) ಎರ್ನಾಕುಲಂ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಪ್ರಕರಣದಲ್ಲಿ (Aluva rape murder case) ತಪ್ಪಿತಸ್ಥನಾಗಿರುವ ಬಿಹಾರದ ವ್ಯಕ್ತಿಯೊಬ್ಬನಿಗೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯಡಿ ವಿಶೇಷ ನ್ಯಾಯಾಲಯವು ಇಂದು (ಮಂಗಳವಾರ) ಮರಣದಂಡನೆ ವಿಧಿಸಿದೆ. ಜುಲೈ 28 ರಂದು ಆಲುವಾದಲ್ಲಿ ನಡೆದ ಘಟನೆ ರಾಜ್ಯವನ್ನು ಬೆಚ್ಚಿಬೀಳಿಸಿತ್ತು. ಕಳೆದ ವಾರ ಕೊಚ್ಚಿಯ ಪೋಕ್ಸೊ ನ್ಯಾಯಾಲಯವು ಆರೋಪಿ ಅಶ್ವಕ್ ಆಲಂ (28) ತಪ್ಪಿತಸ್ಥ ಎಂದು ತೀರ್ಪು ನೀಡಿತ್ತು. ಕೊಲೆ ಮತ್ತು ಅತ್ಯಾಚಾರಕ್ಕೆ ಸಂಬಂಧಿಸಿದ IPC ಸೆಕ್ಷನ್ 302, 376A ಮತ್ತು 297 ಮತ್ತು POCSO ಕಾಯಿದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಆತನನ್ನು ದೋಷಿ ಎಂದು ಘೋಷಿಸಿತ್ತು.

ಘಟನೆ ನಡೆದು ಕೇವಲ 110 ದಿನಗಳ ನಂತರ ಪ್ರಕರಣದ ತೀರ್ಪು ಬಂದಿದೆ.30 ದಿನಗಳಲ್ಲಿ ತನಿಖೆ ಪೂರ್ಣಗೊಂಡಿದ್ದುಮುಂದಿನ 60 ದಿನಗಳಲ್ಲಿ ವಿಚಾರಣೆಯನ್ನು ಮಾಡಲಾಗಿತ್ತು.

ವಲಸೆ ಕಾರ್ಮಿಕ ಅಶ್ವಕ್ ಆಲಂಗೆ ವಿಶೇಷ POCSO (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ನ್ಯಾಯಾಲಯದ ನ್ಯಾಯಾಧೀಶ ಕೆ ಸೋಮನ್ ಅತೀ ಕಠಿಣ ಶಿಕ್ಷೆ ನೀಡಿದ್ದಾರೆ. ದೇಶಾದ್ಯಂತ ಮಕ್ಕಳ ದಿನಾಚರಣೆಯಂದೇ ಆತನಿಗೆ ಶಿಕ್ಷೆಯನ್ನು ಘೋಷಿಸಲಾಗಿದೆ. POCSO ಕಾಯಿದೆಯ 11 ನೇ ವಾರ್ಷಿಕೋತ್ಸವವೂ ಇದೇ ದಿನ.

ನವೆಂಬರ್ 4 ರಂದು ಆಲಂಗೆ ಶಿಕ್ಷೆ ವಿಧಿಸಿದಾಗ ಸಂತ್ರಸ್ತೆಯ ಪೋಷಕರು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಪ್ರಕರಣವು ಅಪರೂಪದಲ್ಲಿ ಅಪರೂಪ ವರ್ಗಕ್ಕೆ ಸೇರುತ್ತದೆ ಮತ್ತು ಆದ್ದರಿಂದ ಅಪರಾಧಿಗೆ ಮರಣದಂಡನೆ ವಿಧಿಸಬೇಕು ಎಂದು ಪ್ರಾಸಿಕ್ಯೂಷನ್ ವಾದಿಸಿತ್ತು.

ಚಾರ್ಜ್ ಶೀಟ್‌ನಲ್ಲಿ ಎಲ್ಲಾ 16 ಅಪರಾಧಗಳಲ್ಲಿ ಆಲಂ ತಪ್ಪಿತಸ್ಥನೆಂದು ನ್ಯಾಯಾಲಯ ತೀರ್ಪು ನೀಡಿತ್ತು.

16ರಲ್ಲಿ ಐದು ಅಪರಾಧಗಳಿಗೆ ಮರಣದಂಡನೆ ಶಿಕ್ಷೆಯಾಗುತ್ತದೆ ಎಂದು ಪ್ರಾಸಿಕ್ಯೂಷನ್ ಈ ಹಿಂದೆ ಹೇಳಿತ್ತು.

ಬಿಹಾರದ ವಲಸೆ ಕಾರ್ಮಿಕರ ಪುತ್ರಿಯಾಗಿದ್ದ ಬಾಲಕಿಯನ್ನು ಆಕೆಯ ಕುಟುಂಬದ ಬಾಡಿಗೆ ಮನೆಯಿಂದ ಅಪಹರಿಸಿದ್ದ ಆಲಂ ಆಕೆಯ ಮೇಲೆ ಅತ್ಯಾಚಾರವೆಸಗಿದ ನಂತರ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳೀಯ ಮಾರುಕಟ್ಟೆಯ ಹಿಂಭಾಗದ ಗೋಣಿಚೀಲದಲ್ಲಿ ಬಾಲಕಿ ಶವ ಪತ್ತೆಯಾಗಿತ್ತು. ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಪೊಲೀಸರು ಅಪರಾಧಿಯನ್ನು ಪತ್ತೆ ಹಚ್ಚಿದ್ದರು. ಆಲಂ ಈ ಹಿಂದೆಯೂ ಇತರ ಪೋಕ್ಸೊ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ಕೇರಳ ಪೊಲೀಸರು ಹೇಳಿದ್ದಾರೆ.

ಮಕ್ಕಳ ದಿನಾಚರಣೆಯಂದು (ನವೆಂಬರ್ 14) ಬಂದಿರುವ ತೀರ್ಪು ಮಕ್ಕಳ ಮೇಲೆ ದೌರ್ಜನ್ಯ ಎಸಗುವ ಎಲ್ಲರಿಗೂ ಎಚ್ಚರಿಕೆ ನೀಡಲಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಆ ಮಗುವಿನ ಮೇಲೆ ಪೈಶಾಚಿಕ ಕೃತ್ಯವೆಸಗಲಾಗಿದೆ. ದೂರು ನೀಡಿದ ತಕ್ಷಣ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸರ್ಕಾರವು ಬಾಲಕಿಯ ಕುಟುಂಬಕ್ಕೆ ಎಲ್ಲಾ ರಕ್ಷಣೆ ಮತ್ತು ನೆರವನ್ನು ಖಾತ್ರಿಪಡಿಸಿದೆ ಈ ರೀತಿಯ ದೌರ್ಜನ್ಯವನ್ನು ನಾಗರಿಕ ಸಮಾಜವು ಸಹಿಸುವುದಿಲ್ಲ. ಈ ರೀತಿಯ ಅಪರಾಧ ಎಸಗುವವರನ್ನು ಪ್ರತ್ಯೇಕಿಸಲು ಸಮಾಜ ಸಿದ್ಧವಾಗಬೇಕು ಎಂದು ಪಿಣರಾಯಿ ಹೇಳಿದ್ದಾರೆ.

ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಎಂ ಆರ್ ಅಜಿತ್ ಕುಮಾರ್ ಮಾತನಾಡಿ, ಅಪರಾಧಿ ದೆಹಲಿ ಮತ್ತು ಬಿಹಾರದಲ್ಲಿ ಇದೇ ರೀತಿಯ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆಯಿಂದ ತಿಳಿದುಬಂದಿದೆ.ಹಾಗಾಗಿ ಆತ ಸಾಮಾನ್ಯ ಅಪರಾಧಿ ಎಂಬುದನ್ನು ತೋರಿಸುತ್ತದೆ. ಅಂತಹ ವ್ಯಕ್ತಿಗಳು ಅಪರಾಧಗಳಲ್ಲಿ ತೊಡಗಿಸಿಕೊಂಡಾಗ, ಅವರ ಚಲನವಲನದ ಮೇಲೆ ನಿಗಾ ಇಡಲು ನಮಗೆ ಒಂದು ವ್ಯವಸ್ಥೆ ಬೇಕು ಎಂದು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist