ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಹುಭಾಷಾ ನಟಿ ಎಸ್ತರ್ ನೊರೊನ್ಹಾ ನಿರ್ದೇಶಿಸಿ ,ನವೆಂಬರ್ 17 ರಂದು ಬಿಡುಗಡೆಗೊಳ್ಳಲು ಸಜ್ಜಾದ 'ದಿ ವೆಕೆಂಟ್ ಹೌಸ್'..!

Twitter
Facebook
LinkedIn
WhatsApp
ಬಹುಭಾಷಾ ನಟಿ ಎಸ್ತರ್ ನೊರೊನ್ಹಾ ನಿರ್ದೇಶಿಸಿ ನವೆಂಬರ್ 17 ರಂದು ಬಿಡುಗಡೆಗೊಳ್ಳಲು ಸಜ್ಜಾದ 'ದಿ ವೆಕೆಂಟ್ ಹೌಸ್'..!

ಬಹುಭಾಷಾ ನಟಿ ಎಸ್ತರ್ ನೊರೊನ್ಹಾ ನಿರ್ದೇಶಿಸಿರುವ ‘ದಿ ವೆಕೆಂಟ್ ಹೌಸ್’ ಸಿನಿಮಾ ಈಗಾಗಲೇ ಬಾರಿ ಸದ್ದು ಮಾಡುತ್ತಿದ್ದು ನವೆಂಬರ್ 17ರಂದು ಬಿಡುಗಡೆಗೊಳ್ಳಲು ಸಜ್ಜಾಗಿದೆ. ಎಸ್ತರ್ ನೊರೊನ್ಹಾ ರವರು ನಿರ್ದೇಶನದ ಜೊತೆಗೆ ನಿರ್ಮಾಣ, ಸಂಗೀತ ನಿರ್ದೇಶನ, ನಟನೆ ಜವಾಬ್ದಾರಿ ಹೀಗೆ ಚಿತ್ರದ ಸಂಪೂರ್ಣ ಜವಾಬ್ದಾರಿಯನ್ನು ಅವರು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ಈಗಾಗಲೇ ‘ದಿ ವೆಕೆಂಟ್ ಹೌಸ್’ ಸಿನಿಮಾದ ಫಸ್ಟ್ ಲುಕ್ ಬಾರಿ ಸದ್ದು ಮಾಡುತ್ತಿದ್ದು ಕನ್ನಡ ಹಾಗೂ ಕೊಂಕಣಿ ಭಾಷೆಯಲ್ಲಿ ಬಿಡುಗಡೆಯಾಗಿರುವ ಮೊದಲ ಹಾಡು ಸಂಗೀತ ಪ್ರಿಯರನ್ನು ಸೆಳೆಯುತ್ತಿದೆ.

‘ದಿ ವೆಕೆಂಟ್ ಹೌಸ್’ ಸಿನಿಮಾವನ್ನು ಜೆನೆಟ್ ನರೋನಾ ಪ್ರೊಡಕ್ಷನ್ ನಡಿ ನಿರ್ಮಾಣ ಮಾಡಲಾಗಿದ್ದು, ಬಹುತೇಕ ಮಂಗಳೂರಿನಲ್ಲಿ ಚಿತ್ರೀಕರಣ ನಡೆಸಲಾಗಿದೆ. ನರೇಂದ್ರ ಗೌಡ ಛಾಯಾಗ್ರಹಣ, ವಿಜಯ್ ರಾಜ್ ಸಂಕಲನ ಸಿನಿಮಾಕ್ಕಿದೆ. ಫಸ್ಟ್ ಹಾಗೂ ಹಾಡಿನ ಮೂಲಕ ನಿರೀಕ್ಷೆ ಹೆಚ್ಚಿಸಿರುವ ‘ದಿ ವೆಕೆಂಟ್ ಹೌಸ್’ ಸಿನಿಮಾ ಇನ್ನೇನು ಎರಡು ಮೂರು ದಿನಗಳಲ್ಲಿ ತೆರೆಗೆ ಬರಲಿದೆ.

ಚಿತ್ರದ ಬಗ್ಗೆ ಎಸ್ತರ್ ನೊರೊನ್ಹಾ ಮಾತು…
 

ಲಾಕ್‌ಡೌನ್ ಸಮಯದಲ್ಲಿ ಶುರುವಾದ ಪ್ರಯತ್ನ ಇದು. ಈ ಸಿನಿಮಾದಲ್ಲಿ ಕಾಣಿಸುವುದು ನಮ್ಮ ತೋಟದ ಮನೆ. ಲಾಕ್ ಡೌನ್ ಟೈಮ್‌ನಲ್ಲಿ ನಾವು ಅಲ್ಲಿಗೆ ಶಿಫ್ಟ್ ಆಗಿದ್ದೆವು. ಆ ಸಮಯದಲ್ಲಿ ಒನ್ ಲೈನ್ ಹೊಳೆಯಿತು. ಅದನ್ನು ನಮ್ಮ ತಾಯಿ ಬಳಿ ಚರ್ಚೆ ಮಾಡಿ ಕಥೆ ಬರೆಯಲು ಶುರು ಮಾಡಿದೆ. ಕಥೆ ರೆಡಿಯಾಯ್ತು. ನಾನೇ ಸಿನಿಮಾ ಡೈರೆಕ್ಟರ್ ಮಾಡ್ತೀನಿ ಅಂದುಕೊಂಡಿರಲಿಲ್ಲ. ಕಥೆ ಬರೆದ ಮೇಲೆ ಬೇರೆ ಅವರ ಹತ್ತಿರ ರಿಕ್ವೆಸ್ಟ್ ಮಾಡುವುದು ಹೇಗೆ? ಲಾಕ್‌ಡೌನ್ ಇರೋದ್ರಿಂದ ಅವರು ಬರುವುದು ಹೇಗೆ ಎಲ್ಲಾ ಸಮಸ್ಯೆ. ಹೀಗಾಗಿ ನಾನೇ ನಿರ್ದೇಶಿಸಿದೆ. ಇದೊಂದು ಫ್ಯಾಮಿಲಿ ವೆಂಚರ್ಸ್ ಸಿನಿಮಾ. ಕೊಂಕಣಿ ಹಾಗೂ ಕನ್ನಡ ಎರಡು ಭಾಷೆಯಲ್ಲಿ ಸಿನಿಮಾ ಮಾಡಿದ್ದೇವೆ.

ಎಸ್ತರ್ ನರೋನ್ಹಾ ಮೂಲತಃ ಮಂಗಳೂರಿನವರಾದರು, ಬೆಳೆದದ್ದು ಮುಂಬೈನಲ್ಲಿ, ಉಸಿರಿಗಿಂತ ನೀನೇ ಹತ್ತಿರ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದರು. ಅನುಪಮ್ ಖೇರ್ ನಟನಾ ಶಾಲೆಯಲ್ಲಿ ಕಲಿತು ಹಿಂದಿ ಚಿತ್ರರಂಗ ಪ್ರವೇಶಿಸಿದ ಎಸ್ತರ್ ಮುಂದೆ ತೆಲುಗು, ತುಳು ಸಿನಿಮಾರಂಗದಲ್ಲಿಯೂ ಹೆಸರು ಮಾಡಿದರು. ದಿ ವೆಕೆಂಟ್ ಹೌಸ್ ಸಿನಿಮಾವನ್ನು ಜೆನೆಟ್ ನರೋನ್ಹಾ ಪ್ರೊಡಕ್ಷನ್ ನಡಿ ನಿರ್ಮಾಣ ಮಾಡಲಾಗಿದ್ದು, ಬಹುತೇಕ ಮಂಗಳೂರಿನಲ್ಲಿ ಚಿತ್ರೀಕರಣ ನಡೆಸಲಾಗಿದೆ. ನರೇಂದ್ರ ಗೌಡ ಛಾಯಾಗ್ರಹಣ, ವಿಜಯ್ ರಾಜ್ ಸಂಕಲನ ಸಿನಿಮಾಕ್ಕಿದೆ. ಫಸ್ಟ್ ಲುಕ್ ಹಾಗೂ ಹಾಡಿನ ಮೂಲಕ ನಿರೀಕ್ಷೆ ಹೆಚ್ಚಿಸಿರುವ ‘ದಿ ವೆಕೆಂಟ್ ಹೌಸ್’ ಸಿನಿಮಾ ನವೆಂಬರ್ 17 ರಂದು ತೆರೆಗೆ ಬರಲಿದೆ.

ಮಂಗಳೂರಿನಲ್ಲಿ ಇವರು ತುಳು ಚಿತ್ರಗಳಲ್ಲಿ ನಟಿಸಿ ತದನಂತರ ಕೊಂಕಣಿ ಚಿತ್ರಗಳಲ್ಲೂ ನಟಿಯಾಗಿ ಅಭಿನಯಿಸಿದ್ದಾರೆ. ಹಾಗೂ ಹಲವು ಕೊಂಕಣಿ ಆಲ್ಬಮ್ ಸಾಂಗ್ ಅನ್ನು ಮಾಡಿದ್ದಾರೆ. ಹೀಗೆ ಎಸ್ತರ್ ನೊರೊನ್ಹಾ ರವರು 7 ಬಾಷೆಗಳಲ್ಲಿ ನಟಿಸಿ. ಬಹುಭಾಷ ನಟಿ ಎಂದು ಖ್ಯಾತಿ ಪಡೆದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist